Please assign a menu to the primary menu location under menu

NEWSನಮ್ಮಜಿಲ್ಲೆರಾಜಕೀಯ

ರಾಸಲೀಲೆ ಸಿಡಿ ಪ್ರಕರಣ: ಆಕೆಯೇನು ವಿಜಯಮಲ್ಯನೋ? ಇಲ್ಲವೇ ನೀರವ್ ಮೋದಿಯೋ?

ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು: ಸರ್ಕಾರ, ಪೊಲೀಸರ ವೈಫಲ್ಯವೇ ಕಾರಣ ಎಂದು ವಿಪಕ್ಷ ನಾಯಕ ಕಿಡಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಸಿಡಿ ಪ್ರಕರಣದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು ಆಗುತ್ತಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ಪೊಲೀಸರ ವೈಫಲ್ಯವೇ ಕಾರಣ. ಸಿಡಿ ಮಾಧ್ಯಮದಲ್ಲಿ ಕಾಣಿಸಿಕೊಂಡು 26 ದಿನಗಳು ಕಳೆದರೂ ಸಂತ್ರಸ್ತೆ ಯುವತಿಯನ್ನು ಪೊಲೀಸರಿಗೆ ಪತ್ತೆಹಚ್ಚಲಿಕ್ಕಾಗದಿರುವುದು ನಾಚಿಕೆಗೇಡಿನ ಸಂಗತಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ದಿನಕ್ಕೊಂದು ತಿರುವು ಪಡೆದು ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿರುವ ಸಿಡಿ ಹಗರಣದ ತನಿಖೆ ತಾರ್ಕಿಕ ಅಂತ್ಯ ಕಾಣಬೇಕಾದರೆ ಸಂತ್ರಸ್ತ ಯುವತಿ ಅಜ್ಞಾತ ಸ್ಥಳದಿಂದ ಹೊರಬಂದು ಪೊಲೀಸರ ಮುಂದೆ ಹಾಜರಾಗಿ ಹೇಳಿಕೆ ನೀಡಬೇಕು. ಕಾನೂನು ಬದ್ಧವಾದ ಅವಳ ಹಕ್ಕನ್ನು ಚಲಾಯಿಸದಂತೆ ತಡೆಯುತ್ತಿರುವವರು ಯಾರು. ಇದನ್ನು ಪತ್ತೆ ಹಚ್ಚುವಲ್ಲಿ ಏಕೆ ಸಾಧ್ಯವಗುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಸಿಡಿಯಲ್ಲಿರುವ ಯುವತಿ ಅಜ್ಞಾತ ಸ್ಥಳದಿಂದ ನಿರಂತರವಾಗಿ ತನ್ನ ಹೇಳಿಕೆಗಳ ಸಿಡಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತಿದ್ದಾಳೆ. ತನ್ನ ವಕೀಲನ ಮೂಲಕ ಪೊಲೀಸರಿಗೆ ದೂರು ಕಳುಹಿಸಿಕೊಡುತ್ತಿದ್ದಾಳೆ. ತಂದೆ-ತಾಯಿ ಜೊತೆ ಮಾತನಾಡುತ್ತಿದ್ದಾಳೆ. ಹೀಗಿದ್ದರೂ ಪೊಲೀಸರ ಕೈಗೆ ಮಾತ್ರ ಸಿಗುತ್ತಿಲ್ಲ ಎಂದರೆ ಏನು ಅರ್ಥ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮಾಧ್ಯಮಗಳಲ್ಲಿ ಪ್ರಕಟ/ಪ್ರಸಾರವಾಗಿರುವ ಯುವತಿಯದ್ದೆನ್ನಲಾದ ಹೇಳಿಕೆಗಳನ್ನು ಗಮನಿಸಿದರೆ ಆಕೆಗೆ ರಾಜ್ಯ ಸರ್ಕಾರದ ಮೇಲಾಗಲಿ, ಪೊಲೀಸರ ಮೇಲಾಗಲಿ ನಂಬಿಕೆ ಇಲ್ಲ. ಪೊಲೀಸರು ತನ್ನ ವಿರುದ್ಧವೇ ಸಂಚು ಮಾಡುತ್ತಿದ್ದಾರೆಂಬ ಅರ್ಥದಲ್ಲಿ ಯುವತಿ ಮಾತನಾಡುತ್ತಿದ್ದಾಳೆ. ಗೃಹಸಚಿವ @BSBommai ಈ ಬಗ್ಗೆ ಗಮನಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದ ಪೊಲೀಸ್ ಇಲಾಖೆಯೂ ಸೇರಿದಂತೆ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿರುವುದಕ್ಕೆ ಈ ಸಿಡಿ ಹಗರಣ ಸಾಕ್ಷಿ. ಸಾಮಾನ್ಯ ಕುಟುಂಬದಿಂದ ಬಂದಿರುವ ಯುವತಿಯನ್ನು ಇಷ್ಟು ದಿನಗಳ ನಂತರವೂ ಪತ್ತೆ ಹಚ್ಚಲಾಗಿಲ್ಲವೆಂದರೆ ಏನು ಅರ್ಥ? ಆಕೆಯೇನು ವಿಜಯಮಲ್ಯನೋ ಇಲ್ಲವೇ ನೀರವ್ ಮೋದಿಯೋ? ಎಂದು ಪ್ರಶ್ನಿಸಿದ್ದಾರೆ.

Leave a Reply

error: Content is protected !!
LATEST
ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್ ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ