NEWSನಮ್ಮರಾಜ್ಯ

ಚಿಂತಾಜನಕ ಪರಿಸ್ಥಿತಿಯಲ್ಲಿರುವ COVID ಸೋಂಕಿತರಿಗೆ ಆಮ್ಲಜನಕ ಸಿಗುತ್ತಿಲ್ಲ: ಎಚ್‌ಡಿಕೆ ಕಿಡಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೋವಿಡ್‌ ತಡೆಯುವ ಕುರಿತು ಸರ್ಕಾರ ಮ್ಯಾರಥಾನ್‌ ಸಭೆಗಳನ್ನು ಮಾಡಿದೆ, ವಿಪಕ್ಷದ ನಾಯಕರ ಸಲಹೆ ಪಡೆದಿದೆ. ಜನರನ್ನು ಸೋಂಕಿನಿಂದ ದೂರವಿಡಲು ಮಾರ್ಗಸೂಚಿಗಳನ್ನು ಮಂಗಳವಾರ ಪ್ರಕಟಿಸಿದೆ. ಆದರೆ, ಈಗಾಗಲೇ ಸೋಂಕಿಗೆ ತುತ್ತಾಗಿರುವ ಜನರನ್ನು ರಕ್ಷಿಸಲು, ಅವರ ಜೀವ ಉಳಿಸಲು ಏನು ಕ್ರಮ ಕೈಗೊಳ್ಳಲಾಗಿದೆ ಎಂಬುದರ ಬಗ್ಗೆ ಸರ್ಕಾರ ಮಾತಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ಸಂಬಂಧ ಸರಣಿ ಟ್ವೀಟ್‌ ಮಾಡಿರುವ ಅವರು, ಮಂಗಳವಾರದ ಸಭೆಯ ನಂತರ ಜನರಿಗೆ ಕೇವಲ ಮಾರ್ಗಸೂಚಿಗಳನ್ನು ಮಾತ್ರ ಸೂಚಿಸಲಾಯಿತು. ಸೋಂಕಿನಿಂದ ದೂರ ಇರುವ ಸಲಹೆ ನೀಡಲಾಯಿತು. ಆದರೆ, ಈಗಾಗಲೇ ಅಸ್ಪತ್ರೆಗಳಲ್ಲಿರುವವರ ರಕ್ಷಣೆಗಾಗಿ ಏನು ಮಾಡಲಾಗಿದೆ, ಏನೇನು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಸಭೆಯ ನಂತರ ಸರ್ಕಾರ ಹೇಳಿಲ್ಲ ಏಕೆ? ಸೋಂಕಿತರ ಪರಿಸ್ಥಿತಿಯನ್ನು ಸರ್ಕಾರ ಅರಿತಿಲ್ಲ ಏಕೆ ಎಂದು ಪ್ರಶ್ನಿಸಿದ್ದಾರೆ.

ಕೋವಿಡ್‌ನ ಎರಡನೇ ಅಲೆ ಬರುವುದಾಗಿ ಸರ್ಕಾರಕ್ಕೆ ತಜ್ಞರು, ವಿಪಕ್ಷ ನಾಯಕರು ಹೇಳುತ್ತಲೇ ಬಂದಿದ್ದಾರೆ. ವರದಿಗಳನ್ನು ಪಡೆದುಕೊಂಡ ಸರ್ಕಾರ ಈ ವರೆಗೆ ಏನು ಮಾಡಿಕೊಂಡಿತ್ತು? ಕೋವಿಡ್‌ ಬಂದಿದ್ದು ಒಂದೂವರೆ ವರ್ಷಗಳ ಹಿಂದೆ. ಮುಂದೊಂದು ದಿನ ರಾಕ್ಷಸ ರೂಪಿಯಾಗಬಹುದಾದ ಈ ರೋಗದ ವಿರುದ್ಧ ಸರ್ಕಾರ ಈ ವರೆಗೆ ಮಾಡಿಕೊಂಡ ಸಿದ್ಧತೆಗಳು ಏನಾಗಿದ್ದವು ಎಂದು ಕಿಡಿಕಾರಿದ್ದಾರೆ.

ಕೋವಿಡ್‌ ಚಿಕಿತ್ಸೆಗೆ ಅಗತ್ಯವಿರುವ ಔಷಧ, ಪರಿಕರಗಳ ಅಭಾವದ ಬಗ್ಗೆ ನಾನು ಈಗಾಗಲೇ ಮಾತಾಡಿದ್ದೇನೆ. ಎಚ್ಚರಿಕೆಯನ್ನೂ ನೀಡಿದ್ದೇನೆ. ಇದರ ಬಗ್ಗೆ ಏನು ಕ್ರಮ ಕೈಗೊಂಡಿದೆ ಸರ್ಕಾರ? ಚಿಕಿತ್ಸೆಯೇ ದುರ್ಬರವಾಗುತ್ತಿರುವ ಬಗ್ಗೆಯೂ ಪ್ರಸ್ತಾಪಿಸಲಾಗಿದೆ. ಈ ಹಂತದಲ್ಲಿ ಕುಗ್ಗಿ ಹೋಗಿರುವ ಜನರಲ್ಲಿ ವಿಶ್ವಾಸ ಮೂಡಿಸಲು ಸರ್ಕಾರ ಕ್ರಮ ಕೈಗೊಂಡಿದೆಯೇ?

ಚಿಕಿತ್ಸೆಗೆ ಆಸ್ಪತ್ರೆಗಳಲ್ಲಿ ಹಾಸಿಗೆಗಳಿಲ್ಲ. ಚಿಂತಾಜನಕ ಪರಿಸ್ಥಿತಿಯಲ್ಲಿರುವ ಸೋಂಕಿತರಿಗೆ ಆಮ್ಲಜನಕ ಸಿಗುತ್ತಿಲ್ಲ. ರೆಮ್‌ಡಿಸಿವಿರ್‌ ಔಷಧವೂ ಸಿಗುತ್ತಿಲ್ಲ ಎಂಬುದರ ಬಗ್ಗೆ ಕೆಲವು ದಿನಗಳಿಂದ ಎಚ್ಚರಿಸುತ್ತಲೇ ಬಂದಿದ್ದೇನೆ. ಅತ್ಯಗತ್ಯವಾಗಿರುವ ಈ ಸವಲತ್ತುಗಳನ್ನು ಸರ್ಕಾರ ಹೊಂದಿಸುವ ಪ್ರಯತ್ನ ಮಾಡಿದೆಯೇ? ಇದನ್ನು ಮೊದಲು ಹೇಳಲಿ.

ಒಂದೆಡೆ ಸೂಕ್ತ ಚಿಕಿತ್ಸೆ ಸಿಗದೇ ಸೋಂಕಿತರು ಪರದಾಡುತ್ತಿದ್ದಾರೆ. ಆರೋಗ್ಯ ಸೇವೆ ಒದಗಿಸಲಾಗದ ಸರ್ಕಾರದ ದೈನೇಸಿ ಸ್ಥಿತಿಯ ಬಗ್ಗೆ ಜನರು ಆತಂಕಗೊಂಡಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಜನರಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸವನ್ನು ಸರ್ಕಾರ ಮಾಡಬೇಕಲ್ಲವೇ? ಜನರ ರಕ್ಷಣೆಗಾಗಿ ಮಾಡಿಕೊಂಡಿರುವ ಆರೋಗ್ಯ ವ್ಯವಸ್ಥೆಯ ಬಗ್ಗೆ ಸರ್ಕಾರ ಹೇಳಬೇಕಲ್ಲವೇ?

‘ಜನರನ್ನು ಯಾವುದೇ ಹಂತದಲ್ಲಿ ಸರ್ಕಾರ ರಕ್ಷಣೆ ಮಾಡುತ್ತದೆ. ಅವರ ಜೀವಕ್ಕೆ ಆಧಾರವಾಗಿರುತ್ತದೆ,’ ಎಂಬ ವಿಶ್ವಾಸವನ್ನು ತುಂಬುವುದು ಅಗತ್ಯ. ಅದು ಬಿಟ್ಟು ಯಾವುದೇ ಕಠಿಣ ಕ್ರಮಗಳನ್ನು ಕೈಗೊಂಡರೂ ಅದು ನಗಣ್ಯ. ಈ ವಿಷಯವನ್ನು ಸರ್ಕಾರ ಗಮನದಲ್ಲಿಟ್ಟುಕೊಳ್ಳಬೇಕು. ಆರೋಗ್ಯ ವ್ಯವಸ್ಥೆಯ ಕೊರತೆ ನೀಗಿಸುವ ಕ್ರಮಗಳ ಬಗ್ಗೆ ಮಾತಾಡಬೇಕು ಎಂದು ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ