Vijayapatha – ವಿಜಯಪಥ
Friday, November 1, 2024
NEWSನಮ್ಮಜಿಲ್ಲೆ

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 1ಲಕ್ಷರೂ. ಪರಿಹಾರ: ಸಚಿವ ಎಸ್‌ಟಿಎಸ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ವಾರ್ಡ್ ಹಾಗೂ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ ವೈಯುಕ್ತಿಕವಾಗಿ 1 ಲಕ್ಷ ರೂ. ನಗದು ವಿತರಣೆ ಮಾಡಲಾಗುವುದು ಎಂದು ಕ್ಷೇತ್ರದ ಶಾಸಕ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಗೌಡ ತಿಳಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕ್ಷೇತ್ರದ ಕೆಂಗೇರಿ ವಾರ್ಡ್ ನಂಬರ್ 159 ಗಣೇಶನ ದೇವಸ್ಥಾನದ ಬಳಿ ಕೋವಿಡ್-19 ಸೋಂಕಿನಿಂದ ಮೃತಪಟ್ಟ ಕುಟುಂಬಗಳಿಗೆ ತಲಾ ಒಂದು ಲಕ್ಷ ರೂ. ಪರಿಹಾರ ಸಹಾಯಧನ ವಿತರಣಾ ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಶ್ರೀಕ್ಷೇತ್ರದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಚಾಲನೆ ನೀಡಿದ ಬಳಿಕ ಮಾತನಾಡಿದ ಸಚಿವರು, ಇಂದಿನಿಂದ ನಿತ್ಯ ಒಂದೊಂದು ವಾರ್ಡ್‌ನಲ್ಲಿಯೂ ಪರಿಹಾರ ಧನ ನೀಡುತ್ತೇವೆ ಎಂದು ವಿವರಿಸಿದರು.

ಇಂದು ಸಾಂಕೇತಿಕವಾಗಿ ಕೆಂಗೇರಿಯಲ್ಲಿ ಹಣ ವಿತರಣೆ ಮಾಡಿದ್ದೇವೆ. ನಾಳೆಯಿಂದ 17 ಪಂಚಾಯಿತಿ ವ್ಯಾಪ್ತಿ ಹಾಗೂ 5 ವಾರ್ಡ್‌ನ ಜನರಿಗೆ ಧನಸಹಾಯ ವಿತರಣೆ ಮಾಡಲಾಗುವುದು. ಕೋವಿಡ್ 19ರ ಸನ್ನಿವೇಶದಲ್ಲಿ ನನ್ನ ಕ್ಷೇತ್ರದ ಜನತೆಯ ಸೇವಕನಾಗಿ ಅವರ ಅವಶ್ಯಕತೆಗಳನ್ನು ಪೂರೈಸುವುದು ನನ್ನ ಕರ್ತವ್ಯ. ಈ ಹಿನ್ನೆಲೆಯಲ್ಲಿ ನನ್ನ ಕ್ಷೇತ್ರದಲ್ಲಿ ಕೋವಿಡ್‌ನಿಂದ ಮೃತಪಟ್ಟ ಕುಟುಂಬದವರಿಗೆ ತಲಾ 1 ಲಕ್ಷ ರೂಪಾಯಿ ಪರಿಹಾರ ಸಹಾಯಧನವನ್ನು ವೈಯುಕ್ತಿಕವಾಗಿ ನೀಡುವ ವ್ಯವಸ್ಥೆ ಮಾಡಿದ್ದೇವೆ ಎಂದರು.

ಬಿಬಿಎಂಪಿ ಮೂಲಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದವರಿಗೆ 25 ಸಾವಿರ ರೂಪಾಯಿ, ಸರ್ಕಾರಿ ಕೋಟಾ ಇಲ್ಲದೆ ಖಾಸಗಿ ಆಸ್ಪತ್ರೆಗೆ ದಾಖಲಿಸುವಂತಹ ಕುಟುಂಬಗಳಿಗೆ ತುರ್ತು ಔಷಧಕ್ಕೋಸ್ಕರ 50 ಸಾವಿರ ರೂಪಾಯಿಯನ್ನು ವೈಯುಕ್ತಿಕವಾಗಿ ನೀಡುತ್ತಿದ್ದೇನೆ. ಇದಲ್ಲದೆ, ಇಡೀ ಕ್ಷೇತ್ರದಲ್ಲಿ ಪಾಸಿಟಿವ್ ಬಂದಿರುವ ಸುಮಾರು 5 ಸಾವಿರ ಕುಟುಂಬದವರ ಮನೆಗಳಿಗೆ ಉಚಿತ ಸ್ಯಾನಿಟೈಸ್ ಮಾಡಲಾಗುತ್ತಿತ್ತು. ಹೋಂ ಐಸೋಲೇಶನ್ ನಲ್ಲಿರುವ ಮನೆಯವರು ಹೊರಗೆ ಸಂಚರಿಸಬಾರದು ಎಂಬ ನಿಟ್ಟಿನಲ್ಲಿ ದಿನಸಿ ಕಿಟ್, ಔಷಧ ಕಿಟ್ ಗಳನ್ನು ಕೊಡುವ ವ್ಯವಸ್ಥೆಯನ್ನೂ ಮಾಡಿದ್ದೇವೆ ಎಂದರು.

ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳು ಮಾತನಾಡಿ, ಎಲ್ಲರೂ ವ್ಯಾಕ್ಸಿನೇಶನ್ ಮಾಡಿಸಿಕೊಳ್ಳಬೇಕು. ಕಾರಣ, ವ್ಯಾಕ್ಸಿನೇಶನ್ ಮಾಡಿಸಿಕೊಂಡವರಿಗೆ ಕೊರೊನಾ ಬಾಧಿಸಿದರೂ ಸಹ ಸಾವು-ನೋವಿನ ಪ್ರಮಾಣ ಕಡಿಮೆಯಾಗುತ್ತದೆ. ಹೀಗಾಗಿ ಎಲ್ಲರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು, ಆಗಾಗ ಸ್ಯಾನಿಟೈಸರ್ ನಿಂದ ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಸಾರ್ವಜನಿಕರಿಗೆ ಕಿವಿಮಾತು ಹೇಳಿದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ