NEWSರಾಜಕೀಯ

ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಆಪ್ತ ಸಹಾಯಕ ಕೊರೊನಾಗೆ ಬಲಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರ ಆಪ್ತ ಸಹಾಯಕ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಸೋಮವಾರ ಬೆಳಗ್ಗೆ ಸಚಿವರ ಆಪ್ತ ಸಹಾಯಕ ಎಚ್.ಜೆ. ರಮೇಶ್ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ ಎಂದು ಸ್ವತಃ ಸಚಿವರೇ ತಿಳಿಸಿದ್ದಾರೆ.

ರಮೇಶ್ ಅವರಿಗೆ ಏಪ್ರಿಲ್ 13ರಂದು ಕೊರೊನಾ ಸೋಂಕು ಇವರು ಬಗ್ಗೆ ದೃಢಪಟ್ಟಿತು. ಆ ನಿಟ್ಟಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೂ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.

ನನ್ನ ಜತೆ ಕಳೆದ ಎಂಟು ವರ್ಷಗಳಿಂದಲೂ ರಮೇಶ್ ಅವರು ನಗುನಗುತ್ತಲೇ ಕೆಲಸ ಮಾಡುತ್ತಿದ್ದು, ಜತೆಗೆ ನಮ್ಮ ಕ್ಷೇತ್ರದಲ್ಲಿ ಕೊರೊನಾ ಸೋಂಕಿತರನ್ನು ಆಸ್ಪತ್ರೆಗೆ ಸೇರಿಸುವ ನಿಟ್ಟಿನಲ್ಲೂ ಕಾರ್ಯ ನಿರ್ವಹಿಸುತ್ತಿದ್ದರು ಎಂದು ಸಚಿವರು ತಿಳಿಸಿದ್ದಾರೆ.

ಇನ್ನು ತಮ್ಮ ಆಪ್ತ ಸಹಾಯಕ ನಿಧನವಾಗಿರುವ ಬಗ್ಗೆ ಸುರೇಶ್ ಕುಮಾರ್ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದು, “ನಮ್ಮ ಕ್ಷೇತ್ರದ ಅನೇಕರನ್ನು ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಉಳಿಸಿದ್ದ ನನ್ನ ಆಪ್ತ ಸಹಾಯಕ HJ ರಮೇಶ್ ಇನ್ನಿಲ್ಲ. ರಮೇಶ್ ಸುಮಾರು 8 ವರ್ಷ ನನ್ನೊಡನೆ ನಗು ನಗುತ್ತಾ ಸೇವೆ ಸಲ್ಲಿಸಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರಕಲಿ.” ಎಂದು ಸಂತಾಪ ಸೂಚಿಸಿದ್ದಾರೆ.

Leave a Reply

error: Content is protected !!
LATEST
ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...