NEWSನಮ್ಮರಾಜ್ಯ

ಏ.27ರ ರಾತ್ರಿ 9ಗಂಟೆಯಿಂದ 14 ದಿನ ರಾಜ್ಯದಲ್ಲಿ ಲಾಕ್‌ಡೌನ್‌: ಸಾರಿಗೆ ಸಂಪೂರ್ಣ ಸ್ತಬ್ಧ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯವನ್ನು 14ದಿನ ಲಾಕ್‌ಡೌನ್‌ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇಂದು ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.27ರ ರಾತ್ರಿ 9ಗಂಟೆಯಿಂದ ಮೇ 10ರವರೆಗೆ ಇಡೀ ರಾಜ್ಯಾದ್ಯಂತ ಲಾಕ್‌ ಇರಲಿದೆ ಎಂದು ತಿಳಿಸಿದರು.

ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸಾರಿಗೆ, ಮೆಟ್ರೋ ರೈಲು ಸಂಚಾರವನ್ನೂ ಸಂಪೂರ್ಣ ನಿಲ್ಲಿಸಲಾಗುವುದು, ಗಾರ್ಮೆಂಟ್ಸ್‌ ಕೂಡ ಇರುವುದಿಲ್ಲ. ಇನ್ನು ಕಟ್ಟಡ ಕಾಮಗಾರಿ, ಕೃಷಿ ಚಟುವಟಿಕೆಗಳು ನಡೆಯಲಿವೆ. ನಿತ್ಯ ಬೆಳಗ್ಗೆ 6ಗಂಟೆಯಿಂದ ಬೆಳಗ್ಗೆ 10ಗಂಟೆ ವರೆಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಇನ್ನು ರಾಜ್ಯದಲ್ಲಿ ಆಮ್ಲಜನಕದ ಕೊರತೆ ಇರುವುದಿಲ್ಲ. ರೆಮ್‌ಡಿಸಿವರ್‌ ಔಷಧವು ದೊರೆಯಲಿದೆ. ಇನ್ನು ಈ 14 ದಿನದಲ್ಲೂ ಕೊರೊನಾ ನಿಯಂತ್ರಣಕ್ಕೆ ಬಾರದಿದ್ದರೆ, ಮತ್ತೆ ಮುಂದುವರಿಯ ಬಹುದು ಎಂಬ ಎಚ್ಚರಿಕೆಯನ್ನು ನೀಡಿದರು.

ಪ್ರತಿಯೊಬ್ಬರೂ ಅಂತರ ಕಾಯ್ದುಕೊಂಡು, ಮಾಸ್ಕ್‌ ಧರಿಸಿ ಕೈಗಳನ್ನು ಸ್ವಚ್ಛಗೊಳಿಸಿಕೊಂಡು ಕೊರೊನಾ ತಡೆಗೆ ಸಹಕರಿಸಬೇಕು ಎಂದು ತಿಳಿಸಿದರು.

Leave a Reply

error: Content is protected !!
LATEST
BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ