CrimeNEWSರಾಜಕೀಯ

ಸರ್ಕಾರದ ನಿರ್ಲಕ್ಯ್ಷದಿಂದ ಕ್ಯಾಬ್‌ ಚಾಲಕ ಪ್ರತಾಪ್‌ ಆತ್ಮಹತ್ಯೆ : ಎಚ್‌ಡಿಕೆ ಆರೋಪ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಸರ್ಕಾರದ ನಿರ್ಲಕ್ಷ್ಯಕ್ಕೆ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ (ಕೆಎಸ್‌ಟಿಡಿಸಿ) ಕ್ಯಾಬ್‌ ಚಾಲಕ ಪ್ರತಾಪ್‌ ಜೀವ ಬಲಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊರ ಭಾಗದಲ್ಲಿ ಪ್ರತಾಪ್‌ ಕಾರಿನಲ್ಲೇ ಮೈಮೇಲೆ ಪೆಟ್ರೋಲ್‌ ಸುರಿದುಕೊಂಡು ಮಂಗಳವಾರ ಆತ್ಮಹತ್ಯೆಗೆ ಯತ್ನಿಸಿದ್ದು. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ತಡರಾತ್ರಿ ಅಸುನೀಗಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಎಚ್‌ಡಿಕೆ, ಬಾಡಿಗೆ ದೊರೆಯದೇ ಆರ್ಥಿಕ ಸಂಕಷ್ಟಕ್ಕೀಡಾಗಿದ್ದ ಚಾಲಕ ಪ್ರತಾಪ್‌ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಮಧ್ಯರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ. ಪ್ರತಾಪ್‌ ಅವರ ಸಾವಿನೊಂದಿಗೆ ಕೆಎಸ್‌ಟಿಡಿಸಿ ಚಾಲಕರ ಸಮಸ್ಯೆಗಳು ತೆರೆದುಕೊಂಡಿವೆ ಎಂದು ಹೇಳಿದ್ದಾರೆ.

ಕ್ಯಾಬ್‌ ಉದ್ಯಮದ ದರ ಸಮರ, ಸರ್ಕಾರದ ನಿರ್ಲಕ್ಷ್ಯಕ್ಕೆ ಪ್ರತಾಪ್‌ ಜೀವ ಬಲಿಯಾಗಿದೆ. ಟ್ಯಾಕ್ಸಿ, ಕ್ಯಾಬ್‌ಗಳಿಗೆ ಸರ್ಕಾರ 1 ಕಿ.ಮೀಗೆ ₹24 ದರ ನಿಗದಿ ಮಾಡಿದೆ. ಕೆಎಸ್‌ಟಿಡಿಸಿ ಚಾಲಕರು ಇದನ್ನು ಪಾಲಿಸುತ್ತಿದ್ದರೆ, ಖಾಸಗಿ ಕಂಪನಿಗಳು ನಿಯಮ ಗಾಳಿಗೆ ತೂರಿ ಗ್ರಾಹಕರನ್ನು ಆಕರ್ಷಿಸುತ್ತಿವೆ. ಕೆಎಸ್‌ಟಿಡಿಸಿ ಚಾಲಕರು ಸೊರಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಕೆಎಸ್‌ಟಿಡಿಸಿ ಕ್ಯಾಬ್‌ಗಳು ದರ ನಿಯಮ ಪಾಲಿಸುತ್ತಿದ್ದರೆ, ಖಾಸಗಿ ಕ್ಯಾಬ್‌ಗಳು ₹9ಕ್ಕೆ ಗ್ರಾಹಕರನ್ನು ಸೆಳೆಯುತ್ತಿವೆ. ಹೀಗಾಗಿ ಕೆಎಸ್‌ಟಿಡಿಸಿ ಕ್ಯಾಬ್‌ಗಳಿಗೆ ಗ್ರಾಹಕರೇ ಇಲ್ಲದಂತಾಗಿದೆ. ಚಾಲಕರು ಸಮಸ್ಯೆಗೆ ಸಿಲುಕಿದ್ದಾರೆ. ಇದರ ಜೊತೆಗೆ ವಿಮಾನ ನಿಲ್ದಾಣದ ಪಾರ್ಕಿಂಗ್‌ನಲ್ಲೂ ನಡೆಯುತ್ತಿರುವ ರಾಜಕೀಯ ಚಾಲಕರ ಕೊರಳು ಹಿಂಡುತ್ತಿದೆ ಎಂದು ಹೇಳಿದ್ದಾರೆ..

ಸರ್ಕಾರ ದರ ಸಮರದತ್ತ ಕೂಡಲೇ ಗಮನಹರಿಸಬೇಕು. ನಿಯಮ ಪಾಲಿಸದೇ ಮಾರುಕಟ್ಟೆಯಲ್ಲಿ ಅನಗತ್ಯ ಪೈಪೋಟಿ ಸೃಷ್ಟಿ ಮಾಡುತ್ತಿರುವ, ಆ ಮೂಲಕ ಅಮಾಯಕ ಚಾಲಕರ ಪ್ರಾಣ ಕಸಿಯುತ್ತಿರುವ ಖಾಸಗಿ ಕಂಪನಿಗಳಿಗೆ ಎಚ್ಚರಿಕೆ ನೀಡಬೇಕು. ಅದರ ಮೂಲಕ ಅಮಾಯಕ, ಶ್ರಮಜೀವಿ ಕ್ಯಾಬ್‌ ಚಾಲಕರ ರಕ್ಷಣೆಗೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...