CrimeNEWSನಮ್ಮರಾಜ್ಯರಾಜಕೀಯ

ರಾಸಲೀಲೆ ಸಿಡಿ ಪ್ರಕರಣ: ರಮೇಶ್‌ ಜಾರಕಿಹೊಳಿ ವಿರುದ್ಧ ದೂರು ದಾಖಲು- ದೂರಿನಲ್ಲಿ ಯುವತಿ ಹೇಳಿರುವುದೇನು?

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಸದ್ದು ಮಾಡಿದ ಮತ್ತು ಇನ್ನೂ ಮಾಡುತ್ತಿರುವ ರಾಸಲೀಲೆ ಸಿಡಿ ಪ್ರಕರಣ ಸಂಬಂಧ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಸಂತ್ರಸ್ತ ಯುವತಿ ವಕೀಲ ಕೆ.ಎನ್‌. ಜಗದೀಶ್‌ ಅವರ ಮೂಲಕ ದೂರು ಸಲ್ಲಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಯುವತಿ ತಮ್ಮ ಕೈಯಿಂದ ಬರೆದಿರುವ ದೂರಿನ ಪ್ರತಿಯನ್ನು ನಮಗೆ ತಲುಪಿಸಿದ್ದಾರೆ. ಇದನ್ನೇ ಕಮಿಷನರ್ ಅವರಿಗೆ ನೀಡಿ ಮುಂದಿನ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದೇನೆ ಎಂದು ಜಗದೀಶ್ ತಿಳಿಸಿದರು.

ಯುವತಿಗೆ ಹಾಗೂ ಅವರ ಕುಟುಂಬದವರಿಗೆ ಜೀವ ಬೆದರಿಕೆ ಇದೆ. ಅವರಿಗೆ ಸೂಕ್ತ ಭದ್ರತೆ ನೀಡಬೇಕು. ನಂತರವೇ ಯುವತಿ ಪೊಲೀಸರ ಎದುರು ಹಾಜರಾಗಿ ಹೇಳಿಕೆ ನೀಡಲಿದ್ದಾರೆ ಎಂದು ಹೇಳಿದರು.

ದೂರಿನಲ್ಲಿ ಇರುವುದು ಏನು?
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ನನ್ನೊಂದಿಗೆ ಲೈಂಗಿಕ ಸಂಪರ್ಕ ಮಾಡಿದ್ದಾರೆ. ವಿಡಿಯೋ ಕರೆ ಮೂಲಕ ನನ್ನ ಜತೆ ಅಶ್ಲೀಲವಾಗಿ ಮಾತನಾಡಲು ಪುಸಲಾಯಿಸಿದರು. ಜತೆಗೆ ಲೈಂಗಿಕವಾಗಿಯೂ ನನ್ನನ್ನು ಬಳಿಸಿಕೊಂಡು ಕೆಲಸವನ್ನು ಕೊಡಿಸದೆ ಜೀವ ಬೆದರಿಕೆ ಹಾಕಿರುವ ಬಗ್ಗೆ ದೂರು ನೀಡುತ್ತಿದ್ದೇನೆ ಎಂದು ಯುವತಿ ಹೇಳಿದ್ದಾರೆ.

ನಾನು ಬೆಂಗಳೂರು ನಗರದಲ್ಲಿ ಉದ್ಯೋಗ ಹುಡುಕಿಕೊಂಡು ಬಂದು ನೆಲೆಸಿದ್ದು, ಕಿರುಚಿತ್ರ ಮಾಡುವ ಸಲುವಾಗಿ ಅಂದು ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಅವರನ್ನು ಒಮ್ಮೆ ಭೇಟಿ ಮಾಡಿದ್ದೆ. ನಂತರ ಅವರು ನನ್ನ ಮೊಬೈಲ್ ನಂಬರ್ ಪಡೆದು ಕರೆ ಮಾಡುವುದಾಗಿ ತಿಳಿಸಿದ್ದರು. ನಂತರ ಕರೆ ಮಾಡಿ ನನ್ನ ಬಗ್ಗೆ ಮತ್ತು ಕುಟುಂಬದ ಬಗ್ಗೆ ವಿಚಾರಿಸಿ ಸಲುಗೆಯಿಂದ ಮಾತನಾಡಲು ಆರಂಭಿಸಿದರು.

ಸಚಿವರು ನನ್ನನ್ನು ಅಷ್ಟು ಕಾಳಜಿಯಿಂದ ಮಾತನಾಡಿಸಿದ್ದು ನನಗೆ ತುಂಬಾ ಖುಷಿಯಾಯಿತು. ಹಾಗಾಗಿ ಅವರನ್ನು ಗೌರವದಿಂದ ಮಾತನಾಡಿಸಿದೆ. ಆಗಾಗೆ ನನಗೆ ಕರೆ ಮಾಡಿ ಮಾತನಾಡಲು ಆರಂಭಿಸಿದರು. ನನಗೆ ತಮ್ಮ ಪ್ರಭಾವ ಬಳಸಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿದ್ದರು. ನೀನು ನನ್ನ ಜೊತೆಗೆ ಎಲ್ಲಾ ರೀತಿಯ ಸಹಕಾರ ನೀಡಬೇಕೆಂದು ಕೇಳಿದರು.

ಅವರನ್ನು ಟಿವಿಗಳಲ್ಲಿ ನೋಡಿದ್ದು, ಮಂತ್ರಿಯೊಬ್ಬರು ಈ ರೀತಿ ಹೇಳಿದ ಮೇಲೆ ಕೆಲಸ ಕೊಟ್ಟೆ ಕೊಡಿಸುತ್ತಾರೆ ಎಂದು ನಂಬಿದೆ. ನನ್ನ ಬಳಿ ಹಣವಿಲ್ಲದೆ ಇರುವುದನ್ನು ಮುಂಚೆ ತಿಳಿದುಕೊಂಡಿದ್ದರು. ಹೀಗಾಗಿ ಹಣದ ಬದಲು ಅವರ ಜೊತೆಗೆ ಸಹಕರಿಸಿ ಖುಷಿ ನೀಡಬೇಕು ಎಂದು ಹೇಳಿದ್ದರಿಂದ ಅವರು ಕೇಳಿದಂತೆ ನಡೆದುಕೊಂಡು ಬಂದಿದ್ದೇನೆ. ಅವರು ದೆಹಲಿ ಕರ್ನಾಟಕ ಭವನದಲ್ಲಿ ಉಳಿಸಿಕೊಂಡಿದ್ದೇನೆ ಎಂದು ವಿಡಿಯೋ ಕರೆ ಮಾಡಿ ನನ್ನೊಂದಿಗೆ ಲೈಂಗಿಕ ವಿಚಾರಗಳನ್ನು ಮಾತನಾಡಿದ್ದರು ನಾನು ಅವರು ಹೇಳಿದಂತೆ ಮಾಡಿದ್ದೇನೆ.

ನಂತರ ಬೆಂಗಳೂರಿಗೆ ಬಂದು ನನ್ನ ನಿವಾಸಕ್ಕೆ ಬಾ ನಿನ್ನ ಕೆಲಸ ವಿಚಾರವಾಗಿ ಮಾತನಾಡಬೇಕು ಎಂದರು. ನಾನು ಅವರು ಹೇಳಿದ ಅಪಾರ್ಟ್ಮೆಂಟ್ಗೆ ಎರಡು ಬಾರಿ ಹೋಗಿದ್ದೆ. ಅವರು ನನ್ನೊಂದಿಗೆ ಅಶ್ಲೀಲವಾಗಿ ನಡೆದುಕೊಂಡರು. ನಾನು ಎದುರು ಮಾತನಾಡಲು ಹೆದರಿ ಅವರು ಹೇಳಿದಂತೆ ಮಾಡಿರುತ್ತೇನೆ. ಸರಕಾರಿ ನೌಕರಿ ಬಗ್ಗೆ ಕೇಳಿದಾಗ ಸ್ವಲ್ಪ ಹಣ ಬೇಕಾದರೆ ಕೇಳು ಕೆಲಸದ ಬಗ್ಗೆ ಆಮೇಲೆ ನೋಡೋಣ ಎಂದು ಹೇಳಿದ್ದರು.

ಇದಾದ ಕೆಲ ದಿನಗಳ ಬಳಿಕ ವಿಡಿಯೋಗಳು ಮಾಧ್ಯಮಗಳಲ್ಲಿ ಪ್ರಸಾರವಾಗಿವೆ. ನಾನು ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡದಂತೆ ಈ ರೀತಿ ಕುತಂತ್ರವನ್ನು ಮಾಡಿದ್ದಾರೆ. ಹಣವಂತರು ಪ್ರಭಾವಿಗಳಾದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಂದ ನನಗೂ ಮತ್ತು ಕುಟುಂಬದವರಿಗೂ ಜೀವ ಬೆದರಿಕೆ ಇದೆ.

ನಾನು ದೂರು ನೀಡದಂತೆ ತಡೆಯಲು ಮತ್ತು ಅವರ ಕೈಗೆ ಸಿಕ್ಕರೆ ಕೊಂದು ಬಿಡಲು ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ. ದಯಮಾಡಿ ತಾವು ನನಗೆ ಮತ್ತು ನನ್ನ ಕುಟುಂಬದ ಸದಸ್ಯರಿಗೆ ಭದ್ರತೆ ನೀಡಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡು ಕೆಲಸ ಕೊಡಿಸದೆ ಮೋಸ ಮಾಡಿರುವ ರಮೇಶ್ ಜಾರಕಿಹೊಳಿ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡುತ್ತೇನೆ.

ನಾನು ನೇರವಾಗಿ ಯಾವ ಪೊಲೀಸ್ ಠಾಣೆಗೂ ಬಂದು ದೂರು ನೀಡದಂತೆ ಪೊಲೀಸ್ ಇಲಾಖೆಯನ್ನು ಬಳಸಿಕೊಳ್ಳುತ್ತಿದ್ದಾರೆ. ನನ್ನ ಪರವಾಗಿ ಯಾರೂ ಮಾತನಾಡದಂತೆ ತೇಜೋವಧೆ ಮಾಡುತ್ತಿದ್ದಾರೆ. ನನಗೆ ಸಹಾಯ ಮಾಡಿದವರಿಗೆ ಮತ್ತು ಅವರ ಕುಟುಂಬಸ್ಥರಿಗೆ ಹಿಂಸೆ ಕೊಡುತ್ತಿರುವುದರಿಂದ ಬಹಳ ನೋವಾಗಿದೆ.

ನನ್ನ ಭದ್ರತೆ ಇಲ್ಲದ ಕಾರಣ ಕೈಯಲ್ಲಿ ಬರೆದು ಈ ದೂರನ್ನು ನನಗೆ ಪರಿಚಿತ ವಕೀಲರಾದ ಜಗದೀಶ್ ಅವರ ಮೂಲಕ ಕಳುಹಿಸಿದ್ದೇನೆ ರಮೇಶ್ ಜಾರಕಿಹೊಳಿ ಮತ್ತು ಅವರ ಕುಟುಂಬದಿಂದ ನನಗೆ ಯಾವುದೇ ಅಪಾಯವಾಗದಂತೆ ರಕ್ಷಣೆ ನೀಡಬೇಕೆಂದು ಮನವಿ ಮಾಡುತ್ತೇನೆ ಎಂದು ಯುವತಿ ದೂರಿನಲ್ಲಿ ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ