NEWSನಮ್ಮರಾಜ್ಯರಾಜಕೀಯ

ಸಾರಿಗೆ ನೌಕರರ ಮುಷ್ಕರವನ್ನು ಹಿಂಸಾತ್ಮಕ ಹಂತಕ್ಕೆ ಬೆಳೆಯಲು ಬಿಟ್ಟ ಸರ್ಕಾರದ ನಡೆಯಲ್ಲಿ ಬೇಜವಾಬ್ದಾರಿತನ ಸ್ಪಷ್ಟ: ಎಚ್‌ಡಿಕೆ ಅಸಮಾಧಾನ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮುಷ್ಕರ ಲೆಕ್ಕಿಸದೇ, ಜನರ ಸೇವೆಗಾಗಿ ಕರ್ತವ್ಯಕ್ಕೆ ಹಾಜರಾಗಿದ್ದ ವಾಯವ್ಯ ಸಾರಿಗೆ ಸಂಸ್ಥೆ ಬಸ್ ಚಾಲಕ ನಬಿ ರಸೂಲ್ ಆವಟಿ ಅವರನ್ನು ಜಮಖಂಡಿಯಲ್ಲಿ ಕಲ್ಲಿನಿಂದ ಹೊಡೆದು ಕೊಂದ ಘಟನೆ ನನ್ನನು ದಿಗ್ಭ್ರಾಂತನನ್ನಾಗಿಸಿದೆ. ಪ್ರತಿಭಟನೆ ಎತ್ತ ಸಾಗುತ್ತಿದೆ? ಸರ್ಕಾರ ಏನು ಮಾಡುತ್ತಿದೆ ? ಎಂಬ ಪ್ರಶ್ನೆಗಳು ನನ್ನನ್ನು ತೀವ್ರವಾಗಿ ಕಾಡಿವೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಜಮಖಂಡಿಯ ಈ ದುರ್ಘಟನೆ ಯಾವ ಸಂದೇಶ ನೀಡುತ್ತಿದೆ ಎಂಬುದರತ್ತ ಸರ್ಕಾರ ಗಂಭೀರವಾಗಿ ಯೋಚಿಸಲಿ. ಅನಿವಾರ್ಯ ಸಂದರ್ಭದಲ್ಲಿ ಜನರಿಗೆ ಸೇವೆ ನೀಡಲು ಇನ್ನು ಮುಂದೆ ಯಾವ ನೌಕರ ಮುಂದೆ ಬರುತ್ತಾನೆ ಎಂಬುದರ ಚಿಂತನೆ ಮಾಡಲಿ. ಮುಷ್ಕರವನ್ನು ಹಿಂಸಾತ್ಮಕ ಹಂತಕ್ಕೆ ಬೆಳೆಯಲು ಬಿಟ್ಟ ಸರ್ಕಾರದ ನಡೆಯಲ್ಲಿ ಬೇಜವಾಬ್ದಾರಿತನ ಸ್ಪಷ್ಟವಾಗಿ ಕಾಣಿಸುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಜಮಖಂಡಿ ದುರ್ಘಟನೆಯಲ್ಲಿ ಮೃತಪಟ್ಟ ಚಾಲಕ ನಬಿ ರಸೂಲ್ ಸರ್ಕಾರದ ಕರೆಗೆ ಓಗೊಟ್ಟು ಕರ್ತವ್ಯಕ್ಕೆ ಬಂದಿದ್ದವರು. ಹೀಗಾಗಿ ಅವರ ಕುಟುಂಬಕ್ಕೆ ಸರ್ಕಾರ ಗರಿಷ್ಠ ಪರಿಹಾರ ಒದಗಿಸಬೇಕು. ಕೃತ್ಯವೆಸಗಿದವರಿಗೆ ಶಿಕ್ಷೆ ಕೊಡಿಸಬೇಕು. ನೌಕರರ ಬೇಡಿಕೆ ಒಂದು ಕಡೆ ಇರಲಿ. ಅದಕ್ಕೂ ಮೊದಲು ನೌಕರರಲ್ಲು ಈಗ ಸರ್ಕಾರದ ಬಗ್ಗೆ ವಿಶ್ವಾಸ ಮೂಡಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬಸ್‌ಗಳ ಮೇಲೆ ದಾಳಿ ನಡೆಯುತ್ತಿರುವ ಪ್ರಸಂಗಗಳನ್ನು ಗಮನಿಸಿದ್ದೇನೆ. ಅಂಥವರನ್ನು ಕೂಡಲೇ ಬಂಧಿಸಬೇಕು. ನೌಕರರು ಈ ಕೃತ್ಯ ಮಾಡಿರಲಾರರು. ನೌಕರರ ಹೋರಾಟ ಸರ್ಕಾರದ ವಿರುದ್ಧವೇ ಹೊರತು, ಅನ್ನ ನೀಡುವ ಬಸ್ ಗಳ ವಿರುದ್ಧ ಅಲ್ಲ ಎಂಬ ನಂಬಿಕೆ ನನಗಿದೆ. ಮುಷ್ಕರ ಹಿಂಸೆ ರೂಪ ಪಡೆಯಬಾರದು. ಇಲ್ಲಿ ಯಾರ ಹಠವೂ ಗೆಲ್ಲದಿರಲಿ. ನಾಗರಿಕರಿಗೆ ಹಿತವಾಗಲಿ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...