ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೊರೊನಾ ಮಹಾಮಾರಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ರಾಜ್ಯದ ಎಲ್ಲಾ ಡಿಸಿಗಳು, ಎಸ್ಪಿಗಳು, ಸಿಇಒಗಳ ಜೊತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಡಿಯೋ ಸಂವಾದದ ಮೂಲಕ ಮಹತ್ವದ ಸಭೆ ನಡೆಸಿದರು.
ಮೇ 12ರ ವರೆಗೆ ಸರ್ಕಾರ ವಿಧಿಸಿರೋ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವ ಜವಾಬ್ದಾರಿ ನಿಮ್ಮ ಮೇಲೆ ಇದೆ. ಯಾವುದೇ ಮುಲಾಜಿಲ್ಲದೆ ಅದನ್ನು ಕಾರ್ಯರೂಪಕ್ಕೆ ತರುವ ಹೊಣೆ ನಿಮ್ಮ ಮೇಲಿದೆ. ಜನರಿಗೆ ತೊಂದರೆ ಆಗದ ರೀತಿ ಅವರ ನಿತ್ಯ ವಸ್ತುಗಳ ಖರೀದಿಗೆ ಸಮಯ ನಿಗದಿ ಮಾಡಲಾಗಿದೆ.
ಈ ಸಮಯ ಮುಗಿದ ನಂತರ ಜನರು ಓಡಾಡಬಾರದು. ಜನರು ಓಡಾಡದಂತೆ ಪೊಲೀಸರು ನಿಗಾ ವಹಿಸಬೇಕು. ಅಗತ್ಯ ವಸ್ತುಗಳ ಖರೀದಿಗೆ ಬಂದಾಗ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಜನರು ಮಾಸ್ಕ್ ಧರಿಸಿ, ಸೋಷಿಯಲ್ ಡಿಸ್ಟೇನ್ಸ್ ನಲ್ಲಿ ಇರಬೇಕು. ಈ ನಿಟ್ಟಿನಲ್ಲಿ ಜಿಲ್ಲೆಗಳಲ್ಲಿ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಸಭೆ ಬಳಿಕ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್ ಸಿಎಂ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಸಭೆ ನಡೆದಿದೆ. ಯಾವ ಜಿಲ್ಲೆಗಳಲ್ಲಿ ಹಎಚ್ಚಾಗಿ ಕೋವಿಡ್ ಪಾಸಿಟಿವ್ ಬರ್ತಿದೆ. ಏನೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಸಿಎಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದರು.
ಇನ್ನು ಕೋವಿಡ್ ಪರಿಹಾರ ನಿಧಿಗೆ ಸಚಿವರ ಒಂದು ವರ್ಷದ ವೇತನ ನೀಡುವ ಬಗ್ಗೆ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗಿದೆ ಎಂದರು. ಜಿಲ್ಲೆಗಳಲ್ಲಿ ಲಭ್ಯ ಅಲಭ್ಯತೆಯ ವ್ಯಾಕ್ಸಿಜನ್ ,ಆಕ್ಸಿಜನ್ ಬಗ್ಗೆ ಮಾಹಿತಿ ನೀಡಿದ್ದಾರೆ. ಬಯಲಲ್ಲಿ ಶವ ಸುಡಲು ತಯಾರಿ ನಡೆಸಿದ್ದೇವೆ. ಒಟ್ಟು 100 ಶವಗಳನ್ನು ಸುಡುವ ವ್ಯವಸ್ಥೆಯಾಗಿದೆ. 230 ಎಕರೆ ಜಮೀನಿನಲ್ಲಿ ಸ್ಮಶಾನಕ್ಕೆ ರೆಡಿ ಮಾಡಿದ್ದೇವೆ ಎಂದು ಅಶೋಕ್ ತಿಳಿಸಿದರು.
ಗೃಹ ಸಚಿವ ಬಸವರಾಜ್ ಬೊಮ್ಮಯಿ ಮಾತನಾಡಿ, ಎಲ್ಲಾ ಜೈಲುಗಳಿಗೆ ತೆರಳಿ ಸ್ಯಾನಿಟೈಸರ್ ಮಾಡಲಾಗುತ್ತದೆ. 5 ಮಂದಿ ಎಡಿಜಿಪಿಗಳನ್ನು ಉಸ್ತುವಾರಿಗೆ ನೇಮಿಸಲಾಗಿದೆ.
ಬಾಂಗ್ಲಾ ದೇಶದಿಂದ ರಮ್ ಡಿಸಿವರ್ ವ್ಯಾಕ್ಸಿನ್ ಲೇಬಲ್ ಹಾಕಿ ಸಪ್ಲೈ ಮಾಡಲಾಗಿದೆ. ಇದರ ಬಗ್ಗೆ ಸಿಸಿಬಿ ತನಿಖೆ ನಡೆಸುತ್ತಿದೆ. ಡಿಸ್ಟ್ರಿಬ್ಯೂಟರ್ ಅರೆಸ್ಟ್ ಮಾಡಲಾಗಿದೆ. ತನಿಖೆ ಪ್ರಗತಿಯಲ್ಲಿದೆ. ಸಂಬಂಧಿಸಿದ ಎಲ್ಲರನ್ನು ಈಗಾಗಲೇ ಬಂಧಿಸಲಾಗಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿ @BSYBJP ರವರು ಇಂದು ಜಿಲ್ಲೆಗಳ ಉಸ್ತುವಾರಿ ಸಚಿವರು, ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ನಡೆಸಿದ ವೀಡಿಯೋ ಕಾನ್ಫರೆನ್ಸ್ ನ ಮುಖ್ಯಾಂಶಗಳು;#KarnatakaFightsCorona#Unite2FightCorona pic.twitter.com/mSJmGsB1yA
— CM of Karnataka (@CMofKarnataka) April 29, 2021