NEWSರಾಜಕೀಯ

ವದಂತಿ ಹಬ್ಬಿಸಿ ಜನತೆಯ ತಪ್ಪು ದಾರಿಗೆಳೆಯಬೇಡಿ: ಮಾಧ್ಯಮಗಳಿಗೆ ಮೈಸೂರು ಡಿಸಿ ಮನವಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳು ಮೃತಪಟ್ಟ ಘಟನೆ ಬಗ್ಗೆ ಎಲ್ಲರಿಗೂ ನೋವಿದೆ, ಈ ಬಗ್ಗೆ ಸರ್ಕಾರ ತನಿಖೆ ಮಾಡಲು ಆಯೋಗ ನೇಮಿಸಿದ್ದು, ತನಿಖೆ ಮಾಡುತ್ತಿದ್ದಾರೆ. ಸತ್ಯಾಂಶ ಗೊತ್ತಾಗುತ್ತದೆ. ನನ್ನ 10 ವರ್ಷ ಸೇವಾವಧಿಯಲ್ಲಿ ಇಲ್ಲಿಯವರೆಗೆ ಜನತೆಗೆ ವಿರುದ್ಧವಾದ ಕೆಲಸ ಮಾಡಿಲ್ಲ, ಮಾಡುವುದೂ ಇಲ್ಲ. ಎಲ್ಲರ ಜೀವ ಕೂಡ ನಮಗೆ ಮುಖ್ಯ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಭಾವುಕರಾಗಿ ತಿಳಿಸಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮತನಾಡಿದ ಅವರು, ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಹೇಳಿಕೆ ನೀಡಿದ್ದಾರೆ. ಆದರೂ ಮಾಧ್ಯಮಗಳಲ್ಲಿ ಹಲವಾರು ಊಹಾಪೋಹಗಳು ಬರುತ್ತಿವೆ. ವದಂತಿಗಳನ್ನು ಹಬ್ಬಿಸಿ ಜನತೆಯನ್ನು ತಪ್ಪು ದಾರಿಗೆಳೆಯುವುದು ಬೇಡ, ಸರ್ಕಾರ ತನಿಖೆಗೆ ಅಧಿಕಾರಿಗಳನ್ನು ನೇಮಿಸಿದೆ, ತನಿಖೆಯಲ್ಲಿ ಗೊತ್ತಾಗುತ್ತದೆ ಎಂದು ಪ್ರತಿಕ್ರಿಯಿಸಿದ್ದಾರೆ.

ನಾವು ಕೂಡ ಸರ್ಕಾರಕ್ಕೆ ವರದಿ ಕಳುಹಿಸುತ್ತಿದ್ದೇವೆ, ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿದರೆ ಮಾಧ್ಯಮಗಳಲ್ಲಿ ಇದನ್ನು ನೋಡುವ ಮೃತ ರೋಗಿಗಳ ಕುಟುಂಬಸ್ಥರಿಗೆ, ಸಂಬಂಧಿಕರಿಗೆ, ಸಾಮಾನ್ಯ ಜನತೆಗೆ ಯಾವ ರೀತಿ ಭಾವನೆ ಬರುತ್ತದೆ, ಆದುದರಿಂದ ದಯವಿಟ್ಟು ನಿಮ್ಮಷ್ಟಕ್ಕೆ ವರದಿ ಮಾಡಬೇಡಿ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಸಿಂಧೂರಿ ಮನವಿ ಮಾಡಿದರು.

ರೋಗಿಗಳು ಎಲ್ಲಿ ಅಸುನೀಗಿದರೂ ಅದು ನಮಗೆ ನೋವಿನ ಸಂಗತಿಯೇ. ಅದು ನಮ್ಮ ಜಿಲ್ಲೆಯಾಗಿರಲಿ, ಬೇರೆ ಜಿಲ್ಲೆಯಾಗಿರಲಿ ನಮಗೆ ಖಂಡಿತಾ ದುಃಖವಾಗುತ್ತದೆ. ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಆಕ್ಸಿಜನ್ ಸಿಲಿಂಡರ್ ನಾವು ಕಳುಹಿಸಲಿಲ್ಲ ಎಂಬುದು ಸತ್ಯಕ್ಕೆ ದೂರವಾದ ಮಾತು. ಆಕ್ಸಿಜನ್ ಕಳುಹಿಸುವುದು ಸಿಲಿಂಡರ್ ಪೂರೈಸುವವರು ಮತ್ತು ಆಸ್ಪತ್ರೆಗಳ ಮಧ್ಯೆ ನಡೆಯುವ ಪ್ರಕ್ರಿಯೆ.

ಆದರೆ ಈ ಕಷ್ಟ ಕಾಲದಲ್ಲಿ ಜಿಲ್ಲಾಡಳಿತ ಕೆಲಸ ಮಾಡಿ ಚಾಮರಾಜನಗರ ಜಿಲ್ಲೆಗೆ 40 ಸಿಲಿಂಡರ್ ಕಳುಹಿಸಿಕೊಟ್ಟಿದ್ದೆವು. ದಾಖಲಾತಿಯಲ್ಲಿ ರಾತ್ರಿ 11 ಗಂಟೆಗೆ ಕೇಳಿದ್ದಾರೆ, ಮೊದಲೇ ಕೇಳಿದ್ದರೆ ನಾವು ಸಮಯಕ್ಕೆ ಸರಿಯಾಗಿ ಆಕ್ಸಿಜನ್ ಪೂರೈಸಿ ರೋಗಿಗಳ ಜೀವ ಕಾಪಾಡಬಹುದಾಗಿತ್ತು, ಮೊದಲೇ ಸಿಲಿಂಡರ್ ಸಂಗ್ರಹಿಸಿಟ್ಟುಕೊಳ್ಳುವುದು ಜಿಲ್ಲಾಡಳಿತದ ಜವಾಬ್ದಾರಿಯಲ್ಲವೇ ಎಂದು ಕೇಳಿದರು.

ನನ್ನ ಮೇಲೆ ಆರೋಪ ಎಷ್ಟು ಸರಿ?
ಮೈಸೂರಿನಲ್ಲಿ ಆಕ್ಸಿಜನ್ ಉತ್ಪಾದನೆ ಮಾಡುವುದಿಲ್ಲ, ಇಲ್ಲಿ ಘಟಕವಿಲ್ಲ, ನಾವು ಬಳ್ಳಾರಿಯಿಂದ ತರಿಸುವುದು, ಒಂದು ವೇಳೆ ಮೈಸೂರಿನಲ್ಲಿ ಇಂತಹ ಘಟನೆ ಆಗಿದ್ದರೆ ಅಥವಾ ಆದರೆ ನಾವು ಬಳ್ಳಾರಿ ಜಿಲ್ಲಾಧಿಕಾರಿ ಮೇಲೆ ಆರೋಪ ಮಾಡಲು ಆಗುತ್ತದೆಯೇ ಎಂದು ಕೇಳಿದ ಸಿಂಧೂರಿಯವರು, ಇಂತಹ ಕಷ್ಟದ ಪರಿಸ್ಥಿತಿಯಲ್ಲಿ ಎಲ್ಲರೂ ಸಹಕಾರದಿಂದ ಕೆಲಸ ಮಾಡಬೇಕು. ನಮ್ಮ ಜಿಲ್ಲೆಯ ರೋಗಿಗಳಿಗೆ ಸಾಕಷ್ಟು ಆಕ್ಸಿಜನ್ ಪೂರೈಸುವುದು ನಮ್ಮ ಜವಾಬ್ದಾರಿ, ನಾವು ಮಾಡುತ್ತಿದ್ದೇವೆ ಎಂದರು.

ಎಲ್ಲರೂ ಆತಂಕದಲ್ಲಿದ್ದಾರೆ, ಜನ ಭೀತಿಯಿಂದ ಜೀವನ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಆರೋಪ ಮಾಡುತ್ತಾ ಕೂರುವುದು ಸರಿಯಲ್ಲ. ಯಾವ ಜಿಲ್ಲೆಯಲ್ಲಿಯೂ ಆಸ್ಪತ್ರೆಯಿಂದ ಆಸ್ಪತ್ರೆಗೆ ಆಕ್ಸಿಜನ್ ಹೋಗುವುದಿಲ್ಲ. ಉತ್ಪಾದಕರಿಂದ ಆಸ್ಪತ್ರೆಗೆ ಪೂರೈಕೆಯಾಗುತ್ತದೆ. ಆದರೂ ನಮ್ಮ ಅಧಿಕಾರ ವ್ಯಾಪ್ತಿಯಲ್ಲಿ ನಾನು ಚಾಮರಾಜನಗರ ಜಿಲ್ಲೆಗೆ 40 ಸಿಲಿಂಡರ್ ಆಕ್ಸಿಜನ್ ಕಳುಹಿಸಿದ್ದೇನೆ. ಇನ್ನು ಯಾವ ರೀತಿ ನಾನು ಸಹಕಾರ ನೀಡಬೇಕಿತ್ತು. ಆ ರೀತಿ ನಾನು ಕಳುಹಿಸಬಾರದು ಎಂದು ಆದೇಶ ಹೊರಡಿಸಿದ್ದರೆ ಒಂದು ಸಿಲಿಂಡರ್ ಕೂಡ ಹೋಗುತ್ತಿರಲಿಲ್ಲವಲ್ಲವೇ ಎಂದು ಸಿಂಧೂರಿ ಪ್ರಶ್ನಿಸಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು