Please assign a menu to the primary menu location under menu

CrimeNEWSನಮ್ಮಜಿಲ್ಲೆ

ಕುಷ್ಟಗಿ ಪುರಸಭೆ ಉಪಾಧ್ಯಕ್ಷೆ ರಾಜೇಶ್ವರಿ ಆಡೂರು ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಕೊಪ್ಪಳ: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಜಿಲ್ಲೆಯ ಕುಷ್ಟಗಿ ಪುರಸಭೆ ಉಪಾಧ್ಯಕ್ಷೆ ರಾಜೇಶ್ವರಿ ಆಡೂರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅವರು ಗುರುವಾರ ಸಂಜೆ ತಮ್ಮ ‌ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಜೇಶ್ವರಿ ಪತಿ ಸಿದ್ದಪ್ಪ ಆಡೂರು ದೂರಿನಲ್ಲಿ ತಿಳಿಸಿದ್ದಾರೆ.

ಗುರುವಾರ ಪುರಸಭೆ ಸಭಾಂಗಣದಲ್ಲಿ ಕೋವಿಡ್ ಮುಂಜಾಗ್ರತಾ ಸಭೆಯಲ್ಲಿ ಭಾಗವಹಿಸಿದ್ದರು. ನಂತರ ಮನೆಗೆ ಮರಳಿ ನೇಣಿಗೆ ಶರಣರಾಗಿದ್ದಾರೆ. ಕುಷ್ಟಗಿ ಪಟ್ಟಣದ 16ನೇ ವಾರ್ಡ್ ಪಕ್ಷೇತರ ಸದಸ್ಯೆಯಾಗಿ ಚುನಾಯಿತರಾಗಿದ್ದರು. ನಂತರ ಬಿಜೆಪಿಯೊಂದಿಗೆ ಕೈ ಜೋಡಿಸಿ ಪುರಸಭೆ ಉಪಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿದ್ದರು.

ಪತಿ ಸಿದ್ದಪ್ಪ ಆಡೂರು ತಾಲೂಕಿನ ಬೋದೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾಗಿದ್ದಾರೆ.

ಮೃತರು ಪತಿ‌, ಮೂವರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಆತ್ಮಹತ್ಯೆ ಸಂಬಂಧ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!? BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್‌ ಸಮಾವೇಶ ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್ ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ