ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೊರೊನಾ ಸಂಕಷ್ಟದಲ್ಲಿ ಹಸಿವಿನಿಂದ ಬಳಲುವ ಜನರ ನೆರವಿಗೆ ಬರಬೇಕಾದ ಆಹಾರ ಸಚಿವರೇ ದರ್ಪದ ಉತ್ತರ ನೀಡಿ ಮಾನಸಿಕ ವಿಕೃತಿ ಮೆರೆದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಿರಿಕಾರಿದ್ದಾರೆ.
ಇದನ್ನೂ ಓದಿರಿ: 2ಕೆಜಿ ಪಡಿತರ ಅಕ್ಕಿ ಸಾಕಾಗುತ್ತಾ ಎಂದಿದ್ದಕ್ಕೆ ಸಾಲದಿದ್ದರೆ ಸಾಯೋದೆ ಒಳ್ಳೇದು ಎಂದ ಸಚಿವ ಕತ್ತಿ
ರಾಜ್ಯ ಸರ್ಕಾರ ಪಡಿತರ ಅಕ್ಕಿ ಕಡಿತಗೊಳಿಸಿದನ್ನು ಸಚಿವರಿಗೆ ಕರೆ ಮಾಡಿ ಪ್ರಶ್ನಿಸಿದ ವ್ಯಕ್ತಿಯೊಬ್ಬರಿಗೆ ಸಾಯೋದು ಒಳ್ಳೆಯದು ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿರುವುದು ಅತ್ಯಂತ ಅಮಾನವೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನು ತೀವ್ರವಾಗಿ ಖಂಡಿಸುವೆ. ಜನಸಾಮಾನ್ಯರ ಬಗ್ಗೆ ಕನಿಷ್ಠ ಕಾಳಜಿ ಇಲ್ಲದ ಇಂತಹ ಸಚಿವರನ್ನು ಸಂಪುಟದಿಂದ ಕಿತ್ತೊಗೆಯುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ.