CrimeNEWSಸಿನಿಪಥ

ಕೋಟಿ ನಿರ್ಮಾಪಕ, ಖ್ಯಾತ ನಟಿ ಮಾಲಾಶ್ರೀ ಪತಿ ರಾಮು ಕೊರೊನಾಗೆ ಬಲಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಿನಿ ಸುದ್ದಿ
ಬೆಂಗಳೂರು: ಚಂದನವನದಲ್ಲಿ ಕೋಟಿ ನಿರ್ಮಾಪಕ ಎಂದೇ ಖ್ಯಾತರಾಗಿದ್ದ ಹಾಗೂ ಖ್ಯಾತ ನಟಿ ಮಾಲಾಶ್ರೀ ಪತಿ ರಾಮು (52 ) ಅವರು ಕೊರೊನಾ ಸೋಂಕಿನಿಂದ ಸೋಮವಾರ ಮೃತಪಟ್ಟಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕಳೆದ ಒಂದು ವಾರದ ಹಿಂದೆಯಷ್ಟೇ ನಿರ್ಮಾಪಕ ರಾಮು ಅವರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿತ್ತು. ಮೂರು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಮು ಅವರು ಸೋಮವಾರ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಗೋಲಿಬಾರ್, ಎಕೆ 47, ಸಿಂಹದ ಮರಿಯಂತಹ ಬ್ಲಾಕ್ ಬಸ್ಟರ್ ಚಿತ್ರಗಳನ್ನು ನಿರ್ಮಿಸಿ ಕನ್ನಡದ ಕೋಟಿ ನಿರ್ಮಾಪಕ ಎಂದೇ ಖ್ಯಾತರಾಗಿದ್ದರು. ರಾಮು ಅವರ ಆರೋಗ್ಯದಲ್ಲಿ ಏರು ಪೇರು ಉಂಟಾದ ಹಿನ್ನೆಲೆಯಲ್ಲಿ ಮೂರು ದಿನಗಳ ಹಿಂದೆ ನಗರದ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಮೃತರು ಪತ್ನಿ, ಪುತ್ರ ಮತ್ತು ಪುತ್ರಿ ಸೇರಿ ಬಂಧು ಬಳಗವನ್ನು ಅಗಲಿದ್ದಾರೆ. ಕನ್ನಡ ಚಿತ್ರರಂಗದಲ್ಲಿ 39 ಚಿತ್ರಗಳನ್ನು ನಿರ್ಮಿಸಿದ್ದಾರೆ. ಗೋಲಿಬಾರ್ ಚಿತ್ರದ ನಿರ್ಮಾಣದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದರು. ಇನ್ನು ಮೊದಲಿಗೆ ಕನ್ನಡದಲ್ಲಿ ಕೋಟಿ ಬಜೆಟ್ ನಲ್ಲಿ ಚಿತ್ರ ನಿರ್ಮಿಸಿದ್ದರಿಂದ ಅವರಿಗೆ ಕೋಟಿ ರಾಮು ಎಂದು ಹೆಸರು ಬಂದಿತ್ತು.

Leave a Reply

error: Content is protected !!
LATEST
BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ