NEWSನಮ್ಮರಾಜ್ಯ

ಕೊರೊನಾ ರಣಕೇಕೆ: ಹಿಂದಿನ ಎಲ್ಲಾ ದಾಖಲೆಗಳು ಉಡೀಸ್‌- ಇಂದು ಅರ್ಧಲಕ್ಷ ಮಂದಿ ಮುತ್ತಿದ ವೈರಸ್‌, 346 ಜನರು ಬಲಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ರಣಕೇಕೆ ಮುಂದುವರಿದಿದ್ದು, ಅರ್ಧ ಲಕ್ಷ ಬಾರಿಸುವ ಮೂಲಕ ರಾಜ್ಯವನ್ನು ಅದೋಗತಿಗೆ ದೂಡುತ್ತಿದೆ. ಈ ಮೂಲಕ ಮರಣ ಮೃದಂಗವನ್ನು ಬಾರಿಸಿದ್ದು, ಹಿಂದಿನ ಎಲ್ಲಾ ದಾಖಲೆಗಳನ್ನು ಉಡೀಸ್‌ ಮಾಡಿ ಮಹಾಮಾರಿಗೆ ಬುಧವಾರ ಒಂದೇ ದಿನ ಬರೋಬ್ಬರಿ 346 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 16,884ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 50,112 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 17,41,046ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 23,106 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 8,63,380ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 161 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು 26,841 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 12,36,854ಕ್ಕೆ ಏರಿಕೆಯಾಗಿದೆ. ಇನ್ನು 4,87,288 ಸಕ್ರಿಯ ಪ್ರಕರಣಗಳಿವೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು