ಸರ್ಕಾರ ಬಗ್ತಿಲ್ಲ: ಸಾರಿಗೆ ನೌಕರರು ಬಿಡ್ತಿಲ್ಲ- ಎರಡನೇ ದಿನವೂ ಮುಂದುವರಿದ ಮುಷ್ಕರ, ಜನರು ಹೈರಾಣು
ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಸರ್ಕಾರದ ಹಠಮಾರಿ ಧೋರಣೆಯಿಂದ ಬೇಸತ್ತಿರುವ ಸಾರಿಗೆ ನೌಕರರು ಎರಡನೇ ದಿನವೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರಿದಿದ್ದು, ಜನರು ಪರದಾಡುವಂತಾಗಿದೆ.
ಸಾರಿಗೆ ನೌಕರರು ಆರನೇ ವೇತನ ಆಯೋಗ ನಮಗೂ ಜಾರಿ ಮಾಡಿ ಎಂಬ ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದಾರೆ. ಆದರೆ ಈ ಬೇಡಿಕೆಯನ್ನು ಈಡೇರಿಸುವ ಭರವಸೆ ನೀಡಿದ್ದ ಸರ್ಕಾರ ಮತ್ತು ಸಾರಿಗೆ ಸಚಿವರು ಇದು ಸಾಧ್ಯವಿಲ್ಲ ಎಂದು ಖಡಕ್ ಹೇಳಿಕೆ ನೀಡುವ ಮೂಲಕ ಮಾತು ತಪ್ಪಿದ್ದರಿಂದ ಆಕ್ರೋಶಗೊಂಡಿರುವ ನೌಕರರ ತಮ್ಮ ಮುಷ್ಕರವನ್ನು ಮುಂದುವರಿಸಿಸದ್ದಾರೆ.
ಇತ್ತ ಸಿಎಂ ಉಪ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದು ಜನರಿಗೆ ಆಗುತ್ತಿರುವ ತೊಂದರೆ ನಿವಾರಿಸುವ ನಿಟ್ಟಿನಲ್ಲಿ ನೌಕರರ ಬೇಡಿಕೆ ಈಡೇರಿಸುವ ಸಂಬಂಧ ಮಾತುಕತೆಗೆ ಕರೆದು ಮುಷ್ಕರ ಕೈ ಬಿಡುವಂತೆ ಮನವೊಲಿಸುವ ಕೆಲಸ ಮಾಡುತ್ತಿಲ್ಲ. ಇದರಿಂದ ಜನರು ಸಿಎಂ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.
ಇನ್ನು ಮುಷ್ಕರ ಹತ್ತಿಕ್ಕುವ ನಿಟ್ಟಿನಲ್ಲಿ ಸರ್ಕಾರ ಮತ್ತು ಸಾರಿಗೆ ಸಚಿವರು ಖಾಸಗಿ ವಾಹನಗಳನ್ನು ಓಡಿಸುವ ಸಹಾಸಕ್ಕೆ ಕೈಹಾಕಿದ್ದಾರೆ. ಆದರೆ ಇದರಿಂದ ಕೆಲ ಖಾಸಗಿ ಬಸ್‌ಗಳು ಜನರ ಸುಲಿಗೆಗೆ ಇಳಿದಿವೆ ಇದರಿಂದ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಾಗುತ್ತಿದೆ.
ಇನ್ನು ರಾಯಚೂರಿನಲ್ಲಿ ಖಾಸಗಿ ಬಸ್‌ಗಳು ರಸ್ತೆಗಿಳಿದಿಲ್ಲ ಎಂದು ಹೇಳಲಾಗುತ್ತಿದೆ. ಇದರಿಂದ ಮುಂಜಾನೆಯಿಂದ ಜನರು ಕಚೇರಿ ಮತ್ತು ತಮ್ಮ ತಮ್ಮ ಕೆಲಸಗಳ ಸ್ಥಳಗಳಿಗೆ ತೆರಳಲು ಪರದಾಡುವಂತ್ತಾಗಿದೆ.
ಸಾರ್ವಜನಿಕರು ಸರ್ಕಾರಕ್ಕೆ ಬಸ್ ಬಂದ್ ಮಾಡಿರುವ ನೌಕರರ ಬೇಡಿಕೆ ಈಡೇರಿಸಿದೆ ಈ ರೀತಿ ತೊಂದರೆ ಕೊಡುವುದು ಎಷ್ಡು ಸರಿ ಎಂದು ಹಿಡಿ ಶಾಪಹಾಕುತ್ತಿದ್ದಾರೆ. ಆದರೆ, ಸರ್ಕಾರ ಮಾತ್ರ ಜನರಿಗೆ ತೊಂದರೆ ಆದರೂ ಸರಿ ನಾವು ಈಗೊ ಬಿಟ್ಟುಕೊಡುವುದಿಲ್ಲ ಎಂಬ ಧೋರಣೆ ಅನುಸರಿಸುತ್ತಿದ್ದಾರೆ.
ಒಟ್ಟಾರೆ ನಿನ್ನೆಯಿಂದ ತಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಕೈ ಬಿಡುವುದಿಲ್ಲ. ಅದು ಎಷ್ಟು ದಿನಗಳಾದರೂ ಸರಿಯೇ ನಮ್ಮ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು 1.30 ಲಕ್ಷ ಸಾರಿಗೆ ನೌಕರರು ಒಗ್ಗಟ್ಟಿನಿಂದ ಮುಷ್ಕರ ನಡೆಸುತ್ತಿದ್ದು ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ.
Related
You Might Also Like
KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್‌ಗಳು- ಸಚಿವರಿಂದ ಲೋಕಾರ್ಪಣೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್ಗಳಿಗೆ ಮೆಜೆಸ್ಟಿಕ್ನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗ ಸಚಿವರಾದ ರಾಮಲಿಂಗರೆಡ್ಡಿ ಮತ್ತು...
KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ
ಬೆಂಗಳೂರು: ಶಕ್ತಿ ಯೋಜನೆ ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ತಮ್ಮ ಪ್ರತಿಯೊಂದು ಸುಳ್ಳಿನ ಸರಮಾಲೆಯ ಟ್ಟೀಟ್ಗೂ ನಾವು...
ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್
ಹುಬ್ಬಳ್ಳಿ: ಹುಬ್ಬಳ್ಳಿಯ ಸಾಯಿನಗರದಲ್ಲಿ ಅಡುಗೆ ಅನಿಲ ಸ್ಫೋಟದಿಂದ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ಇಂದು ಗೃಹ...
KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!?
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲೂ ವೇತನ ಹೆಚ್ಚಳವಾಗಬೇಕು ಅದಾದ ಬಳಿಕ ಅರಿಯರ್ಸ್ ಕೊಡಬೇಕು ಎಂದರೆ ಹೋರಾಟ ಮಾಡುವುದು ನೌಕರರು. ಅದಕ್ಕೆ ಕರೆ ಕೊಡುವುದು...
BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್
ಬೆಂಗಳೂರು: ಕಳೆದ ಬಾರಿ ಮಳೆಯಿಂದಾದ ಅನಾಹುತಗಳು ಮತ್ತೆ ಮರುಕಳಿಸಬಾರದು ಎಂಬ ದೃಷ್ಟಿಯಿಂದ ಯಲಹಂಕ ವಲಯದ ಟಾಟಾನ ಗರದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲು...
ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್ ಸಮಾವೇಶ
ಬಾಗಲಕೋಟೆ: ರಾಷ್ಟ್ರೀಯ ಸಂಘರ್ಷ ಸಮಿತಿಯ NACಯ ರಾಷ್ಟ್ರೀಯ ಅಧ್ಯಕ್ಷ ಕಮಾಂಡರ್ ಅಶೋಕ್ ರಾವುತ್ ಅವರ ನೇತೃತ್ವದಲ್ಲಿ ಒದೇ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್...
ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ
ಸರ್ಕಾರ ರೈತರ ಪರವಾಗಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗವು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್....
KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..!
ಪಾಪಾ ಸಂಬಳ ಸಾಲುತ್ತಿಲ್ಲವಂತೆ ಅದಕ್ಕೆ ಹೆಚ್ಚಿಗೆ ಸಂಬಳ ಪಡೆಯುತ್ತಿರುವ ಟಿಸಿಗಳ ಕಾಲು ಹಿಡಿದು ಭಿಕ್ಷೆ ಬೇಡುತ್ತಿದ್ದಾರೆ ಪಾಪಿಗಳು ನಾಚಿಕೆ ಬಿಟ್ಟು ಟಿಸಿಗಳ ಸುಲಿಗೆ ಮಾಡುವ ಇಂಥ ನಾಲಾಯಕ್...
ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಅರ್ಜಿಗಳನ್ನು ಕಾಲಮಿತಿಯೊಳಗಾಗಿ ವಿಲೇವಾರಿ ಮಾಡಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆ ವ್ಯಾಪ್ತಿಯ ವಿವಿಧ ವಿಷಯಗಳಿಗೆ...
ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ
ನ್ಯೂಡೆಲ್ಲಿ: ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅವರು ಇಪಿಎಸ್-95 ರಾಷ್ಟ್ರೀಯ ಹೋರಾಟ ಸಮಿತಿಯ ನಿಯೋಗದೊಂದಿಗೆ ಶನಿವಾರ ಸಭೆ ನಡೆಸಿದ್ದಾರೆ. ಆ ಸಭೆಯಲ್ಲಿ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ...
ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮದ ನೌಕರರನ್ನು ಪದೇಪದೆ ಕಾರ್ಮಿಕರು ಎಂದು ಕರೆಯುವ ಈ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಗೆ ನಿಜವಾಗಲು ನೌಕರರ ಬಗ್ಗೆ...
ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ
ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಚಾಲಕರಿಗೆ 34100 ರೂಪಾಯಿ ಸಂಚಿತ ವೇತನ ನಿಗದಿ ಮಾಡಿರುವ ಸರ್ಕಾರ ಕಳೆದ ನವೆಂಬರ್ 1ರಿಂದಲೇ...