ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಆಕ್ಷೇಪಾರ್ಹ ಹೇಳಿಕೆಗೆ ಕ್ಷಮೆ ಕೇಳುವಂತೆ ಪಟ್ಟು
ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಯದು ಎನ್ನಲಾದ ರಾಸಲೀಲೆ ಸಿಡಿ ಪ್ರಕರಣದ ಸಂಬಂಧ ಶನಿವಾರ ಸಂತ್ರಸ್ತ ಯುವತಿಯ ಪಾಲಕರು ಮಾಧ್ಯಮಗಳ ಮುಂದೆ ಕೆಪಿಸಿಸಿ ಅಧ್ಯಕ್ಷ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ನೇರ ಆರೋಪ ಮಾಡಿದ್ದು, ಈ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಡಿಕೆಶಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದನ್ನು ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಶನಿವಾರ ಸಂಜೆ ವೇಳೆಗೆ ಹೊಸ ಬಾಂಬ್ ಸಿಡಿಸುತ್ತೇನೆ ಎಂದು ಹೇಳಿದ್ದ ರಮೇಶ್ ಅದರಂತೆ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ನನ್ನ ವಿರುದ್ಧ ರಾಸಲೀಲೆ ಸಿಡಿ ಷಡ್ಯಂತ್ರ ನಡೆಸಿರುವ ಡಿಕೆಶಿ ಒಬ್ಬ ಗಾಂಡು. ನಾನು ಗಂಡಸು. ರಾಜಕೀಯಕ್ಕೆ ಶಿವಕುಮಾರ್ ನಾಲಾಯಕ್ಕು ಎಂದು ಗಂಭೀರ ಆರೋಪ ಮಾಡಿದ್ದರು.
ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಆಕ್ಷೇಪಾರ್ಹ ಪದ ಪ್ರಯೋಗ ಮಾಡಿರುವ ರಮೇಶ್ ಜಾರಕಿಹೊಳಿ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಸದಾಶಿವನಗರದಲ್ಲಿರುವ ರಮೇಶ್ ಮನೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ವೇಳೆ ಕೆಲ ಕಾರ್ಯಕರ್ತರನ್ನು ಪೊಲೀಸಿದ್ದರು. ಆದರೆ , ಅದನ್ನು ಲೆಕ್ಕಿಸದೆ ಇನ್ನಷ್ಟು ಮಂದಿ ರಕ್ಷ ರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ.
ಇನ್ನು ಯಾವುದೇ ಅನುಮತಿ ಪಡೆಯದೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಪೊಲೀಸರು ರಕ್ಷ ರಾಮಯ್ಯ ಅವರನ್ನು ಬಂಧಿಸಿದ್ದಾರೆ. ಈ ನಡುವೆ ರಮೇಶ್ ಅವರನ್ನು ಬಂಧಿಸಿ ಎಂದು ಘೋಷಣೆ ಕೂಗುತ್ತಿದ್ದಾರೆ.
ಡಿಕೆಶಿ ಮನೆಗೆ ಕಾರ್ಯಕರ್ತರ ರಕ್ಷಣೆ
ಇನ್ನು ಬಿಜೆಪಿ ಕಾರ್ಯಕರ್ತರು ಸದಾಶಿವ ನಗರದಲ್ಲಿರುವ ಡಿಕೆಶಿ ಮನೆ ಮುಂದೆ ಪ್ರತಿಭಟನೆ ಮಾಡುವ ಸಾಧ್ಯತೆ ಇದೆ ಎಂದು ಕೈ ಕಾರ್ಯಕರ್ತರು ಶಿವಕುಮಾರ್ ಮನೆಗೆ ಭದ್ರತೆ ಒದಗಿಸಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಕೆಎಸ್ಆರ್ಪಿ ತುಕಡಿಯನ್ನು ನಿಯೋಜನೆ ಮಾಡಲಾಗಿದೆ.
ಇನ್ನು ಮಂಡ್ಯದಲ್ಲೂ ಅಸಭ್ಯ ಪದ ಬಳಕೆ ಮಾಡಿರುವುದಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ. ಆದರೆ ಕೈ ಕಾರ್ಯಕರ್ತರು ಅವರು ಹೇಳಿಕೆ ವಾಪಸ್ ಪಡೆಯುತ್ತಿದ್ದೇನೆ ಎಂದು ಹೇಳುವುದು ಬೇಕಿಲ್ಲ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
ಮಂಡ್ಯದಲ್ಲೂ ರಮೇಶ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕೈ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Related
You Might Also Like
ಚನ್ನರಾಯಪಟ್ಟಣ ರೈತ ನಿಯೋಗದಿಂಸ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ
ಸರ್ಕಾರ ರೈತರ ಪರವಾಗಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗವು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್....
KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..!
ಪಾಪಾ ಸಂಬಳ ಸಾಲುತ್ತಿಲ್ಲವಂತೆ ಅದಕ್ಕೆ ಹೆಚ್ಚಿಗೆ ಸಂಬಳ ಪಡೆಯುತ್ತಿರುವ ಟಿಸಿಗಳ ಕಾಲು ಹಿಡಿದು ಭಿಕ್ಷೆ ಬೇಡುತ್ತಿದ್ದಾರೆ ಪಾಪಿಗಳು ನಾಚಿಕೆ ಬಿಟ್ಟು ಟಿಸಿಗಳ ಸುಲಿಗೆ ಮಾಡುವ ಇಂಥ ನಾಲಾಯಕ್...
ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಅರ್ಜಿಗಳನ್ನು ಕಾಲಮಿತಿಯೊಳಗಾಗಿ ವಿಲೇವಾರಿ ಮಾಡಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆ ವ್ಯಾಪ್ತಿಯ ವಿವಿಧ ವಿಷಯಗಳಿಗೆ...
ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ
ನ್ಯೂಡೆಲ್ಲಿ: ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅವರು ಇಪಿಎಸ್-95 ರಾಷ್ಟ್ರೀಯ ಹೋರಾಟ ಸಮಿತಿಯ ನಿಯೋಗದೊಂದಿಗೆ ಶನಿವಾರ ಸಭೆ ನಡೆಸಿದ್ದಾರೆ. ಆ ಸಭೆಯಲ್ಲಿ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ...
ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮದ ನೌಕರರನ್ನು ಪದೇಪದೆ ಕಾರ್ಮಿಕರು ಎಂದು ಕರೆಯುವ ಈ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಗೆ ನಿಜವಾಗಲು ನೌಕರರ ಬಗ್ಗೆ...
ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ
ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಚಾಲಕರಿಗೆ 34100 ರೂಪಾಯಿ ಸಂಚಿತ ವೇತನ ನಿಗದಿ ಮಾಡಿರುವ ಸರ್ಕಾರ ಕಳೆದ ನವೆಂಬರ್ 1ರಿಂದಲೇ...
ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಯ ನಾಲ್ಕೂ ನಿಗಮಗಳಲ್ಲಿ 01.01.2020 ರಿಂದ 28.02.2023 ರವರೆಗಿನ ಅವಧಿಯಲ್ಲಿ ಸಂಸ್ಥೆಯ ಸೇವೆಯಿಂದ ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ/ನೌಕರರಿಗೆ ಪರಿಷ್ಕೃತ...
BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿ/ಸಿಬ್ಬಂದಿಗಳಿಗೆ ಇದೇ ಡಿಸೆಂಬರ್ 20ರಂದು ಬಾಕಿ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಸಲು ವ್ಯವಸ್ಥಾಪಕ ನಿರ್ದೇಶಕ ಆರ್. ರಾಮಚಂದ್ರನ್ ಇಂದು...
KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳು ಸೇವೆಯಲ್ಲಿರುವಾಗ ಅಪಘಾತ ಅಥವಾ ಸ್ವಾಭಾವಿಕವಾಗಿ ಮರಣ ಹೊಂದಿದಲ್ಲಿ ಕುಟುಂಬದವರಿಗೆ ಹೆಚ್ಚಿನ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ, ಕೆನರಾ...
KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ
ಕಲಬುರಗಿ: ನಗದು ರಹಿತ ಚಿಕಿತ್ಸೆಗಾಗಿ ಅವಶ್ಯಕವಿರುವ ಸಿಬ್ಬಂದಿಗಳ ವೈಯಕ್ತಿಕ ಹಾಗೂ ಅವರ ಅವಲಂಬಿತರ ಮಾಹಿತಿಯನ್ನು ಸಂಗ್ರಹಿಸಿ ತಂತ್ರಾಂಶದಲ್ಲಿ ನಮೂದಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ...
ಹೈಕೋರ್ಟ್ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ
ದಾವಣಗೆರೆ: ಹೈಕೋರ್ಟ್ ಆದೇಶದ ಬೆನ್ನಲ್ಲೇ ಶಾಸಕ ಸಿ.ಟಿ.ರವಿ ಅವರನ್ನು ದಾವಣಗೆರೆಯಲ್ಲಿ ಪೊಲೀಸರು ಬಿಡುಗಡೆ ಮಾಡಿದ್ದು. ಅಲ್ಲೇ ನೆರದಿದ್ದ ನೂರಾರು ಬಿಜೆಪಿ ಕಾರ್ಯಕರ್ತರು ಸಿ.ಟಿ.ರವಿಗೆ ಅದ್ದೂರಿ ಸ್ವಾಗತ ಕೋರಿದರು. ಸದನದಲ್ಲಿ...
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ
ಮಂಡ್ಯ: ಸಕ್ಕರೆ ನಾಡಿನಲ್ಲಿ ಮೂರು ದಿನಗಳ ಕಾಲ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಾಳೆ ಅಂದರೆ ಶುಕ್ರವಾರ (ಡಿ.20) ಚಾಲನೆ ಸಿಗಲಿದೆ. ಈ...