Breaking NewsCrimeNEWSಸಿನಿಪಥ

ಅಣ್ಣಯ್ಯ ಸಿನಿಮಾ ಖ್ಯಾತಿಯ ನಿರ್ಮಾಪಕ ಚಂದ್ರಶೇಖರ್ ಕೊರೊನಾಗೆ ಬಲಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕನ್ನಡ ಚಿತ್ರ ನಿರ್ಮಾಪಕ, ಸುದೀಪ್ ನಟನೆಯ ‘ರನ್ನ’ ಮತ್ತು ರವಿಚಂದ್ರನ್ ನಟನೆಯ ಅಣ್ಣಯ್ಯ ಸಿನಿಮಾ ಖ್ಯಾತಿಯ ನಿರ್ಮಾಪಕ ಎಂ. ಚಂದ್ರಶೇಖರ್ ಕೊರೊನಾಗೆ ಬಲಿಯಾಗಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕೋವಿಡ್‌ನಿಂದ ಬಳಲಿದ್ದ ಅವರು, ಕೆಲ ದಿನಗಳ ಹಿಂದಷ್ಟೇ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಮೃತರು ಪತ್ನಿ, ಓರ್ವ ಪುತ್ರಿ, ಪುತ್ರನನ್ನು ಅಗಲಿದ್ದಾರೆ.

ನಿಮಿಷಾಂಬ ಪ್ರೊಡಕ್ಷನ್ ನ ಅಣ್ಣಯ್ಯ, ಬಿಂದಾಸ್, ಏನೋ ಒಂಥರಾ, ರನ್ನ ಸೇರಿದಂತೆ ಅನೇಕ ಸೂಪರ್ ಹಿಟ್ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಸ್ಯಾಂಡಲ್ ವುಡ್ ನ ಅನ್ನದಾತನನ್ನು ಈಗ ಕೊರೊನಾ ಬಲಿ ಪಡೆದಿದೆ.

ಕಳೆದ 23 ದಿನಗಳ ಹಿಂದೆ ಚಂದ್ರಶೇಖರ್ ಅವರಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿತ್ತು. ನಂತರ ಮಣಿಪಾಲ್ ಸೆಂಟರ್‌ಗೆ ದಾಖಲಾಗಿದ್ದರು. ಬಳಿಕ ಕೋವಿಡ್ ನಿಂದ ಗುಣಮುಖರಾಗಿದ್ದಾದರೂ ಶ್ವಾಸಕೋಶ ಸಮಸ್ಯೆ ಉಲ್ಬಣಗೊಂಡು ಇಂದು (ಏಪ್ರಿಲ್ 29) ಕೊನೆಯುಸಿರೆಳೆದಿದ್ದಾರೆ.

ನಿರ್ಮಾಪಕ ಚಂದ್ರಶೇಖರ್ ಇತ್ತೀಚೆಗಷ್ಟೆ ನಿರ್ದೇಶಕ ಮಂಜು ಮಾಂಡವ್ಯ ನಿರ್ದೇಶನದ ಉಪೇಂದ್ರ ನಟನೆಯ ಹೊಸ ಸಿನಿಮಾ ಅನೌನ್ಸ್ ಮಾಡಿದ್ದರು.

ಮೊನ್ನೆ ಕೋಟಿ ರಾಮು ವರನ್ನು ಕಳೆದುಕೊಂಡಿದ್ದ ಸ್ಯಾಂಡಲ್ ವುಡ್ ಇಂದು ಮತ್ತೊಬ್ಬ ನಿರ್ಮಾಪಕನನ್ನು ಕಳೆದುಕೊಂಡಿದೆ. ಇದು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಎಂದು ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

Leave a Reply

error: Content is protected !!
LATEST
BMTC: 2020 ಜ.1ರಿಂದ 2023 ಮಾ.31ರ ನಡುವೆ ನಿವೃತ್ತರಾದ ನೌಕರರ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಲೆಕ್ಕಾಚಾರ ಮಾಡ... 4ನಿಗಮಗಳ ಅಧಿಕಾರಿಗಳು-ನೌಕರರಿಗೂ ಸರಿಸಮಾನ ವೇತನ ಕೊಡಿ: ಸಾರಿಗೆ ಸಚಿವರು, ಅಧಿಕಾರಿಗಳಿಗೆ KSRTC ಸಿಬ್ಬಂದಿ, ಲೆಕ್ಕ ಪತ್... ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಣೆಗೆ ಅರ್ಜಿ ಆಹ್ವಾನ ಅ.28ರಂದು ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC ‍& KSRTC ಸಂಘದ ಕಾರ್ಯಾಧ್ಯಕ್ಷ ನಂಜುಂಡೇಗೌಡ BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ