NEWSನಮ್ಮರಾಜ್ಯ

ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಜನ ಮುಂದಾಗುತ್ತಿಲ್ಲ: ಸಚಿವ ಡಾ.ಸುಧಾಕರ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಚಿಕ್ಕಬಳ್ಳಾಪುರ: ಕೋವಿಡ್ ಲಸಿಕೆ ರಾಮಬಾಣವಿದ್ದಂತೆ 45 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಲಸಿಕೆ ಪಡೆದುಕೊಳ್ಳಿ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜನರಿಗೆ ಲಸಿಕೆ ಹಾಕಿಸಿಕೊಳ್ಳಲು ಮುಂದಾಗುತ್ತಿಲ್ಲ. ಹೀಗಾಗಿ ಕಾಡಿ ಬೇಡಿ ಅವರಿಗೆ ಕೊರೊನಾ ಲಸಿಕೆ ಹಾಕಲಾಗುತ್ತಿದೆ. ದಯಮಾಡಿ ಇನ್ನಾದರೂ ಪ್ರಯೊಬ್ಬರೂ ಕೋವಿಡ್‌ ಲಸಿಕೆ ಹಾಕಿಸಿಕೊಳ್ಳಿ ಎಂದು ಮನವಿ ಮಾಡಿದರು.

ರಾಜ್ಯದಲ್ಲಿ 5.500 ಕೋವಿಡ್ ಲಸಿಕಾ ಕೇಂದ್ರಗಳನ್ನ ಸಿದ್ಧಪಡಿಸಲಾಗಿದೆ. ಪ್ರತಿ ಕೇಂದ್ರದಲ್ಲೂ ಪ್ರತಿ ದಿನ 100 ಜನರಂತೆ ವ್ಯಾಕ್ಸಿನ್ ಹಾಕಿದರೂ 5 ಲಕ್ಷದ 50 ಸಾವಿರ ಮಂದಿ ಲಸಿಕೆ ಪಡೆದುಕೊಳ್ಳಬಹುದಾಗಿದೆ. ಅದರೆ ಪ್ರತಿದಿನ ಕೇವಲ 1 ರಿಂದ ಒಂದೂವರೆ ಲಕ್ಷ ಜನ ಮಾತ್ರ ಲಸಿಕೆ ಪಡೆದುಕೊಳ್ತಿದ್ದಾರೆ ಎಂದರು.

ಸೋಂಕು ಕಡಿಮೆ ಮಾಡುವ ದೃಷ್ಟಿಯಿಂದ ಕೆಲವು ಮಾರ್ಗ ಸೂಚಿಗಳನ್ನು ಹಾಕಿದ್ದೇವೆ. ಒಬ್ಬ ವ್ಯಕ್ತಿಯ ಒಂದು ಚಟುವಟಿಕೆಗಾಗಿ ನಿರ್ಬಂಧ ಮಾಡಿಲ್ಲ. ಕೊರೊನಾ ಕಡಿವಾಣ ಮಾಡುವ ಉದ್ದೇಶದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದ್ದು, ಕೊರೊನಾ ನಿಯಮಗಳನ್ನು ಪಾಲನೆ ಮಾಡುವಂತೆ ಸಲಹೆ ನೀಡಿದರು.

ಕೊರೊನಾ ನ್ಯೂ ರೂಲ್ಸ್‍ಗೆ ಕೆಲವರ ಆಕ್ಷೇಪಾರ್ಹಗಳು ಬರ್ತವೆ. ಆದರೆ ಆರೂವರೆ ಕೋಟಿ ಜನರ ಹಿತದೃಷ್ಟಿಯಿಂದ ನಿರ್ಬಂಧಗಳನು ಹೇರಲಾಗಿದೆ. ಕೊರೊನಾ ಕಡಿಮೆ ಆಗುವವರೆಗೆ ನಿಯಮ ಪಾಲನೆ ಮಾಡಿ ಎಂದು ಹೇಳಿದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...