NEWSದೇಶ-ವಿದೇಶರಾಜಕೀಯ

ಪಶ್ಚಿಮ ಬಂಗಾಳದಲ್ಲಿ 6ನೇ ಹಂತದ ಮತದಾನ: ಶೇ.19ರಷ್ಟು ಮತಹಕ್ಕು ಚಲಾವಣೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಕೋಲ್ಕತಾ: ದೇಶದ ಜನರನ್ನು ಬಾಧಿಸುತ್ತಿರುವ ಕೊರೊನಾ 2ನೇ ಅಲೆ ಭೀತಿ ನಡುವೆಯೂ ಪಶ್ಚಿಮ ಬಂಗಾಳದಲ್ಲಿ 6ನೇ ಹಂತದ ಮತದಾನ ಪ್ರಕ್ರಿಯೆ ಇಂದು ( ಗುರುವಾರ) ಆರಂಭವಾಗಿದ್ದು, ಈ ವರೆಗೂ ಶೇ.18.59ರಷ್ಟು ಮತದಾನವಾಗಿದೆ.

ಪಶ್ಚಿಮ ಬಂಗಾಳದಲ್ಲಿ ಇನ್ನೂ ಎರಡು ಹಂತದ ಮತದಾನ ಬಾಕಿ ಇದ್ದು, ಏಪ್ರಿಲ್ 26 ರಂದು ಮತ್ತು 29ರಂದು ಏಳು ಮತ್ತು ಎಂಟನೇ ಹಂತದ ಮತದಾನ ನಡೆಯಲಿದೆ. ಈ ನಡುವೆ ಇಂದು ರಾಜ್ಯದ ಪುರ್ಬಾ ಬರ್ಧಮಾನ್, ನಡಿಯಾ, ಉತ್ತರ 24 ಪರಗಣ ಜಿಲ್ಲೆಗಳಲ್ಲಿ 43 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.

ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು ಈ ನಡುವೆಯೇ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ, ಪಶ್ಚಿಮ ಬಂಗಾಳದ ಜನರು ಹೊಸ ತನವನ್ನು ಬಯಸಿದ್ದು ಆ ಹಾದಿಯಲ್ಲೇ ಮತ ಚಲಾಯಿಸುತ್ತಿದ್ದಾರೆ. ಇಂದು ಆರನೇ ಹಂತದಲ್ಲಿ, ಪ್ರತಿಯೊಬ್ಬರೂ ಮತ ಹಕ್ಕು ಚಲಾಯಿಸಲು ಮರೆಯಬೇಡಿ ಎಂದು ಹೇಳಿದ್ದಾರೆ.

ಈ ನಡುವೆ ನಿರ್ಭೀತಿಯಿಂದ ಮತಹಕ್ಕು ಚಲಾಯಿಸಿ ಎಂದು ಗೃಹಸ ಸಚಿವ ಅಮಿತ್ ಷಾ ಬಂಗಾಳಿ ಭಾಷೆಯಲ್ಲಿಯೇ ಟ್ವೀಟ್ ಮಾಡಿಕೊಂಡಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...