NEWSನಮ್ಮಜಿಲ್ಲೆಸಂಸ್ಕೃತಿ

ಬಾಲ್ಯ ವಿವಾಹಕ್ಕೆ ಬ್ರೀಕ್‌ ಹಾಕಲು ಎಚ್ಚರವಹಿಸಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಜಯಶ್ರೀ ಪಾಟೀಲ ಕರೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಹಾವೇರಿ: ಮಕ್ಕಳ ರಕ್ಷಣೆಯ ಕಾರ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಮಹತ್ವದಾಗಿದೆ. ಬಾಲ್ಯ ವಿವಾಹ ನಡೆಯದಂತೆ ಎಚ್ಚರ ವಹಿಸಬೇಕು ಎಂದು ರಾಣೇಬೆನ್ನೂರು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಜಯಶ್ರೀ ಪಾಟೀಲ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತಾಶ್ರಯದಲ್ಲಿ ಕುಪ್ಪೇಲೂರು ಹೋಬಳಿ ಮಟ್ಟದ ಅಂಗನವಾಡಿ ಕಾರ್ಯಕರ್ತೆಯರಿಗೆ ಹಲಗೇರಿ ಗ್ರಾಮದ ಹಾಲಸಿದ್ದೇಶ್ವರ ಸಮುದಾಯ ಭವನದಲ್ಲಿ ಜರುಗಿದ ಪೋಕ್ಸೋ ಕಾಯ್ದೆ-2012 ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಕುರಿತು ಒಂದು ದಿನದ ಸಾಮಥ್ರ್ಯಾಭಿವೃದ್ಧಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬಾಲ್ಯ ವಿವಾಹ, ಮಕ್ಕಳ ಮಾರಾಟ, ಬಾಲ ಕಾರ್ಮಿಕರನ್ನು ಗುರುತಿಸಿ ತಡೆಯುವಲ್ಲಿ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು. ಸೊನ್ನೆಯಿಂದ 18 ವರ್ಷದೊಳಗಿನ ಮಕ್ಕಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಎಲ್ಲರೂ ಕೈಜೋಡಿಸಿ ಮಕ್ಕಳ ರಕ್ಷಣೆ ಮಾಡೋಣ ಎಂದು ಸಲಹೆ ನೀಡಿದರು.

ಉದ್ಘಾಟನೆ ನೆರವೇರಿಸಿದ ಹಲಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೇತ್ರಾ ಮುದಿನಾಯ್ಕರ್ ಮಾತನಾಡಿ, ಗ್ರಾಮಗಳಲ್ಲಿ ಮಕ್ಕಳ ಸಮಸ್ಯೆಗಳು ಕಂಡು ಬಂದರೆ ಕೂಡಲೇ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಹೇಳಿದರು.

ಹಲಗೇರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿ.ಎಚ್.ಕುದರಿಹಾಳ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ಇಂತಹ ತರಬೇತಿಯಲ್ಲಿ ಭಾಗವಹಿಸಿ ತಮ್ಮ ಕ್ಷೇತ್ರದಲ್ಲಿ ಯಾವುದೇ ಘಟನೆಗಳು ನಡೆಯದಂತೆ ನಿಗಾವಹಿಸಬೇಕು ಎಂದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಎಂ.ಬಿ.ಬಸವನಾಯ್ಕ “ಪೊಕ್ಸೊ ಕಾಯ್ದೆ2012” ಹಾಗೂ ಮಕ್ಕಳ ಸಹಯವಾಣಿಯ ಮಾರುತಿ ಹರಿಜನ “ಬಾಲ್ಯ ವಿವಾಹ ನಿಷೇಧ ಕಾಯ್ದೆ-2006” ಕುರಿತು ಉಪನ್ಯಾಸ ನೀಡಿದರು.

ಹಾವೇರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಮಾಜ ಕಾರ್ಯಕರ್ತೆ ರೇಣುಕಾ ಬಿದರಗಡ್ಡಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಿನಯ್ ಗುಡಗೂರ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ  ಶೋಭಾ.ಬಿ.ಎಸ್, ಮಾರುತಿ ಹರಿಜನ, ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಮೇಲ್ವಿಚಾರಕಿಯರು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...