Breaking NewsNEWSದೇಶ-ವಿದೇಶ

ನ್ಯಾಯಾಲಯಗಳ ಮೌಖಿಕ ಹೇಳಿಕೆ ಸುದ್ದಿಯಾಗಬಾರದು: ಚುನಾವಣಾ ಆಯೋಗದ ಮನವಿ ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಚೆನ್ನೈ: ನ್ಯಾಯಾಲಯಗಳು ಮೌಖಿಕವಾಗಿ ಹೇಳಿದ್ದನ್ನು ಮಾಧ್ಯಮಗಳು ಸುದ್ದಿ ಮಾಡಬಾರದೆಂದು ಭಾರತದ ಚುನಾವಣಾ ಆಯೋಗ ಕೋರ್ಟ್ ನಿರ್ದೇಶನ ಕೋರಿ ಸಲ್ಲಿಸಿದ ಮನವಿಯನ್ನು ಮದ್ರಾಸ್ ಹೈಕೋರ್ಟ್ ವಜಾಮಾಡಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಸುಮೋಟು ಮನವಿಯ ವಿಚಾರಣೆ ಸಂದರ್ಭದಲ್ಲಿ ಶುಕ್ರವಾರ ಮುಖ್ಯ ನ್ಯಾಯಮೂರ್ತಿ ಸಂಜೀಬ್ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಸೆಂಥಿಲ್ಕುಮಾರ್ ರಾಮಮೂರ್ತಿ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠ ಭಾರತದ ಚುನಾವಣಾ ಆಯೋಗದ ಪರ ರಾಕೇಶ್ ದ್ವಿವೇದಿ ಸಲ್ಲಿಸಿದ ಮನವಿ ನಿರಾಕರಿಸಿದೆ.

ಯಾವುದನ್ನೂ ಸಂವೇದನಾಶೀಲಗೊಳಿಸದಂತೆ ಮಾಧ್ಯಮಗಳಿಗೆ ಸೂಚನೆ ನೀಡಬೇಕು, ಈ ಕಾಲದಲ್ಲಿ ಚುನಾವಣೆ ನಡೆಸುವುದು ಕಷ್ಟದ ಕೆಲಸ ಎಂದು ದ್ವಿವೇದಿ ಮನವಿ ಸಲ್ಲಿಸಿದ್ದರು, ಆದರೆ, ನ್ಯಾಯಪೀಠವು ನಾವು ಅದನ್ನು ಒಪ್ಪುವುದಿಲ್ಲ ಎಂದು ಹೇಳಿದೆ.

ಕೋವಿಡ್ -19 ಎರಡನೇ ಅಲೆ ನಡುವೆ ನಡೆದ ಚುನಾವಣಾ ರ್ಯಾಲಿಗಳ ಬಗ್ಗೆ ಕಣ್ಣುಮುಚ್ಚಿ ಕುಳಿತಿದ್ದಕ್ಕಾಗಿ ಮದ್ರಾಸ್ ಹೈಕೋರ್ಟ್ ಸೋಮವಾರ ” ಚುನಾವಣಾ ಆಯೋಗದ ಅಧಿಕಾರಿಗಳ ಮೇಲೆ ಕೊಲೆ ಪ್ರಕರಣ ದಾಖಲಿಸಬೇಕು ಎಂದು ಮೌಖಿಕವಾಗಿ ಹೇಳಿತ್ತು.

ಚುನಾವಣಾ ಅಧಿಕಾರಿಗಳನ್ನು ಕೊಲೆಗಾರರು ಎಂದು ಕರೆಯುವುದರ ವಿರುದ್ಧ ಎಫ್ಐಆರ್ ದಾಖಲಿಸಲು ಕೆಲವರು ಮುಂದಾಗಿದ್ದಾರೆ, ಅಂತಹವರಿಗೆ ರಕ್ಷಣೆ ನೀಡಬಹುದೆ ಎಂದು ಆಯೋಗದ ಪರ ವಕೀಲರು ಅರ್ಜಿಯಲ್ಲಿ ಕೇಳಿದ್ದರು, ಅದಕ್ಕೆ ಸಮ್ಮತಿಸಲು ನಿರಾಕರಿಸಿದ ನ್ಯಾಯಪೀಠ, ನ್ಯಾಯಾಲಯಗಳು ಅಂತಹ ಕ್ಷುಲ್ಲಕ ವಿಷಯಗಳನ್ನು ನಿಭಾಯಿಸಲು ಇರುವುದಲ್ಲ ಎಂದು ಅಭಿಪ್ರಾಯಪಟ್ಟಿದೆ.

ಕೋವಿಡ್ -19 ಲಸಿಕೆಗಳನ್ನು ತೆಗೆದುಕೊಳ್ಳಲು ಜನರನ್ನು ಪ್ರೋತ್ಸಾಹಿಸಲು ರಾಜ್ಯವು ವಿಶೇಷ ಅಭಿಯಾನಗಳನ್ನುನಡೆಸಬೇಕೆಂದು ನ್ಯಾಯಪೀಠ ತನ್ನ ವಿಚಾರಣೆಯಲ್ಲಿ ಸೂಚಿಸಿದೆ. ಎಣಿಕೆ ದಿನದಂದು ಎಲ್ಲಾ ರಾಜಕೀಯ ಪಕ್ಷಗಳು ಕೋವಿಡ್ -19 ಪ್ರೋಟೋಕಾಲ್ ಅನ್ನು ಅನುಸರಿಸಬೇಕೆಂದು ನ್ಯಾಯಾಲಯವು ನಿರ್ದೇಶಿಸಿತು ಮತ್ತು ವಿಜಯೋತ್ಸವದ ಅಂಗವಾಗಿ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮಾಚರಣೆಗಳನ್ನು ನಡೆಸಬಾರದು ಎಂದು ಸೂಚಿಸಿದೆ.

ಅಂತರ್ಜಾಲ ಮತ್ತು ಇನ್ನಾವುದೇ ಮಾಧ್ಯಮದಲ್ಲಿ ಮಾಹಿತಿ ಲಭ್ಯವಾಗಬೇಕು. ಆದ್ದರಿಂದ ಔಷಧ ಹುಡುಕುವುದರಲ್ಲಿ ಅಥವಾ ಆಮ್ಲಜನಕದ ಸರಬರಾಜುಗಳನ್ನು ಪಡೆಯುವಲ್ಲಿ ಅಥವಾ ಹತ್ತಿರದ ಬೆಡ್ ಉಪಲಭ್ಯತೆ ಕಂಡುಹಿಡಿಯುವಲ್ಲಿ ಯಾವುದೇ ಭೀತಿ ಉಂಟಾಗುವುದಿಲ್ಲಎಂದು ಹೇಳಿದೆ.

ಕೋವಿಡ್‌ ಲಸಿಕೆ, ಔಷಧ ಪ್ರಮಾಣಗಳ ಲಭ್ಯತೆಯ ಸ್ಪಷ್ಟ ಚಿತ್ರ ಮೇ 3 ರೊಳಗೆ ಲಭ್ಯವಾಗಲಿದೆ ಎಂದು ಕೇಂದ್ರ ಸರ್ಕಾರದ ಎಎಸ್‌ಜಿ ಆರ್ ಶಂಕರನಾರಾಯಣನ್ ಹೇಳಿದ್ದಾರೆ. ಈ ಕುರುತಂತೆ ಹೆಚ್ಚಿನ ಸಲಹೆಗಳಿಗಾಗಿ ನ್ಯಾಯಾಲಯವು ಮನವಿಯನ್ನು ಮೇ 5 ಕ್ಕೆ ಮುಂದೂಡಿದೆ.

Leave a Reply

error: Content is protected !!
LATEST
BMTC ಚಾಲನಾ ಸಿಬ್ಬಂದಿಗಳ ಮೇಲೆ ಹಲ್ಲೆ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಡಿಪೋ 30ರಲ್ಲಿ ಬಸ್‌ ತೆಗೆಯದೇ ಚಾಲಕರ ಪ್ರತಿ... BMTC: ಸೈಡ್‌ಗಾಗಿ ಹಾರನ್‌ ಮಾಡಿದಕ್ಕೇ ಚಾಲಕ, ನಿರ್ವಾಹಕರಿಗೆ ಹೊಡೆದು ಕಿಡಿಗೇಡಿಗಳು ಪರಾರಿ ಇದು KSRTC ನೌಕರರ ಬೇಡಿಕೆಯೋ ಇಲ್ಲ ಜಂಟಿ ಕ್ರಿಯಾ ಸಮಿತಿ ಬೇಡಿಕೆಯೋ? NWKRTC: ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ, ಹಣವಿದ್ದ ಬ್ಯಾಗ್ ಹಿಂತಿರುಗಿಸಿ ಮಾನವೀಯತೆ ಮೆರೆದ ನಿರ್ವಾಹಕಿ BMTC: 2020 ಜ.1ರಿಂದ 2023 ಮಾ.31ರ ನಡುವೆ ನಿವೃತ್ತರಾದ ನೌಕರರ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಲೆಕ್ಕಾಚಾರ ಮಾಡ... 4ನಿಗಮಗಳ ಅಧಿಕಾರಿಗಳು-ನೌಕರರಿಗೂ ಸರಿಸಮಾನ ವೇತನ ಕೊಡಿ: ಸಾರಿಗೆ ಸಚಿವರು, ಅಧಿಕಾರಿಗಳಿಗೆ KSRTC ಸಿಬ್ಬಂದಿ, ಲೆಕ್ಕ ಪತ್... ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಣೆಗೆ ಅರ್ಜಿ ಆಹ್ವಾನ ಅ.28ರಂದು ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC ‍& KSRTC ಸಂಘದ ಕಾರ್ಯಾಧ್ಯಕ್ಷ ನಂಜುಂಡೇಗೌಡ BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ