NEWSನಮ್ಮರಾಜ್ಯರಾಜಕೀಯ

ಅಲ್ಪಸಂಖ್ಯಾತರು ನಿಮ್ಮ ಜೀತದಾಳುಗಳೇ: ಸಿದ್ದರಾಮಯ್ಯಗೆ ಎಚ್‌ಡಿಕೆ ಪ್ರಶ್ನೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಬಸವಕಲ್ಯಾಣದಲ್ಲಿ ಜೆಡಿಎಸ್ ಪಡೆದ ಮತಗಳು ನಮ್ಮ ಮತಗಳು ಎಂದಿದ್ದೀರಿ. ಇದು ಪ್ರಜ್ಞಾವಂತ ಮತದಾರನಿಗೆ ನೀವು ಮಾಡಿದ ಅವಮಾನ ಅಲ್ಲದೆ ಮತ್ತೇನು? ಅಲ್ಪಸಂಖ್ಯಾತರು ನಿಮ್ಮ ಜೀತದಾಳುಗಳೇ? ಜನಾದೇಶವನ್ನು ಒಪ್ಪಿಕೊಳ್ಳುವ ನಿಸ್ಪೃಹ ಮನಸ್ಸು ನಿಮಗೂ ಇರಬೇಕಲ್ಲವೇ? ಅಲ್ಪಸಂಖ್ಯಾತರು ಮತ್ತು ಜೆಡಿಎಸ್ ಬಗ್ಗೆ ಮಾತನಾಡಲು ನಿಮಗೆ ಯಾವ ನೈತಿಕತೆ ಇದೆ ಎಂದು ಸಿದ್ದರಾಮಯ್ಯನವರನ್ನು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯನವರೇ, ಬಸವ ಕಲ್ಯಾಣದಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿದ್ದಕ್ಕಾಗಿ ಕಾಂಗ್ರೆಸ್ ಸೋತಿದೆ ಎಂದು ಹೇಳಿದ್ದೀರಿ. ನಿಮಗೆ ಅಲ್ಪಸಂಖ್ಯಾತರ ಮೇಲೆ ಕೋಪವೋ? ಜೆಡಿಎಸ್ ಮೇಲೆ ಅಸಮಾಧಾನವೋ? ಅರ್ಥವಾಗುತ್ತಿಲ್ಲ.. ಅಷ್ಟಕ್ಕೂ ನೀವು ಯಾವ ಅಲ್ಪಸಂಖ್ಯಾತ ನಾಯಕರನ್ನೂ ಬೆಳೆಸಿದ ನಿದರ್ಶನ ಇಲ್ಲ ಎಂದು ಸರಣಿ ಟ್ವೀಟ್‌ ಮೂಲಕ ತಿರುಗೇಟು ನೀಡಿದ್ದಾರೆ.

ಬಸವ ಕಲ್ಯಾಣದಲ್ಲಿ ಸೋತಿದ್ದೀರಿ ಸರಿ. ಮಸ್ಕಿಯಲ್ಲೂ ನಿಮ್ಮದೇ ಪಕ್ಷದ ಅಭ್ಯರ್ಥಿಯನ್ನು ಸೋಲಿಸಲು ಬಯಸಿದವರು ನೀವು. ಅಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಲು ನೀವು ಎಷ್ಟು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೀರಿ ಎಂಬುದನ್ನು ಕಾಂಗ್ರೆಸ್ ಸ್ನೇಹಿತರೆ ಕಂಡಿದ್ದಾರೆ ಎಂದು ಹೇಳಿದ್ದಾರೆ.

ಮುಂದಿನ ಮುಖ್ಯಮಂತ್ರಿ ಹುದ್ದೆ ಕನಸು ಕಾಣುತ್ತಿರುವ ನೀವು ಕನಿಷ್ಠ ಪಕ್ಷ ಸ್ವಂತ ಪಕ್ಷಕ್ಕಾದರೂ ಮೋಸ ಮಾಡುವುದನ್ನು ಬಿಡಿ. ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಎಲ್ಲ ಸ್ವಾತಂತ್ರ್ಯವನ್ನು ಹೊಂದಿದೆ ಮತ್ತು ಬರುವ ದಿನಗಳಲ್ಲಿ ಮತ್ತಷ್ಟು ಸಮರ್ಥವಾಗಿ ಜನರ ವಿಶ್ವಾಸ ಗೆಲ್ಲಲಿದೆ ಎಂಬುದು ನಿಮಗೆ ಗೊತ್ತಿರಲಿ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು