Please assign a menu to the primary menu location under menu

NEWSಸಿನಿಪಥ

ಹೃದಯಾಘಾತಕ್ಕೆ ಒಳಗಾಗಿ ಮೂರ್ಛೆ ಹೋಗಿದ್ದ ಹಾಸ್ಯನಟ ವಿವೇಕ್ ಇನ್ನಿಲ್ಲ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಿನಿಪಥ
ಚೆನ್ನೈ: ತಮಿಳು ಸಿನಿಮಾಗಳಲ್ಲಿ ಹಾಸ್ಯನಟನಾಗಿ ಖ್ಯಾತಿಗಳಿಸಿರುವ ನಟ ವಿವೇಕ್ (59) ಶನಿವಾರ ನಿಧನರಾದರು ಶುಕ್ರವಾರ ಬೆಳಗ್ಗೆ ಅವರಿಗೆ ಹೃದಯಾಘಾತವಾಗಿತ್ತು

ಹೃದಯಾಘಾತಕ್ಕೆ ಒಳಗಾಗಿ ಮೂರ್ಛೆ ಹೋಗಿದ್ದ ಅವರನ್ನು ತಕ್ಷಣವೇ ಪತ್ನಿ ಮತ್ತು ಮಗಳು ಆಸ್ಪತ್ರೆಗೆ ದಾಖಲಿಸಿದ್ದರು ಗುರುವಾರ (ಏ.15) ಅವರು ಕೋವಿಡ್‌ ಲಸಿಕೆ ಪಡೆದಿದ್ದರು. ಬಳಿಕ ಅರ್ಹರೆಲ್ಲ ಚಿಕಿತ್ಸೆ ಪಡೆದುಕೊಳ್ಳಬೇಕಿ ಎಂದು ಕರೆ ನೀಡಿದ್ದರು.

ಹೃದಯಾಘಾತಕ್ಕೆ ಒಳಗಾಗಿದ್ದರಿಂದ ಚೆನ್ನೈನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತಿತ್ತು. ಆರೆ ಇಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಇನ್ನು ಇವರ ಸಾವಿಗೂ ಕೊರೊನಾ ಚಿಕಿತ್ಸೆ ಪಡೆದಿದ್ದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಆಸ್ಪತ್ರೆಯ ವೈದ್ಯರು ಶುಕ್ರವಾರ ಸ್ಪಷ್ಟಪಡಿಸಿದ್ದರು.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ವಿವೇಕ್ ಅವರು ರಜನಿಕಾಂತ್, ವಿಜಯ್, ಕಮಲ ಹಾಸನ್, ಅಜಿತ್ ಸೇರಿ ಪ್ರಮುಖ ನಾಯಕರೊಂದಿಗೆ ನಟಿಸಿದ್ದಾರೆ. 2012ರ ಹಿಂದಿಯ ವಿಕ್ಕಿ ಡೋನರ್ ಚಿತ್ರದ ತಮಿಳು ರಿಮೇಕ್ ಧಾರಾಳ ಪ್ರಭು ಅವರು ಕಾಣಿಸಿಕೊಂಡ ಕೊನೆಯ ಚಿತ್ರ.

ನಿರ್ದೇಶಕ ಕೆ.ಬಾಲ ಚಂದರ್‌ ಅವರು ವಿವೇಕರನ್ನು ಚಿತ್ರರಂಗಕ್ಕೆ ಪರಿಚಯಿಸಿದರು.1987 ರಿಂದ ವಿವೇಕ್ ಸಿನಿಮಾ ಪ್ರಯಾಣ ಶುರುವಾಯಿತು. ಕನ್ನಡದ ಚಂದ್ರ ಸೇರಿದಂತೆ ನೂರಾರು ಸಿನಿಮಾಗಳಲ್ಲಿ ನಟಿಸಿದ್ದರು.

ಚಿತ್ರರಂಗದ ಹಲವು ಪ್ರಮುಖರು ಹಾಗೂ ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಆಗಲಿದ ನಟನಿಗೆ ಸಂತಾಪ ಸೂಚಿಸಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಅಧಿಕಾರಿಗಳು-ನೌಕರರ ಬೇಡಿಕೆಯಂತೆ ಸರಿ ಸಮಾನ ವೇತನ ಕೊಡಿ: BMS ತಾಕೀತು NWKRTC: ಹುಬ್ಬಳ್ಳಿ-ಧಾರವಾಡ ಹೈಕೋರ್ಟ್‌ ನಡುವೆ ಹೊಸ ಬಸ್‌ಗಳ ಸಂಚಾರ- ವಕೀಲರ ಮನವಿ ಸ್ಪಂದಿಸಿದ ಅಧಿಕಾರಿಗಳು ಡಿ.1ರಂದು ಲಾಲ್‌ಬಾಗ್‌ನಲ್ಲಿ ಇಪಿಎಸ್ ಪಿಂಚಿಣಿದಾರರ 83ನೇ ತಿಂಗಳ ಸಭೆ ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ