Breaking NewsNEWSನಮ್ಮಜಿಲ್ಲೆ

ಮೈಸೂರು: ಕಾಂಗ್ರೆಸ್ ಕೇರ್ಸ್ ಆಂಬುಲೆನ್ಸ್‌ಗಳಿಗೆ ಮಾಜಿ ಸಂಸದ ಧ್ರುವನಾರಾಯಣ್ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ರಾಜ್ಯದಲ್ಲಿ ಕೊರೊನಾ ಮಹಾ ಮಾರಿಯಿಂದ ಬಿಗಡಾಯಿಸುತ್ತಿರುವ ಈ ಸಂಕಷ್ಟದ ಸಮಯದಲ್ಲಿ ಆಡಳಿತ ಪಕ್ಷದೊಂದಿಗೆ ಕೈಜೋಡಿಸಲು ಕಾಂಗ್ರೆಸ್ ಆಂಬ್ಯುಲೆನ್ಸ್ ಸೇವೆ ಕಲ್ಪಿಸಿದೆ ಎಂದು , ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಆರ್.ಧ್ರುವನಾರಾಯಣ್ ತಿಳಿಸಿದ್ದಾರೆ.

ಸಾರ್ವಜನಿಕರಿಗೆ ತುರ್ತು ಸಂದರ್ಭದಲ್ಲಿ ನೆರವಾಗುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ `ಕಾಂಗ್ರೆಸ್ ಕೇರ್ಸ್’ನಡಿ ಎರಡು ಆಂಬುಲೆನ್ಸ್‌ ವ್ಯವಸ್ಥೆ ಮಾಡಲಾಗಿದ್ದುಈ ಆಂಬುಲೆನ್ಸ್ ಸೇವೆಗೆ ಬುಧವಾರ ನಗರದ ಕಾಂಗ್ರೆಸ್ ಕಚೇರಿಯ ಮುಂಭಾಗ ಪಕ್ಷದ ಬಾವುಟ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಕಾಂಗ್ರೆಸ್‌ನ ಕೊರೊನಾ ಸಹಾಯವಾಣಿಗೆ ಬರುವ ಕರೆಗಳಿಗೆ ಸ್ಪಂದಿಸಲು ಇವುಗಳನ್ನು ಬಳಸಿಕೊಳ್ಳಲಾಗುತ್ತದೆ. ಇನ್ನೆರಡು ದಿನಗಳಲ್ಲಿ ಚಾಮರಾಜನಗರಕ್ಕೂ ಆಂಬುಲೆನ್ಸ್ ವ್ಯವಸ್ಥೆ ಮಾಡಲಿದ್ದೇವೆ ಎಂದರು.

ಕೇರಳದಲ್ಲಿ ಅಂದಿನಿಂದ ಈಗಿನವರೆಗೂ ಕೊರೊನಾ ನಿರ್ವಹಣೆ ಅದ್ಭುತವಾಗಿದೆ. ಆರೋಗ್ಯ ಮಂತ್ರಿ ಶೈಲಜಾ ಅವರ ಕಾರ್ಯ ಮೆಚ್ಚುವಂತಹದ್ದು. ಅಲ್ಲಿ ಈಗಲೂ ಆಕ್ಸಿಜನ್ ಕೊರತೆ ಇಲ್ಲ. ಆದ್ದರಿಂದಲೇ ಈ ಬಾರಿಯೂ ಅಲ್ಲಿ ಅವರ ಪಕ್ಷ ಜಯಗಳಿಸಿತು. ಆದರೆ ಇಲ್ಲಿನ ರಾಜಕಾರಣಿಗಳು ಚುನಾವಣೆ, ಅಧಿಕಾರದ ಬಗ್ಗೆ ಚಿಂತಿಸುತ್ತಿದ್ದರು. ಕೇರಳದವರ ಕಾರ್ಯವೈಖರಿ ನಮಗೆ ಮಾದರಿಯಾಗಬೇಕು ಎಂದು ಚಾಮರಾಜನಗರದಲ್ಲಿ ಆಕ್ಸಿಜನ್‌ ಸಿಗದೆ ಕೊರೊನಾ ಸೋಂಕಿತ 24 ಮಂದಿ ಮೃತಪಟ್ಟಿದ್ದಕ್ಕೆ ಈ ರೀತಿ ಪ್ರತಿಕ್ರಿಯೆ ನೀಡಿದರು.

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರ್‌ನಾಥ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರಾಧ್ಯಕ್ಷ ಆರ್.ಮೂರ್ತಿ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಹರೀಶ್ ಗೌಡ, ಮುಖಂಡರಾದ ಅಶೋಕ್, ಅರವಿಂದ್, ಶಿವಣ್ಣ, ಕೃಷ್ಣೇಗೌಡ ಮತ್ತಿತರರು ಇದ್ದರು.

Leave a Reply

error: Content is protected !!
LATEST
ಬಿಬಿಎಂಪಿ ಮೈದಾನದ ಗೇಟ್ ಬಿದ್ದು 11 ವರ್ಷದ ಬಾಲಕ ಮೃತ KSRTC ಚಾ.ನಗರ ವಿ.ಕಾರ್ಯಾಗಾರದಿಂದ ಅಕ್ರಮವಾಗಿ ಖಾಸಗಿಯವರಿಗೆ ರವಾನೆಯಾದ ಇಂಜಿನ್‌ ಟ್ರಾಲಿ, ಸ್ಟ್ಯಾಂಡ್‌ ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!!