Please assign a menu to the primary menu location under menu

NEWSನಮ್ಮರಾಜ್ಯರಾಜಕೀಯ

ಏಪ್ರಿಲ್‌ 26- ರಾಜ್ಯದಲ್ಲಿ 29,744 ಹೊಸ ಕೊರೊನಾ ಸೋಂಕಿತರು, 201 ಮಂದಿ ಬಲಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೊನಾ ರೌದ್ರಾವತಾರ ಮುಂದುವರಿಸಿದ್ದು ಇಂದು ದಾಖಲೆಯ 29744 ಪ್ರಕರಣ ಪತ್ತೆಯಾಗಿದ್ದು 201 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ 29744 ಕೊರೊನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 281042 ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 14627ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಚೇತರಿಕೆ ಪ್ರಮಾಣವು ಕುಗ್ಗುತ್ತಿದ್ದು ಇಂದು 10663 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 1368945 ಕೊರೊನಾ ಸೋಂಕಿತರಲ್ಲಿ 1073257 ಮಂದಿ ಗುಣಮುಖರಾಗಿದ್ದು ಇನ್ನು281042 ಮಂದಿ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ 1815 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಇಂದು 16545 ಮಂದಿ ಕೊರೊನಾಗೆ ಒಳಗಾಗಿದ್ದು, ಸೋಂಕಿತರ ಸಂಖ್ಯೆ 670201 ಕ್ಕೆ ಏರಿಕೆಯಾಗಿದೆ. ಇಂದು 105 ಮಂದಿ ಮೃತಪಟ್ಟಿದ್ದು ಒಟ್ಟಾರೆ ಸಾವಿನ ಸಂಖ್ಯೆ 5905 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 192669 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್‌ ನಲ್ಲಿ ತಿಳಿಸಿದೆ.

Leave a Reply

error: Content is protected !!
LATEST
KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋ... KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!? BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್‌ ಸಮಾವೇಶ ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್