Vijayapatha – ವಿಜಯಪಥ
Friday, November 1, 2024
CrimeNEWSದೇಶ-ವಿದೇಶ

ಕಲ್ಲುಗಣಿಗಾರಿಕೆ: ಜಿಲೆಟಿನ್ ಸ್ಫೋಟಗೊಂಡು ನಾಲ್ವರು ಕಾರ್ಮಿಕರು ಮೃತ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಆಂಧ್ರಪ್ರದೇಶ: ಆಂಧ್ರಪ್ರದೇಶದ ಕಡಪದ ಕಲ್ಲುಗಣಿಯಲ್ಲಿ ಸಂಭವಿಸಿದ ಸ್ಫೋಟದಿಂದ ನಾಲ್ವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಜಿಲೆಟಿನ್ ಕಡ್ಡಿಗಳನ್ನು ಅನ್ಲೋಡ್ ಮಾಡುವ ವೇಳೆ ಮಾಮಿಲ್ಲಪಲ್ಲೆ ಗ್ರಾಮದ ಸಮೀಪ ಈ ಅವಘಡ ಸಂಭವಿಸಿದೆ.

ಸ್ಪೋಟದಿಂದ ಬಲಿಯಾದವರಲ್ಲಿ ಹೆಚ್ಚಿನವರು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಸ್ಥಳೀಯ ಗ್ರಾಮವಾದ ಪುಲಿವೆಂಡುಲ ಮೂಲದವರು ಎಂದು ಹೇಳಲಾಗುತ್ತಿದೆ.

ಅವಘಡದ ಸುದ್ದಿ ತಿಳಿಯುತ್ತಿದ್ದಂತೆಯೇ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿಯವರು ಕಡಪ ಜಿಲ್ಲೆಯ ಅಧಿಕಾರಿಯಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೆ, ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ತೀವ್ರ ಸಂತಾಪ ಸೂಚಿಸಿದ್ದಾರೆ.

ಇನ್ನು ಅನುಮತಿ ಪಡೆದೇ ಗಣಿಗಾರಿಕೆ ನಡೆಸಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಗಣಿಗಾರಿಕೆಗೆ ಬೇಕಾದ ಜಿಲೆಟಿನ್ ಕಡ್ಡಿಗಳನ್ನು ಬುದ್ವೆಲ್ ನಿಂದ ತಂದು, ಅನ್ಲೋಡ್ ಮಾಡುವ ವೇಳೆ ಸ್ಫೋಟ ಸಂಭವಿಸಿದೆ ಎಂದು ಕಡಪ ಜಿಲ್ಲೆಯ ಪೊಲೀಸ್ ಅಧಿಕಾರಿ ಕೆ.ಎ.ಅನ್ಬುರಾಜನ್ ತಿಳಿಸಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ