Please assign a menu to the primary menu location under menu

NEWSರಾಜಕೀಯ

9990 ರಾಜ್ಯ ಪೊಲೀಸರಲ್ಲಿ ಕೊರೊನಾ ಪಾಸಿಟಿವ್‌

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೊರೊನಾ ಸೋಂಕಿನ ಎರಡನೇ ಅಲೆಗೆ ಕರ್ನಾಟಕಕ್ಕೆ ಕರ್ನಾಟಕವೇ ತತ್ತರಿಸಿ ಹೋಗಿದೆ. ಕಳೆದ 2020 ರ ಏಪ್ರಿಲ್ ತಿಂಗಳಿನಿಂದ ಇಂದಿನವರೆಗೂ ರಾಜ್ಯದಲ್ಲಿ ಪ್ರತಿನಿತ್ಯ 27 ಪೊಲೀಸ್ ಸಿಬ್ಬಂದಿ ಹಾಗೂ ಹೋಂ ಗಾರ್ಡ್ ಸಿಬ್ಬಂದಿಗೆ ಸೋಂಕು ತಗುಲಿರುವುದು ತಿಳಿದುಬಂದಿದೆ.

ರಾಜ್ಯದಲ್ಲಿ ಈವರೆಗೂ 9990 ಪೊಲೀಸ್ ಸಿಬ್ಬಂದಿ ಹಾಗೂ ಹೋಂ ಗಾರ್ಡ್ ಸಿಬ್ಬಂದಿಗೆ ವೈರಸ್ ಕಾಣಿಸಿಕೊಂಡಿದ್ದು ಇದುವರೆಗೂ 107 ಭದ್ರತಾ ಸಿಬ್ಬಂದಿ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ.

ಕರ್ನಾಟಕದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬವನ್ನು ಕೋವಿಡ್-19 ಮಹಾಮಾರಿ ಯಿಂದ ರಕ್ಷಿಸುವುದಕ್ಕಾಗಿ ಬಹುಪಾಲು ಸಿಬ್ಬಂದಿಗೆ ಲಸಿಕೆ ನೀಡಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್‌ ಹೇಳಿಸಿದ್ದು, ಒಂದು ಲಕ್ಷಕ್ಕೂ ಅಧಿಕ ಭದ್ರತಾ ಸಿಬ್ಬಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕರ್ನಾಟಕದಲ್ಲಿ ಕೊರೊನಾ ಸೋಂಕಿನ ಮೊದಲನೆಯ ಸಂದರ್ಭದಲ್ಲಿ 9696 ಪೊಲೀಸ್ ಸಿಬ್ಬಂದಿಗೆ ಸೋಂಕು ತಗುಲಿದೆ. 2021 ಏಪ್ರಿಲ್ ಒಂದರಿಂದ ಅಂಕಿಅಂಶದ ಪ್ರಕಾರ 295 ಭದ್ರತಾ ಸಿಬ್ಬಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಆಡಳಿತ ವಿಭಾಗದ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ತಿಳಿಸಿದ್ದಾರೆ.

ಕಳೆದ ಒಂದು ವರ್ಷದಲ್ಲಿ ರಾಜ್ಯದ ಶೇಕಡ ಹತ್ತರಷ್ಟು ಪೊಲೀಸ್ ಸಿಬ್ಬಂದಿಗೆ ಸೋಂಕು ತಗಲಿದೆ ಎಂದು ಪ್ರವೀಣ್ ಸೂದ್ ಅವರು ತಿಳಿಸಿದ್ದಾರೆ. ಅಲ್ಲದೆ ನಾವು ಶೇಕಡ ಒಂದರಷ್ಟು ಸಿಬ್ಬಂದಿಯನ್ನು ಕಳೆದುಕೊಂಡಿದ್ದೇವೆ. ಕೊರೊನಾ ಸೋಂಕಿನಿಂದ ಜೀವಕಳೆದುಕೊಂಡವರ ಕುಟುಂಬಕ್ಕೆ ತಲಾ 30 ಲಕ್ಷ ರೂಪಾಯಿ ಪರಿಹಾರ ನೀಡಲಾಗಿದೆ ಎಂದು ವಿವರಿಸಿದರು.

ರಾಜ್ಯದಲ್ಲಿ ಸದ್ಯಕ್ಕೆ 76000 ಪೊಲೀಸ್ ಸಿಬ್ಬಂದಿಗೆ ಕೊರೊನಾ ಲಸಿಕೆಯನ್ನು ನೀಡಿದ್ದು 46000 ಸಿಬ್ಬಂದಿ ಎರಡನೇ ಲಸಿಕೆ ಪಡೆದುಕೊಂಡಿದ್ದಾರೆ. ಬಹುತೇಕ ಎಲ್ಲಾ ಸಿಬ್ಬಂದಿಗೆ ನೀಡಲಾಗುವುದು. ಪೊಲೀಸ್ ಸಿಬ್ಬಂದಿಯ ಕುಟುಂಬದ ಸದಸ್ಯರಿಗೂ ಮುಂಜಾಗ್ರತಾ ದೃಷ್ಟಿಯಿಂದ ಲಸಿಕೆ ನೀಡಲಾಗುವುದು ಎಂದು ಪ್ರವೀಣ್ ಸೂದ್ ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋ... KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!? BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್‌ ಸಮಾವೇಶ ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್