CrimeNEWSನಮ್ಮರಾಜ್ಯ

ಸಿಡಿ ಪ್ರಕರಣ: ಆರೋಪಿ ರಕ್ಷಣೆಗೆ ಮುಂದಾಗಿದೆ ಸರ್ಕಾರ: ಸಂತ್ರಸ್ತ ಯುವತಿ ಗಂಭೀರ ಆರೋಪ

ನನ್ನ ಚಾರಿತ್ರ್ಯವಧೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ಸಂತ್ರಸ್ತೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಯದ್ದು ಎನ್ನಲಾದ ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಆರೋಪಿಯನ್ನು ರಕ್ಷಿಸುವುದಕ್ಕಾಗಿ ನನ್ನ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಪತ್ರ ಬರೆದು ನನಗೆ ನ್ಯಾಯ ಕೊಡಿಸಿ ಎಂದು ಮನವಿ ಮಾಡಿದ್ದಾರೆ.

ಇಂದು ಪೊಲೀಸ್‌ ಆಯುಕ್ತರಿಗೆ ಪತ್ರ ಬರೆದಿರುವ ಯುವತಿ ಆರೋಪಿಯನ್ನು ಕೇವಲ ಮೂರು ಗಂಟೆಗಳು ಮಾತ್ರ ವಿಚಾರಣೆ ಮಾಡಿದ ಎಸ್‌ಐಟಿ ಅಧಿಕಾರಿಗಳು ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಹೇಳಿ ವಾಪಸ್ ಕಳುಹಿಸಿದ್ದಾರೆ. ಈಗ ಅವರು ಮುಕ್ತವಾಗಿ ಓಡಾಡಲು ಎಸ್ಐಟಿ ಅವಕಾಶ ನೀಡಿದೆ.

ಆದರೆ ನನಗೆ ಒಂದು ದಿನವೂ ಬಿಡದೆ ವಿಚಾರಣೆ ನಡೆಯುತ್ತಿದೆ. ರಮೇಶ್ ಜಾರಕಿಹೊಳಿ ನೀಡಿದ ದೂರಿನಲ್ಲಿ ನನ್ನ ಹೆಸರಿಲ್ಲ. ನನ್ನ ಹೆಸರು ಉಲ್ಲೇಖವಿಲ್ಲದಿದ್ದರೂ ಪರಿಶೀಲನೆ ಮಾಡಿ ಸಾಕ್ಷಿಯನ್ನು ನಾಶಮಾಡಿದ್ದಾರೆ. ನನ್ನನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಎಸ್ಐಟಿ ಅಧಿಕಾರಿಗಳು ರಾಜ್ಯ ಸರ್ಕಾರದ ಒತ್ತಡಕ್ಕೆ ಮಣಿದಿದ್ದಾರೆ. ಈವರೆಗೂ ನನಗೆ ತೇಜೋವಧೆ ಮಾಡುವ ಸುದ್ದಿ ಪ್ರಸಾರವಾಗುತ್ತಿವೆ.

ನಾನು ಪ್ರಕರಣದ ದೂರುದಾರರು, ಆದರ ಅಧಿಕಾರಿಗಳ ನಡೆ ನೋಡಿದರೆ ನಾನೇ ಆರೋಪಿ ಎಂಬಂತೆ ಬಿಂಬಿತವಾಗಿದೆ. ಇನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನನಗೆ ತೀವ್ರ ಆತಂಕ ಮೂಡಿಸಿದೆ. ನನ್ನ ಸಹಮತ ಪಡೆಯದೆ ಪಿಪಿ ನೇಮಕ ಮಾಡಲಾಗಿದೆ.

ನನ್ನ ಪ್ರಕಾರ ನಿಷ್ಪಕ್ಷಪಾತವಾಗಿ ತನಿಖೆ ನಡೆಯುತ್ತಿದೆ ಎಂಬುದರ ಮೇಲೆ ನಂಬಿಕೆ ಇಲ್ಲದಂತಾಗಿದೆ. ನ್ಯಾಯಕೊಡಿಸಿ, ನ್ಯಾಯಸಮ್ಮತ ವಿಚಾರಣೆ ನಡೆಸಬೇಕೆಂದು ಸಂತ್ರಸ್ತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...