NEWSನಮ್ಮರಾಜ್ಯರಾಜಕೀಯ

ಕರ್ತವ್ಯಕ್ಕೆ ಗೈರು ಹಿನ್ನೆಲೆ: ಈಶಾನ್ಯ ಸಾರಿಗೆ ಸಂಸ್ಥೆಯ 31 ಸಿಬ್ಬಂದಿ ವಜಾ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಕಲಬುರಗಿ: ರಸ್ತೆ ಸಾರಿಗೆ ನೌಕರರ‌ ಮುಷ್ಕರ‌ದಲ್ಲಿ ಪಾಲ್ಗೊಂಡು ಕರ್ತವ್ಯಕ್ಕೆ ಗೈರಾದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 8 ತರಬೇತಿ ಸಿಬ್ಬಂದಿ ಮತ್ತು 23 ಖಾಯಂ ಸಿಬ್ಬಂದಿ ಸೇರಿ 31 ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ‌ ನಿರ್ದೇಶಕ ಎಂ.ಕೂರ್ಮರಾವ ತಿಳಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇದಲ್ಲದೆ ಸಾರ್ವಜನಿಕ ಹಿತದೃಷ್ಟಿ ಮತ್ತು ಆಡಳಿತಾತ್ಮಕ ಕಾರಣದಿಂದ 53 ಚಾಲನಾ ಸಿಬ್ಬಂದಿ, 20 ತಾಂತ್ರಿಕ ಸಿಬ್ಬಂದಿ, 2 ಆಡಳಿತ ಸಿಬ್ಬಂದಿ ಸೇರಿದಂತೆ 75 ಸಿಬ್ಬಂದಿಗಳಿಗೆ ಸಂಸ್ಥೆಯ ಅಂತರ ವಿಭಾಗ ವರ್ಗಾವಣೆ ಮಾಡಲಾಗಿದೆ.

122 ಚಾಲನಾ ಮತ್ತು‌ 27 ತಾಂತ್ರಿಕ ಸಿಬ್ಬಂದಿ ಸೇರಿ ಒಟ್ಟು 149 ಸಿಬ್ಬಂದಿಗಳ ಎರವಲು ಸೇವೆ ರದ್ದುಗೊಳಿಸಿ ಮೂಲ ಹುದ್ದೆಯ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಎಂ.ಕೂರ್ಮರಾವ್ ತಿಳಿಸಿದ್ದಾರೆ.

ಮುಷ್ಕರದ‌ ನಡುವೆಯೂ ಸಾರ್ವಜನಿಕರ ಪ್ರಯಾಣಕ್ಕೆ ತೊಂದರೆಯಾಗದಂತೆ 358 ಖಾಸಗಿ ಬಸ್, 191 ಆಂಧ್ರಪ್ರದೇಶ ಮತ್ತು ತೆಲಂಗಾಣಾ ಸಾರಿಗೆ ಸಂಸ್ಥೆಯ ವಾಹನಗಳು ಹಾಗೂ 2757 ಇತರೆ ವಾಹನಗಳನ್ನು ಬಸ್ ನಿಲ್ದಾಣದ ಮೂಲಕ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಸಿಬ್ಬಂದಿ‌ ಮನವೊಲಿಕೆ, 270 ಬಸ್ ರಸ್ತೆಗೆ
ಶನಿವಾರ ಮುಷ್ಕರದಲ್ಲಿ ನಿರತ‌ ಸಿಬ್ಬಂದಿಗಳ ಮನವೊಲಿಸಿ‌ ಸಂಸ್ಥೆಯ 270 ವಾಹನ‌ಗಳನ್ನು ಕಾರ್ಯಾಚರಣೆಗೆ ಇಳಿಸಲಾಗಿದೆ. ಹೊಸಪೇಟೆ ವಿಭಾಗದಲ್ಲಿ ಶೇ. 40ರಷ್ಟು ವಾಹನಗಳು ರಸ್ತೆಗೆ ಇಳಿದಿವೆ ಎಂದರು.

4.5 ಕೋಟಿ ಆದಾಯದಲ್ಲಿ‌ ಕೊರತೆ: ಸಾರಿಗೆ‌ ನೌಕರರ ಮುಷ್ಕರದಿಂದ‌ ಸಂಸ್ಥೆಗೆ 4.5 ಕೋಟಿ ರೂ. ಆದಾಯದಲ್ಲಿ ಕೊರತೆಯಾಗಿದ್ಸು, ಹೀಗಾಗಿ ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ನೌಕರರಲ್ಲಿ ಎಂ.ಕೂರ್ಮರಾವ್ ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ