CrimeNEWSನಮ್ಮಜಿಲ್ಲೆ

ಪಿರಿಯಾಪಟ್ಟಣ: ಟ್ರಾನ್ಸ್ ಫಾರ್ಮರ್ ರಿಪೇರಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್‌ಮನ್‌  ಸಾವು

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಪಿರಿಯಾಪಟ್ಟಣ: ವಿದ್ಯುತ್ ಟ್ರಾನ್ಸ್ ಫಾರ್ಮರ್ ರಿಪೇರಿ ಮಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಜೂನಿಯರ್  ಲೈನ್‌ಮನ್‌ ಒಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ಸಂಜೆ ನಡೆದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಅಮೀರ್ ಖಾನ್ (25) ಮೃತಪಟ್ಟವರು. ಈತ ಮೂಲತಃ ದಾವಣಗೆರೆಯವರಾಗಿದ್ದು,  ಪಿರಿಯಾಪಟ್ಟಣ ತಾಲೂಕಿನ ಕಣಗಾಲು ವಿದ್ಯುತ್ ಉಪ ಕೇಂದ್ರದಲ್ಲಿ ಲೈನ್‌ಮನ್‌ ಆಗಿ ಕೆಲಸ ನಿರ್ವಹಿಸುತ್ತಿದ್ದರು.

ಗುರುವಾರ ಸಂಜೆ 4ರ ಸಮಯದಲ್ಲಿ ಜೂನಿಯರ್ ಇಂಜಿನಿಯರ್ ಬಳಿ ಅನುಮತಿ ಪಡೆದು ತಾಲೂಕಿನ ಸುಬ್ಬಯ್ಯನಕೊಪ್ಪಲು ಗ್ರಾಮದ ಬಳಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ರಿಪೇರಿ ಮಾಡುತ್ತಿರುವಾಗ ಈ ಅವಘಡ ಸಂಭವಿಸಿದೆ.

ಸ್ಥಳೀಯ ಯುವತಿಯೊಂದಿಗೆ ನಿಶ್ಚಿತಾರ್ಥ
ಅಮೀರ್ ಖಾನ್ ಇತ್ತೀಚಿಗಷ್ಟೇ ನೌಕರಿ ಪಡೆದು ಸ್ಥಳೀಯ ಪಿರಿಯಾಪಟ್ಟಣದಲ್ಲಿ ವಾಸವಿರಬೇಕು ಎಂಬ ಮಹದಾಸೆಯಿಂದ ತಾಲೂಕಿನ ಕಣಗಾಲು ಗ್ರಾಮದ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದು ಮದುವೆ ಕೇವಲ 15 ದಿನ ಇರುವ ಮುನ್ನ ಈ ದುರ್ಘಟನೆ ನಡೆದಿದೆ.

ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮರಣೊತ್ತರ ಪರೀಕ್ಷೆ ಕಳುಹಿಸಲಾಗಿದ್ದು ಪ್ರಕರಣ ಕುರಿತು ಪೊಲೀಸರು ತನಿಖಾ ಕಾರ್ಯ ಆರಂಭಿಸಿದ್ದಾರೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ