ಬಹುತೇಕ ಎಲ್ಲಾ ಆಸ್ಪತ್ರೆಗಳೂ ಕೋವಿಡ್ ರೋಗಿಗಳ ಚಿಕಿತ್ಸೆಗೆ ಮೀಸಲು: ಸಚಿವ ಡಾ.ಸುಧಾಕರ್
ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸರವೇಗೆದಲ್ಲಿ ಹಬ್ಬತ್ತಿರುವ ಕಾರಣ ಚಿಕಿತ್ಸೆಗೆ ಹಾಸಿಗೆಗಳ ಸಾಮರ್ಥ್ಯ ಹೆಚ್ಚಿಸುವ ತುರ್ತು ಪರಿಸ್ಥಿತಿ ಇದೆ. ಹೀಗಾಗಿ ಬೆಂಗಳೂರಿಗೆ ಆರೋಗ್ಯ ತುರ್ತು ಪರಿಸ್ಥಿತಿ ಎಂದೇ ವ್ಯಾಖ್ಯಾನಿಸುವ ಅಗತ್ಯವಿದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಂಕ್ರಾಮಿಕ ರೋಗ ಕಾಯ್ದೆ ಮತ್ತು ವಿಪತ್ತು ನಿರ್ವಹಣಾ ಕಾಯ್ದೆ ಪ್ರಕಾರ, ಬೆಂಗಳೂರು ಸೇರಿದಂತೆ ರಾಜ್ಯದಲ್ಲಿರುವ ಎಲ್ಲಾ ವೈದ್ಯಕೀಯ ಕಾಲೇಜುಗಳನ್ನೂ ಸಂಪೂರ್ಣ ಇನ್ನು ಮೂರ್ನಾಲ್ಕು ದಿನಗಳೊಳಗೆ ಕೋವಿಡ್ ರೋಗಿಗಳ ಚಿಕಿತ್ಸೆಗೆ ಮೀಸಲಿಡಬೇಕೆಂದು ಸರ್ಕಾರ ಇಂದು ಆದೇಶ ಹೊರಡಿಸಲಿದೆ ಎಂದು ವಿವರಿಸಿದರು.
ಇದರಲ್ಲಿ ಪ್ರಮುಖವಾಗಿ ಬೆಂಗಳೂರಿನಲ್ಲಿರುವ 13 ಖಾಸಗಿ ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಕೋವಿಡ್ ಯೇತರ ಪ್ರಕರಣಗಳಲ್ಲಿ ಅಂದರೆ, ತಾಯಿ ಮತ್ತು ಮಗುವಿನ ಹಾಸಿಗೆಗಳು, ಡಯಾಲಿಸಿಸ್ ಹಾಸಿಗೆಗಳು ಸೇರಿ ಎಲ್ಲಾ ತುರ್ತು ಚಿಕಿತ್ಸೆ ಮಾಡುವಂತಹ ಹಾಸಿಗೆಗಳನ್ನು ಹೊರತುಪಡಿಸಿ ಉಳಿದವುಗಳೆಲ್ಲವನ್ನೂ ಕೋವಿಡ್ ರೋಗಿಗಳ ಚಿಕಿತ್ಸೆಗೆ ಮೀಸಲಿಡಬೇಕೆಂದು ಆದೇಶ ಹೊರಡಿಸಲಾಗುವುದು ಎಂದರು.
ಹೀಗೆ ಮಾಡುವುದರಿಂದ ಬೆಂಗಳೂರು ನಗರವೊಂದರಲ್ಲಿಯೇ ಏಳೂವರೆ ಸಾವಿರ ಹಾಸಿಗೆಗಳು ವೈದ್ಯಕೀಯ ಕಾಲೇಜುಗಳಲ್ಲಿ ಲಭ್ಯವಾಗುತ್ತದೆ. ಎಲ್ಲಾ 30 ಹಾಸಿಗೆಗಳಿಗಿಂತ ಹೆಚ್ಚು ಇರುವ ಖಾಸಗಿ ಆಸ್ಪತ್ರೆಗಳು ಬೆಂಗಳೂರಿನಲ್ಲಿ ಕಡ್ಡಾಯವಾಗಿ ಕೋವಿಡ್ ಯೇತರ ಚಿಕಿತ್ಸೆಗೆ ಮಾತ್ರ ಮೀಸಲಿಡುವಂತಹ ಆದೇಶ ಹೊರಡಿಸುತ್ತೇವೆ ಎಂದರು.
ಜೊತೆಗೆ 30 ಹಾಸಿಗೆಗಳಿಗಿಂತ ಮೇಲ್ಪಟ್ಟ ಖಾಸಗಿ ಆಸ್ಪತ್ರೆಗಳಲ್ಲಿ ಶೇಕಡಾ 80ರ ಅನುಪಾತದಲ್ಲಿ ಹಾಸಿಗೆಗಳನ್ನು ಕೋವಿಡ್ ಗೆ ಮಾತ್ರ ನೀಡಬೇಕು ಮತ್ತು ಸರ್ಕಾರ ನಿಗದಿಪಡಿಸಿದ ದರದಲ್ಲಿಯೇ ರೋಗಿಗಳಿಗೆ ಚಿಕಿತ್ಸೆ ನೀಡಬೇಕೆಂದು ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು.