Please assign a menu to the primary menu location under menu

NEWSನಮ್ಮರಾಜ್ಯರಾಜಕೀಯ

ಎಸ್ಮಾ ಜಾರಿಗೆ ಚಿಂತನೆ: ಮುಖ್ಯಮಂತ್ರಿ ಯಡಿಯೂರಪ್ಪ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಳಗಾವಿ: ಪರಿಪರಿಯಾಗಿ ಮನವಿ ಮಾಡಿದ್ದರು ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ಜನರಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಪರಿಸ್ಥಿತಿ ನೋಡಿಕೊಂಡು ಎಸ್ಮಾ ಜಾರಿ ಬಗ್ಗೆ ಚಿಂತಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೌಕರರು ಮುಷ್ಕರ ನಿಲ್ಲಿಸಿ-ಮಾತುಕತೆಗೆ ಬರಬೇಕು ನಾನು ಯಾರ ಜೊತೆಗೆ ಬೇಕಾದರೂ ಮಾತನಾಡಲು ಸಿದ್ಧವಿದ್ದೇನೆ. ಈ ರೀತಿ ಮುಷ್ಕರ ಮಾಡುವುದು ಸರಿಯಲ್ಲ ಎಂದು ಹೇಳಿದರು.

ಸಾರಿಗೆ ನೌಕರರ 9 ಬೇಡಿಕೆಗಳ ಪೈಕಿ ಎಂಟನ್ನು ಈಡೇರಿಸಿದ್ದೇವೆ. ದುರುದ್ದೇಶದಿಂದ ಹಠ ಮಾಡುವುದು ಸರಿಯಲ್ಲ ಎಂದರು.

ಜನರಿಗೆ ತೊಂದರೆ ಆಗದಂತೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಖಾಸಗಿಯವರು ಹೆಚ್ಚಿನ ಹಣ ಪಡೆದರೆ ಕ್ರಮಕೈಗೊಳ್ಳುತ್ತೇವೆ. ಜನರ ಸುಲಿಗೆ ಮಾಡಬೇಡಿ ಎಂದು ಅವರಲ್ಲಿ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

ಸಾರಿಗೆ ನೈಕರರು ಮುಷ್ಕರವನ್ನು ಸ್ವಾರ್ಥಕ್ಕಾಗಿ ಮಾಡುತ್ತಿದ್ದಾರೆ ಎಂದು ಅವರ ವಿರುದ್ಧ ಸಿಎಂ ಹರಿಹಾಯ್ದರು.

Leave a Reply

error: Content is protected !!
LATEST
KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋ... KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!? BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್‌ ಸಮಾವೇಶ ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್