NEWSದೇಶ-ವಿದೇಶರಾಜಕೀಯ

ಬಡವ-ಬಲ್ಲಿದನೆಂಬ ತಾರತಮ್ಯ ತೋರದೆ ರಾಜ್ಯದ ಎಲ್ಲಾ ಜನತೆಗೆ ಉಚಿತವಾಗಿ ಕೊರೊನಾ ಲಸಿಕೆ ನೀಡಿ: ಎಚ್‌ಡಿಕೆ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಭಾರತದಲ್ಲಿ ಕೋವಿಡ್‌-19 ಪ್ರಕರಣಗಳ ಏರಿಕೆ ನಡುವೆ ಮೇ 1ರಿಂದ ಮೂರನೇ ಹಂತದ ಲಸಿಕಾ ಅಭಿಯಾನ ಆರಂಭವಾಗುತ್ತಿದೆ. ಈ ಹಂತದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಪ್ರಧಾನಿ ಘೋಷಣೆ ಬೆನ್ನಲ್ಲೇ ಹಲವು ರಾಜ್ಯಗಳು ನಾಗರಿಕರಿಗೆ ಉಚಿತವಾಗಿ ಲಸಿಕೆ ನೀಡುವ ತೀರ್ಮಾನ ಕೈಗೊಂಡಿವೆ. ಇದೀಗ ಕರ್ನಾಟಕ ರಾಜ್ಯದಲ್ಲಿಯೂ 18 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಕೊರೊನಾ ಲಸಿಕೆಗಳನ್ನು ನೀಡಬೇಕು ಎಂಬ ಒತ್ತಾಯ ಯುವ ಸಮೂಹದಿಂದ ಹೆಚ್ಚಾಗಿ ಕೇಳಿ ಬರುತ್ತಿದೆ.

ಆ ಯುವ ಸಮೂಹದ ಒತ್ತಾಯಕ್ಕೆ ಬೆಂಬಲ ಸೂಚಿಸಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು, ಮೇ ತಿಂಗಳ 1 ರಿಂದ ‌18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲು ಕೇಂದ್ರ ಸರಕಾರ ತೆಗೆದುಕೊಂಡಿರುವ ತೀರ್ಮಾನದಂತೆ, ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಆರುವರೆ ಕೋಟಿ ಜನತೆಗೂ ಉಚಿತವಾಗಿ ಲಸಿಕೆಯನ್ನು ನೀಡುವ ಮೂಲಕ ನೆರವಿಗೆ ಧಾವಿಸಬೇಕೆಂದು ಮನವಿ ಮಾಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ಈಗಾಗಲೇ ಜಾರ್ಖಂಡ್, ಗೋವಾ, ಛತ್ತೀಸ್‌ಘಡ, ಉತ್ತರ ಪ್ರದೇಶ, ಅಸ್ಸಾಂ, ಮಧ್ಯಪ್ರದೇಶ, ಕೇರಳ, ಬಿಹಾರ ಮತ್ತು ಸಿಕ್ಕಿಂನಲ್ಲಿ ಲಸಿಕೆಯನ್ನು ಉಚಿತವಾಗಿ ನೀಡುವುದಾಗಿ ಘೋಷಿಸಲಾಗಿದೆ. ಈಗ ಕರ್ನಾಟಕ ರಾಜ್ಯದಲ್ಲಿಯೂ ಸಹ ಇದೇ ಕ್ರಮ ಅನುಸರಿಸಬೇಕು‌ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ‌ನನ್ನ ಕೋರಿದ್ದಾರೆ.

ಈಗಿನ ಸಂದರ್ಭದಲ್ಲಿ ಜನರು ಹಣ ಕೊಟ್ಟು ಲಸಿಕೆ ಪಡೆಯಲು ಸಾಧ್ಯವಿಲ್ಲ. ಹೀಗಾಗಿ ಸರಕಾರವೇ ಮುಂದೆ ಬಂದು 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವ ತೀರ್ಮಾನವನ್ನು ಪ್ರಕಟಿಸಬೇಕೆಂಬುದು ನನ್ನ ‌ಆಗ್ರಹವಾಗಿದೆ.

ಸುಮಾರು ಒಂದು ಕೋಟಿ ಡೋಸ್ ಲಸಿಕೆ ಕೊಳ್ಳಲು 400 ಕೋಟಿ ರೂ ಮೀಸಲಿಡಲಾಗಿದೆ. ಸರಿಸುಮಾರು ₹2.50 ಲಕ್ಷ ಕೋಟಿ ಬಜೆಟ್ ಮಂಡನೆ ಮಾಡುವ ಸರಕಾರಕ್ಕೆ ಕನಿಷ್ಠ ಪಕ್ಷ ₹2 ಸಾವಿರ ಕೋಟಿ ಹಣವನ್ನು ಲಸಿಕೆ ಖರೀದಿ ಮಾಡಲು ಮೀಸಲಿಡುವುದರಿಂದ ಬೊಕ್ಕಸಕ್ಕೆ ಭಾರೀ ಹೊರೆಯಾಗದು.

ಬಡವ-ಬಲ್ಲಿದನೆಂಬ ತಾರತಮ್ಯ ತೋರದೆ ರಾಜ್ಯದ ಎಲ್ಲಾ ಜನತೆಗೆ ಉಚಿತವಾಗಿ ಲಸಿಕೆ ನೀಡುವ ಮಹತ್ವದ ನಿರ್ಧಾರ ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಈ ಮೂಲಕ ಆಗ್ರಹಿಸುತ್ತೇನೆ.

ರಾಜ್ಯದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವಂತೆ ಒಂದೂವರೆ ತಿಂಗಳ ಹಿಂದೆಯೇ ಸರ್ಕಾರಕ್ಕೆ ಸಲಹೆ ನೀಡಿದ್ದೆ. ಪಲ್ಸ್ ಪೋಲಿಯೋ ಲಸಿಕೆ ನೀಡಿದ ಮಾದರಿಯಲ್ಲಿ ಎಲ್ಲರಿಗೂ ಉಚಿತವಾಗಿ ಕೊರೊನಾ ಲಸಿಕೆ ನೀಡುವ ನಿರ್ಧಾರ ಕೈಗೊಂಡರೆ ಅದು ಅಭಿನಂದನಾರ್ಹ ಎಂದು ಸ್ವಾಗತಿಸಿದ್ದಾರೆ.

Leave a Reply

error: Content is protected !!
LATEST
ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ !