NEWSನಮ್ಮಜಿಲ್ಲೆ

ಕಲಬುರಗಿ: ಕೋವಿಡ್-19 ಹೆಲ್ಪ್ ಡೆಸ್ಕ್‌ಗೆ ಜಿಲ್ಲಾಧಿಕಾರಿ ಜ್ಯೋತ್ಸ್ನಾ ಭೇಟಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಕಲಬುರಗಿ: ಜಿಲ್ಲೆಯಲ್ಲಿ ದಿನೇದಿನೇ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಪತ್ತೆಯಾದ ನಂತರ ಚಿಕಿತ್ಸೆ, ಆಸ್ಪತ್ರೆ ಮತ್ತು ಹಾಸಿಗೆ ಸ್ಥಿತಿಗತಿಗಳ ಮಾಹಿತಿ ನೀಡುವುದರ ಜೊತೆಗೆ ಆತ್ಮಸ್ಥೈರ್ಯ ತುಂಬಲು ಜಿಲ್ಲಾಡಳಿತದಿಂದ ಸ್ಥಾಪಿಸಲಾಗಿರುವ ಕೋವಿಡ್-19 ಹೆಲ್ಪ್ ಡೆಸ್ಕ್‍ಗೆ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಭೇಟಿ ನೀಡಿ ಪರಿಶೀಲಿಸಿದರು.

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿನ ಹೆಲ್ಪ್ ಡೆಸ್ಕ್‌ಗೆ ಭೇಟಿ ನೀಡಿದ ಬಳಿಕ ಮಾತನಾಡಿದರು.

ಕೋವಿಡ್-19 ಕುರಿತು ಸಾರ್ವಜನಿಕರಲ್ಲಿ ಅನೇಕ ಗೊಂದಲಗಳಿದ್ದು, ಅವಗಳನ್ನು ಹೋಗಲಾಡಿಸುವುದಕ್ಕಾಗಿ ಕಲಬುರಗಿ ನಗರದ 46 ಕಡೆಗೆ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಸಹಕಾರದೊಂದಿಗೆ ಜಿಲ್ಲಾಡಳಿತವು ಹೆಲ್ಪ್ ಡೆಸ್ಕ್‌ಗಳನ್ನು ಸ್ಥಾಪಿಸಿದೆ ಎಂದರು.

ಇನ್ನು ಸರ್ಕಾರಿ, ಖಾಸಗಿ ಆಸ್ಪತ್ರೆ ಮತ್ತು ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣ, ರೈಲು ನಿಲ್ದಾಣ, ಡಿ.ಸಿ.ಕಚೇರಿ, ಪಾಲಿಕೆ ಕಚೇರಿ, ಪ್ರಮುಖ ವೃತ್ತಗಳಲ್ಲಿ ಜನರು ಹೆಚ್ಚಾಗಿ ಓಡಾಡುವ ಜಾಗಗಳಲ್ಲಿ ಹೆಲ್ಪ್ ಡೆಸ್ಕ್ ತೆರೆಯಲಾಗುತ್ತಿದೆ ಎಂದು ತಿಳಿಸಿದರು.

ಈಗ ಕಾಡುತ್ತಿರುವ ಕೋವಿಡ್ ಎರಡನೇ ಅಲೆ ಬಹಳ ಗಂಭೀರವಾಗಿದೆ. ಹೀಗಾಗಿ ಸಾರ್ವಜನಿಕರು ಸಹ ಇದನ್ನು ಅಷ್ಟೇ ಗಂಭೀರವಾಗಿ ಪರಿಗಣಿಸಬೇಕು. ಸ್ವಯಂಪ್ರೇರಿತವಾಗಿ ಸರ್ಕಾರದ ಜೊತೆಗೆ ಕೈಜೋಡಿಸಿ ನಮ್ಮ ನಾಡನ್ನು ಕೊರೊನಾ ಮುಕ್ತ ಮಾಡುವಲ್ಲಿ ಶ್ರಮವಹಿಸಬೇಕು ಎಂದು ಮನವಿ ಮಾಡಿದರು.

ಯಾರಿಗಾದರೂ ರೋಗ ಲಕ್ಷಣಗಳು ಕಂಡುಬಂದರೆ ತಕ್ಷಣ ಪರೀಕ್ಷೆ ಮಾಡಿಸಿಕೊಂಡು ಸೋಂಕು ಉಲ್ಬಣವಾಗದಂತೆ ನೋಡಿಕೊಳ್ಳಬೇಕು. ಜೊತೆಗೆ ಅನಾವಶ್ಯಕವಾಗಿ ಹೊರಗಡೆ ಯಾರೂ ಸಂಚರಿಸಬಾರದು. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಗಳನ್ನು ಧರಿಸಿ, ಆಗಾಗ ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಜೊತೆಗೆ ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...