Please assign a menu to the primary menu location under menu

NEWSನಮ್ಮರಾಜ್ಯರಾಜಕೀಯ

6ನೇ ವೇತನ ಆಯೋಗ ಜಾರಿ ಮಾಡುವುದಿಲ್ಲ: ಸಾರಿಗೆ ನೌಕರರಿಗೆ ಸ್ಪಷ್ಟ ಸಂದೇಶ ರವಾನಿಸಿದ ಸಿಎಂ ಬಿಎಸ್‌ವೈ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಸಾರಿಗೆ ನೌಕರರ ಮೊದಲು ಕರ್ತವ್ಯಕ್ಕೆ ಹಾಜರಾಗಲಿ ಅಲ್ಲಿಯವರೆಗೆ ಅವರ ಜೊತೆ ಮಾತುಕತೆಗೆ ನಾವು ಸಿದ್ಧರಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ನೌಕರರಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಈ ಸಂಕಷ್ಟದಲ್ಲಿ ಜನರಿಗೆ ತೊಂದರೆ ಕೊಡುವುದು ಸರಿಯಲ್ಲ ನಿಮ್ಮ 8 ಬೇಡಿಕೆ ಈಡೇರಿಸಿದ್ದೇವೆ. ಅದರಲ್ಲಿ ಕೆಲ ನ್ಯೂನ್ಯತೆಗಳು ಇದ್ದರಿ ಸರಿಪಡಿಸೋಣ ಮೊದಲು ನೀವು ಕೆಲಸಕ್ಕೆ ಹಾಜರಾಗಿ. ಇನ್ನು ಯಾವುದೇ ಕಾರಣಕ್ಕೂ 6ನೇ ವೇತನ ಆಯೋಗ ಜಾರಿ ಮಾಡುವುದಕ್ಕೆ ನಾವು ಸಿದ್ಧರಿಲ್ಲ ಎಂದು ಹೇಳಿದರು.

ಸಾರಿಗೆ ನೌಕರರು ತಮ್ಮ ಹಠಮಾರಿ ಧೋರಣೆ ಬಿಟ್ಟು ಕೆಲಸಕ್ಕೆ ಹಾಜರಾಗಿ ಎಂದು ಮನವಿ ಬದಲಿಗೆ ಖಡಕ್‌ ಎಚ್ಚರಿಕೆ ನೀಡಿದ್ದು, ಇದು ನೌರರಲ್ಲಿ ಇನ್ನಷ್ಟು ಆಕ್ರೊಶಕ್ಕೆ ಕಾರಣವಾಗಿದ್ದು ನಾವು ಯಾವುದೇ ಕಾರಣಕ್ಕೂ 6ನೇ ವೇತನ ಆಯೋಜ ಜಾರಿ ಮಾಡದ ಹೊರತು ಕೆಲಸಕ್ಕೆ ಹಾಜರಾಗುವುದಿಲ್ಲ ಎಂಬ ಎಚ್ಚರಿಕೆಯನ್ನು ಇವರೂ ನೀಡಿದ್ದಾರೆ.

ಈ ನಡುವೆ ಸರ್ಕಾರ ಮತ್ತು ಸಾರಿಗೆ ಕಾರ್ಮಿಕರ ನಡುವಿನ ತಿಕ್ಕಾಟದಲ್ಲಿ ಜನರು ಸಮಸ್ಯೆಗೆ ಸಿಲುಕಿದ್ದಾರೆ. ಜತೆಗೆ ಸರ್ಕಾರಕ್ಕೂ ಕೋಟ್ಯಂತರ ರೂಪಾಯಿ ನಷ್ಟವಾಗುತ್ತಿದೆ. ಇದು ಸರ್ಕಾರ ನಡೆಸುವವರಿಗೇ ಗೊತ್ತಿದ್ದರೂ ಆ ನಷ್ಟಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನೌಕರರೊಂದಿಗೆ ಮಾತುಕತೆ ನಡೆಸದೆ ಮೊಂಡುತನ ತೋರುವುದು ಎಷ್ಟು ಸರಿ ಎಂದು ಜನರು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ.

ರಾಜ್ಯದಲ್ಲಿ ಬಾರ್, ಪಬ್‌ಗಳು ಮತ್ತು ರೆಸ್ಟೋರೆಂಟ್‌ಗಳು ಮುಚ್ಚುವ ಸಾಧ್ಯತೆ

ಇದರ ನಡುವೆ ರಾಜ್ಯಾದ್ಯಂತ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಬಾರ್, ಪಬ್‌ಗಳು ಮತ್ತು ರೆಸ್ಟೋರೆಂಟ್‌ಗಳು ಮುಚ್ಚುವ ಸಾಧ್ಯತೆಯಿದೆ. ಅಲ್ಲದೆ ಕೆಲವು ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಯಲ್ಲಿದೆ.

ನಿನ್ನೆ ಯಡಿಯುರಪ್ಪ ಮಾತನಾಡಿ, “ಕರ್ಫ್ಯೂ ರಾತ್ರಿ 10 ರಿಂದ ಬೆಳಗ್ಗೆ 5 ರವರೆಗೆ ಇರುತ್ತದೆ.” ಎಂದರು. ಪ್ರಧಾನಿ ನರೇಂದ್ರ ಮೋದಿ ಮತ್ತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ನಡುವಿನ ಚರ್ಚೆಯ ನಂತರ ಅವರು ಬೆಂಗಳೂರು, ತುಮಕೂರು, ಮೈಸೂರು, ಬೀದರ್,ಉಡುಪಿ, ಮಣಿಪಾಲ, ಮಂಗಳೂರು ಮತ್ತು ಕಲಬುರಗಿ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದು ಹೇಳಿದರು.

ಇದು ಕೇವಲ ಪ್ರಾಯೋಗಿಕ ಜಾರಿಯಾಗಿದ್ದು ಜಿಲ್ಲಾ ಕೇಂದ್ರಗಳಲ್ಲಿ ಮಾತ್ರವೇ ನಿಯಮ ಜಾರಿಯಾಗುತ್ತದೆ, ಅಗತ್ಯ ಸೇವೆ ಹೊರತಾಗಿ ಎಲ್ಲಾ ಕಮರ್ಷಿಯಲ್ ಚಟಿವಟಿಕೆಗಳೂ ನಿರ್ಬಂಧಕ್ಕೊಳಗಾಗಲಿದೆ ಎಂದರು.

Leave a Reply

error: Content is protected !!
LATEST
KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!? BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್‌ ಸಮಾವೇಶ ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್ ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ