NEWSನಮ್ಮರಾಜ್ಯರಾಜಕೀಯ

ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಕಾರಿಗೆ ಕಲ್ಲು, ಚಪ್ಪಲಿ ತೂರಿದ ಕಿಡಿಗೇಡಿಗಳು: ಸಿದ್ದರಾಮಯ್ಯ ಖಂಡನೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ಕಾರಿನ ಮೇಲೆ ಬೆಳಗಾವಿಯಲ್ಲಿ ನಡೆದ ಕಲ್ಲುತೂರಾಟವನ್ನು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಖಂಡಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ಬಗ್ಗೆ ಟ್ವೀಟ್‌ ಮಡಿರುವ ಅವರು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಅಭಿಮಾನಿಗಳೆಂದು ಹೇಳಿಕೊಂಡವರು ಶಿವಕುಮಾರ್‌ ಕಾರುಗಳ ಮೇಲೆ ಕಲ್ಲೆಸೆದು ಪುಂಡಾಟಿಕೆ ನಡೆಸಿರುವುದು ನಾಚಿಕೆಗೇಡಿನ ಸಂಗತಿ ಎಂದಿದ್ದಾರೆ.

ಇದು ಬಿಜೆಪಿ ಪ್ರಾಯೋಜಿತ ಗೂಂಡಾಗಿರಿ. ರಾಜ್ಯದ ಜನ ಗಮನಿಸುತ್ತಿದ್ದಾರೆ, ಎಚ್ಚರ ಇರಲಿ. ಬಿಜೆಪಿ ಸರ್ಕಾರದ ಆಳ್ವಿಕೆಯಲ್ಲಿ ವಿಪಕ್ಷದ ರಾಜ್ಯಾಧ್ಯಕ್ಷರಿಗೆ ರಕ್ಷಣೆ ಇಲ್ಲ ಎಂದಾದರೆ ಸಾಮಾನ್ಯ ಜನರ ಪಾಡೇನು ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಪೊಲೀಸರ ಮೇಲೆ ನನಗೆ ನಂಬಿಕೆ ಇಲ್ಲ ಎಂಬ ಸಿಡಿ ಹಗರಣದ ಯುವತಿಯ ಹೇಳಿಕೆಯನ್ನು ಸಮರ್ಥಿಸುವಂತಿದೆ ಬೆಳಗಾವಿ ಪೊಲೀಸರ ‘ಮೂಕನಾಟಕ’ ಎಂದು ಕಿಡಿಕಾರಿದ್ದಾರೆ.

ಇದಕ್ಕೂ ಮೊದಲು ಸಾಂಬ್ರಾ ವಿಮಾನ ನಿಲ್ದಾಣದಿಂದ ನಗರದತ್ತ ತೆರಳುತ್ತಿದ್ದ ಶಿವಕುಮಾರ್‌ ಅವರ ವಾಹನಕ್ಕೆ ಮುತ್ತಿಗೆ ಹಾಕಲು ರಮೇಶ್‌ ಬೆಂಗಬಲಿಗರು ಯತ್ನಿಸಿದರು. ಅವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

ಈ ನಡುವೆ ಶಿವಕುಮಾರ್‌ ಅವರ ಕಾರಿಗೆ ಕೆಲ ಕಿಡಿಗೇಡಿಗಳು ಕಲ್ಲು ಚಪ್ಪಲಿಯನ್ನು ತೂರಿದ್ದಾರೆ. ಈ ವೇಳೆ ಪೊಲೀಸರುಯ ಲಘು ಲಾಠಿ ಪ್ರಹಾರ ಸಹ ನಡೆಸಬೇಕಾಯಿತು. ಈ ಮೂಲಕ ಕಿಡಿಗೇಡಿಗಳು ಡಿಕೆಶಿ ಕಾರಿನತ್ತ ನುಗ್ಗದಂತೆ ಪೊಲೀಸರು ತಡೆದರು.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ