ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪೂರ್ಣವಾಗಿ ಗುಣಮುಖರಾಗಿದ್ದು ಇಂದು ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕಳೆದ ಏ.17ರಂದು ಎರಡು ವಿಧಾನ ಸಭೆ ಮತ್ತು ಒಂದು ಲೋಕಸಭಾ ಚುನಾವಣೆ ಇದ್ದ ಕಾರಣ ಆ ಮೂರೂ ಕ್ಷೇತ್ರಗಳಲ್ಲಿ ಕಾಲಿಗೆ ಚಕ್ರಕಟ್ಟಿಕೊಂಡ ರೀತಿ ಕೊರೊನಾ ಭೀತಿಯಿಲ್ಲದೆ ಮತ ಪ್ರಚಾರ ಮಾಡಿದರು. ಹೀಗಾಗಿ ಅವರಲ್ಲಿ ಜ್ವರ ಕಾಣಿಕೊಂಡಿತು. ಬಳಿಕ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿಕೊಂಡಾಗ ಸೋಂಕು ಇರುವುದು ದೃಢಪಟ್ಟಿತ್ತು.
ಇನ್ನು ಏಪ್ರಿಲ್ 16ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿತ್ತು. ಇದೀಗ ಸಂಪೂರ್ಣ ಗುಣಮುಖರಾಗಿದ್ದು, 6 ದಿನದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ 79 ವರ್ಷದ ಯಡಿಯೂರಪ್ಪ ಎರಡನೇ ಬಾರಿಗೆ ಕೊರೊನಾ ಗೆದ್ದು ಬಂದಿದ್ದಾರೆ.
ಈ ರೀತಿಯಯಲ್ಲೇ ಚಿಕಿತ್ಸಾ ಸೌಲಭ್ಯ ಸಿಗುವಂತೆ ಸಿಎಂ ಯಡಿಯೂರಪ್ಪ ಮಾಡುವ ಮೂಲಕ ಕೊರೊನಾ ಸೋಂಕಿನಿಂದ ಬಳಲುತ್ತಿರುವ ರಾಜ್ಯದ ಪ್ರತಿಯೊಬ್ಬರೂ ಗುಣಮುಖರಾಗಿ ಬರಲೆಂಬುವುದೆ ನಮ್ಮೆಲ್ಲರ ಹಾರೈಕೆ.