CrimeNEWSನಮ್ಮರಾಜ್ಯರಾಜಕೀಯ

ರಾಸಲೀಲೆ ಸಿಡಿ ಪ್ರಕರಣ: ಸಂತ್ರಸ್ತೆ ಪ್ರಾಣಕ್ಕೆ ಆಪಾಯವಾದರೆ ಸರ್ಕಾರವೇ ಹೊಣೆ- ಸಿದ್ದರಾಮಯ್ಯ ಎಚ್ಚರಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಸಿಡಿ ಪ್ರಕರಣದ ಯುವತಿ ಪ್ರಾಣಕ್ಕೇನಾದರೂ ಅಪಾಯ ಎದುರಾದರೆ ರಾಜ್ಯ ಸರ್ಕಾರವೇ ಸಂಪೂರ್ಣವಾಗಿ ಹೊಣೆಯಾಗಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ಸಿಡಿ ಹಗರಣದ ಯುವತಿ ತನಗೆ ಪ್ರಾಣ ಭಯ ಇದೆ ಎಂದು ರಾಜ್ಯದ ಹೈಕೋರ್ಟ್ ಮುಖ್ಯನ್ಯಾಯಾಧೀಶರಿಗೆ ಬರೆದಿದ್ದಾರೆನ್ನಲಾದ ಪತ್ರ ಗಾಬರಿ ಹುಟ್ಟಿಸುವಂತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಅವರೇ ರಾಜ್ಯದಲ್ಲಿ ನಿಮ್ಮ ಸರ್ಕಾರ ಅಸ್ತಿತ್ವದಲ್ಲಿದೆಯೇ ಎಂದು ಸರಣಿ ಟ್ವೀಟ್‌ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂತ್ರಸ್ಥ ಯುವತಿ ಪ್ರಾರಂಭದ ಆಡಿಯೋದಲ್ಲಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದೆ ಎಂದು ಹೇಳಿದ್ದಳು. ಈಗ ತನಗೆ ಪ್ರಾಣಭಯ ಇದೆ ಎಂದು ಪತ್ರ ಬರೆದಿದ್ದಾಳೆ. ಆ ಯುವತಿಯ ಪ್ರಾಣಕ್ಕೇನಾದರೂ ಅಪಾಯ ಎದುರಾದರೆ ರಾಜ್ಯದ ಮುಖ್ಯಮಂತ್ರಿ ಬಿಎಸ್‌ವೈ, ಗೃಹಸಚಿವ ಬಸವರಾಜ ಬೊಮ್ಮಾಯಿ, ಮತ್ತು ಇಡೀ ಸರ್ಕಾರವೇ ಹೊಣೆಯಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಹೈಕೋರ್ಟ್ ಮುಖ್ಯನ್ಯಾಯಾಧೀಶರಿಗೆ ಸಂತ್ರಸ್ತ ಯುವತಿ ಬರೆದ ಪತ್ರದಲ್ಲಿ ಎಸ್.ಐ.ಟಿ ಮೇಲೆಯೇ ಅಪನಂಬಿಕೆ ವ್ಯಕ್ತಪಡಿಸಿರುವುದು ಮಾತ್ರವಲ್ಲ, ಅವರು ಸಾಕ್ಷ್ಯನಾಶ ಮಾಡುತ್ತಿದ್ದಾರೆ. ತನ್ನ ವಿರೋಧಿಗಳ ಜೊತೆ ಶಾಮೀಲಾಗಿದ್ದಾರೆ ಎಂದೆಲ್ಲ ಆರೋಪಿಸಿರುವುದು ಗಂಭೀರವಾದ ವಿಷಯ.

ಆ ಯುವತಿ ನಿರಂತರವಾಗಿ ವಿಡಿಯೋ, ಪತ್ರಗಳನ್ನು ಬಿಡುಗಡೆ ಮಾಡುತ್ತಿದ್ದರೆ, ರಾಜ್ಯದ ಸರ್ಕಾರ ಮತ್ತು ಗೃಹ ಸಚಿವ ಮತ್ತು ಪೊಲೀಸರು ನಿರಂತರವಾಗಿ ಸಭೆ ನಡೆಸುತ್ತಿದ್ದಾರೆ. ಇದರ ಫಲಿತಾಂಶ ಏನು ಎಂದು ಪ್ರಶ್ನಿಸಿದ್ದಾರೆ.

ಸಿಡಿ ಬಹಿರಂಗಗೊಂಡು 27 ದಿನಗಳು ಕಳೆದರೂ ಹಗರಣದ ಕೇಂದ್ರವ್ಯಕ್ತಿಯಾದ ಸಂತ್ರಸ್ತ ಯುವತಿಯ ವಿಚಾರಣೆ ನಡೆಸಲು ಸಾಧ್ಯವಾಗದ ಪೊಲೀಸರ ವೈಫಲ್ಯಕ್ಕೆ ಯಾರು ಹೊಣೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇನ್ನು ಪ್ರಭಾವ ಬೀರುತ್ತಿರುವವರು ಯಾರು? ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಕುಸಿದು ಬಿದ್ದಿರುವುದಕ್ಕೆ ಬೇರೆ ಸಾಕ್ಷಿ ಬೇಕೇ ಎಂದು ಕಿಡಿಕಾರಿದ್ದಾರೆ.

Leave a Reply

error: Content is protected !!
LATEST
ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ