CrimeNEWSನಮ್ಮಜಿಲ್ಲೆ

ಮೈಸೂರು- ಮದುವೆಗೆ ಹೊರಟಿದ್ದ ವಾಹನ ಪಲ್ಟಿ: ಇಬ್ಬರು ಬಾಲಕಿಯರು ಮೃತ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಮದುವೆ ದಿಬ್ಬಣಕ್ಕೆ ಹೊರಟ್ಟಿದ್ದ ವಾಹನ ಪಲ್ಟಿಯಾಗಿ ಇಬ್ಬರು ಬಾಲಕಿಯರು ಮೃತಪಟ್ಟಿರುವ ಘಟನೆ ಕೆ.ಆರ್.ನಗರ ತಾಲೂಕಿನ ಹೊಸೂರು-ಹಳಿಯೂರು ರಸ್ತೆ ಬಳಿ ಭಾನುವಾರ ತಡರಾತ್ರಿ ನಡೆದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕುಪ್ಪೆ ಗ್ರಾಮದ ಕೃಷ್ಣಯ್ಯ ಅವರ ಪುತ್ರಿಯರಾದ ಪುಷ್ಪಲತಾ (10), ಪಲ್ಲವಿ (9) ಮೃತ ಮಕ್ಕಳು. ಅಪಘಾತದಲ್ಲಿ ವಾಹನದಲ್ಲಿದ್ದ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಶ್ರೀರಾಂಪುರ ಗ್ರಾಮದ ಕಲ್ಯಾಣ ಮಂಟಪದಲ್ಲಿ ಮದುವೆಗಾಗಿ ಕುಪ್ಪೆ ಗ್ರಾಮದಿಂದ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಟ್ಟೆಪುರ ನಾಲೆಗೆ ವಾಹನ ಬಿದ್ದಿದೆ.

ಅದೃಷ್ಟವಶಾತ್ ವಾಹನದಲ್ಲಿದ್ದ ಮದುಮಗಳು ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕೆ.ಆರ್.ನಗರ ಆಸ್ವತ್ರೆಗೆ ದಾಖಲಿಸಲಾಗಿದೆ.

ಘಟನೆ ಬಳಿಕ ವಾಹನ ಚಾಲಕ ಪರಾರಿಯಾಗಿದ್ದಾನೆ. ಕೆ.ಆರ್. ನಗರ ಮತ್ತು ಚುಂಚನಕಟ್ಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಕೆ ಆರ್ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಆರಂಭಿಸಿದ್ದಾರೆ.

Leave a Reply

error: Content is protected !!
LATEST
ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ