CrimeNEWSನಮ್ಮಜಿಲ್ಲೆ

ಮೈಸೂರು: ನೀರಿನಲ್ಲಿ ಈಜಲು ಹೋದ ಜಿಲ್ಲೆ ನಾಲ್ವರು ಬಾಲಕರು ಸೇರಿ 6 ಮಂದಿ ನೀರುಪಾಲು

6 people death

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು/ ಮಂಡ್ಯ: ಎರಡು ಪ್ರತ್ಯಕೆ ಪ್ರಕರಗಳಲ್ಲಿ ಈಜಲು ಹೋಗಿದ್ದು ನಾಲ್ವರು ಬಾಲಕರು ಸೇರಿ 6 ಮಂದಿ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ತಿ.ನರಸೀಪುರ ಮತ್ತು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟ ತಾಲೂಕಿನಲ್ಲಿ ಸಂಭವಿಸಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದು ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಹೆಮ್ಮಿಗೆ ಗ್ರಾಮದಲ್ಲಿ ಗುರುವಾರ ಮಂಧ್ಯಾಹ್ನ ಸಂಭವಿಸಿದೆ.

ಗ್ರಾಮದ ರಾಜು ಎಂಬುವರ ಮಗ ಯಶವಂತ್ ಕುಮಾರ್ (15) ಮಂಚಯ್ಯ ಎಂಬುವರ ಮಗ ಮಹದೇವಪ್ರಸಾದ್ (14) ಮಲ್ಲಿಕಾರ್ಜುನ ಎಂಬುವರ ಪುತ್ರ ಆಕಾಶ್ (15) ಮತ್ತು ನಿಂಗರಾಜು ಎಂಬುವರ ಪುತ್ರ ಕಿಶೋರ್ (13) ಈಜಾಡಲು ಹೋಗಿದ್ದರು.

ಈಜಾಡುತ್ತಿದ್ದ ವೇಳೆ ನಾಲ್ವರು ಬಾಲಕರು ನೀರಿನಲ್ಲಿ ಮುಳುಗಿದ್ದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗ್ರಾಮಸ್ಥರು ಮತ್ತು ಪೊಲೀಸರ ದೌಡಾಯಿಸಿದ್ದು ಕಾರ್ಯಾಚರಣೆ ನಡೆಸಿದರು. ಈ ವೇಳೆ ಯಶವಂತ್ ಕುಮಾರ್ ಮಹದೇವಪ್ರಸಾದ್ ಮೃತದೇಹಗಳು ಪತ್ತೆಯಾಗಿದ್ದು, ಮತ್ತಿಬ್ಬರ ಪತ್ತೆಗಾಗಿ ಶೋಧಕಾರ್ಯ ಮುಂದುವರಿದಿದೆ.

ಸ್ಥಳದಲ್ಲಿ ಮೃತ ಬಾಲಕರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟುವಂತಿತ್ತು. ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದು ಪ್ರಕರದಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಸಮೀಪದ ವಿಶ್ವೇಶ್ವರಯ್ಯ ನಾಲೆಯಲ್ಲಿ ಈಜಲು ಹೋದವರು ನೀರುಪಾಲಾಗಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದ ಜವರೇಗೌಡ (34), ಬಸವೇಗೌಡ (26) ಮೃತರು. ಒಬ್ಬನ ಮೃತದೇಹ ಪತ್ತೆಯಾಗಿದ್ದು, ಮತ್ತೊಬ್ಬನಿಗಾಗಿ ಹುಡುಕಾಟ ನಡೆಯುತ್ತಿದೆ.

ಇಬ್ಬರೂ ನೆಂಟರ ಮನೆಗೆ ಬಂದು ಕಾವೇರಿ ನದಿಯಲ್ಲಿ ಈಜಲು‌ ಹೋಗಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಕೆ.ಆರ್.ಎಸ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ