ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಬಿಎಂಡಬ್ಲ್ಯು ಕಾರಿನ ಸ್ವಯಂ ಚಾಲಿತ ಡೋರು ಬಿದ್ದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಲಗೈ ಹೆಬ್ಬೆರಳಿಗೆ ಗಾಯವಾಗಿದ್ದು, ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ನಿನ್ನೆ ಅತಾಚೂರ್ಯ ನಡೆದಿದ್ದು ಕೂಡಲೆ ಜತೆಯಲ್ಲಿದ್ದ ಮಾಜಿ ಸಚಿವ ಮಹದೇವಪ್ಪ ಅವರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು. ತೀವ್ರ ರಕ್ತಸ್ರಾವವಾಗಿದ್ದು ಸ್ಟಿಚ್ ಹಾಕಬೇಕು ಎಂದು ವೈದ್ಯರು ನೀಡಿದ ಸಲಹೆ ಮೇರೆಗೆ ಎರಡು ಸ್ಟಿಚ್ ಹಾಕಲಾಗಿದೆ ಎಂದು ತಿಳಿದು ಬಂದಿದೆ.
ಕೈ ಬೆರಳಿಗೆ ಗಾಯವಾಗಿರುವುದರಿಂದ ವೈದ್ಯರ ಸಲಹೆ ಮೇರೆಗೆ ಇಂದು ಮಸ್ಕಿಗೆ ಚುನಾವಣೆ ಪ್ರಚಾರಕ್ಕೆ ತೆರಳಬೆಕ್ಕಿದ್ದನ್ನು ಕೈ ಬಿಟ್ಟಿದ್ದು, ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ.