ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಬೆಡ್ ಬ್ಲಾಕ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಅವರಲ್ಲಿ ಆರೋಪಿ ನೇತ್ರಾವತಿ ಎಂಬುವರು ಕಾಂಗ್ರೆಸ್ ನಾಯಕರ ಜತೆ ಇರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
ಬೆಂಗಳೂರು ಪೊಲೀಸರು ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ(42) ಮತ್ತು ರೋಹಿತ್(32) ನನ್ನು ಈಗಾಗಲೇ ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಈ ಮಧ್ಯೆ ನೇತ್ರಾವತಿ ಹಲವು ಕಾಂಗ್ರೆಸ್ ನಾಯಕರ ಜತೆ ಇರುವ ಫೋಟೋಗಳು ಈಗ ಹರಿದಾಡುತ್ತಿವೆ. ಇದು ಹಗರಣ ಮಜಲನ್ನೇ ಬದಲಿಸಬಹುದೇ ಎಂಬ ಅನುಮಾನ ಈಗ ಹಲವರಲ್ಲಿ ವ್ಯಕ್ತವಾಗುತ್ತಿದೆ.
ನೇತ್ರಾವತಿ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್, ಜಯನಗರ ಶಾಸಕಿ ಸೌಮ್ಯಾ ರೆಡ್ಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಕಂಡ್ರೆ ಜತೆಗೆ ಇರುವ ಫೋಟೋಗಳು ಹರಿದಾಡುತ್ತಿವೆ. ಜತೆಗೆ ಬಂಧಿತರಿಬ್ಬರು ನೆರೆಮನೆ ನಿವಾಸಿಯಾಗಿದ್ದಾರೆ. ನಾನು ಸಾಮಾಜಿಕ ಕಾರ್ಯಕರ್ತೆ ಎಂದು ಪೊಲೀಸರ ಬಳಿ ನೇತ್ರಾವತಿ ಹೇಳಿದ್ದಾಳೆ.
ಬಿಬಿಎಂಪಿ ವಾರ್ ರೂಮ್‌ನಲ್ಲಿ ಈಕೆ ಹಲವರ ಜತೆ ಸಂಪರ್ಕದಲ್ಲಿರುವುದು ಖಚಿತವಾಗಿದೆ. ಈ ದಂಧೆಯ ಹಿಂದೆ ದೊಡ್ಡ ಜಾಲವೇ ಇರುವುದು ಸಿಸಿಬಿ ಗಮನಕ್ಕೆ ಬಂದಿದೆ. ಈಗ ಪೊಲೀಸರು ಇವರ ಜತೆ ಸಂಪರ್ಕದಲ್ಲಿದ್ದವರ ಪತ್ತೆಗೆ ಮುಂದಾಗುತ್ತಿದ್ದಂತೆ ಹಲವರು ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.
ಸಮಯಕ್ಕೆ ಸರಿಯಾಗಿ ಬೆಡ್, ಆಕ್ಸಿಜನ್, ಚಿಕಿತ್ಸೆ ಸಿಗದೆ ಅದೆಷ್ಟೋ ಕೊರೊನಾ ಸೋಂಕಿತರು ಅಸುನೀಗಿದ್ದಾರೆ. ಆ ಮೃತರ ಮನೆಯವ ಶಾಪ ಇವರಿಗೆ ತಟ್ಟದೆ ಇರದೇ. ಇಂಥ ನೀಚ ಕೃತ್ಯಕ್ಕೆ ಕೈ ಹಾಕಿರುವವರು ತಕ್ಷ ಶಿಕ್ಷೆ ಅನುಭವಿಸಲೇ ಬೇಕು ಎಂಬುವುದು ನಾಡಿನ ಜನರ ನೋವಿನ ನುಡಿಯಾಗಿದೆ.