NEWSನಮ್ಮಜಿಲ್ಲೆಸಂಸ್ಕೃತಿ

ಜಗತ್ತಿಗೆ ಶ್ರೇಷ್ಠ ಸಂವಿಧಾನ ನೀಡಿದ ಕೀರ್ತಿ ಅಂಬೇಡ್ಕರ್ ಅವರದು: ಬಿಜೆಪಿಯ ಬೆಮ್ಮತ್ತಿ ಚಂದ್ರು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಪಿರಿಯಾಪಟ್ಟಣ: ಪಟ್ಟಣದ ಗೋಣಿಕೊಪ್ಪ ರಸ್ತೆಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಭಾರತರತ್ನ  ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರ 130ನೇ ಜಯಂತಿಯನ್ನು ಆಚರಿಸಲಾಯಿತು.

ಪಕ್ಷದ ತಾಲೂಕು ಪ್ರಧಾನ ಕಾರ್ಯದರ್ಶಿ ಬೆಮ್ಮತ್ತಿ ಚಂದ್ರು ಮಾತನಾಡಿ,  ಬಾಬಾ ಸಾಹೇಬ್ ಅಂಬೇಡ್ಕರ್ ಭಾರತಕ್ಕೆ ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠವಾದ ಸಂವಿಧಾನವನ್ನು ನೀಡಿ ವಿಶ್ವಕ್ಕೆ ಮಾದರಿಯಾಗಿದ್ದಾರೆ. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಅಂಬೇಡ್ಕರ್ ಎಂದರೆ ಸಮಾನತೆಯ ಸಂಕೇತ ಸ್ವಾತಂತ್ರ ಭಾರತ ಹಾಗೂ ಸ್ವಾತಂತ್ರ ಪೂರ್ವ ಭಾರತಕ್ಕೆ ಅದ್ವಿತೀಯ ಕೊಡುಗೆ ನೀಡಿದ್ದಾರೆ ಎಂದರು.

ನಗರ ಘಟಕದ ಅಧ್ಯಕ್ಷ ರವಿಕುಮಾರ್ ಮಾತನಾಡಿ ಅಂಬೇಡ್ಕರ್ ಸಾಮಾಜಿಕ ನ್ಯಾಯದ ಹರಿಕಾರರು, ಸಾಮಾಜಿಕ ಬದಲಾವಣೆಗೆ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದರು. ಜಗತ್ತಿನ ಶ್ರೇಷ್ಠ ಚಿಂತಕರಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕೂಡ ಶ್ರೇಷ್ಠ ಚಿಂತಕರು. ಸಂವಿಧಾನಿಕ ಮೌಲ್ಯಗಳಾದ ಸ್ವಾತಂತ್ರ್ಯ, ‘ಸಮಾನತೆ, ಭ್ರಾತೃತ್ವ ಮನೋಭಾವವನ್ನು ನಮ್ಮ ಜೀವನದಲ್ಲಿ ನಾವೆಲ್ಲರೂ ಅಳವಡಿಸಿಕೊಳ್ಳಬೇಕು. ಸಂವಿಧಾನವೇ ನಮ್ಮೆಲ್ಲರ ಧರ್ಮವಾಗಬೇಕು ಮತ್ತು ಅದರ ಚೌಕಟ್ಟಿನಲ್ಲಿಯೇ ನಾವು ಸಾಗಬೇಕು’ ಎಂದರು.

ಮಾಜಿ ಶಾಸಕ ಎಚ್.ಸಿ.ಬಸವರಾಜ್, ತಾಲೂಕು ಪ್ರಧಾನ ಕಾರ್ಯದರ್ಶಿ ಎಚ್.ಸಿ.ವೀರಭದ್ರ, ರಾಜ್ಯ ಒಳಚರಂಡಿ ಮತ್ತು ನೀರು ಸರಬರಾಜು ಇಲಾಖೆ ನಿರ್ದೇಶಕ ಆರ್.ಟಿ.ಸತೀಶ್, ಮುಖಂಡರಾದ ವಸಂತಕುಮಾರ್, ವಿಕ್ರಮರಾಜ್, ಲೋಕಪಾಲಯ್ಯ, ಕೌಲನಹಳ್ಳಿ ಸೋಮಶೇಖರ್, ಸರವಣಕುಮಾರ್ ಇದ್ದರು.

14ಪಿವೈಪಿ02:ಪಟ್ಟಣದ ಗೋಣಿಕೊಪ್ಪ ರಸ್ತೆಯಲ್ಲಿರುವ ಬಿಜೆಪಿ ಪಕ್ಷದ ಕಚೇರಿಯಲ್ಲಿ ಭಾರತರತ್ನ  ಬಾಬಾ ಸಾಹೆಬ್ ಡಾ. ಬಿ.ಆರ್.ಅಂಬೇಡ್ಕರ್ ಅವರ 130ನೇ ಜಯಂತಿಯನ್ನು ಆಚರಿಸಲಾಯಿತು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...