Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯರಾಜಕೀಯ

ಅಂಗಡಿಯಿಂದ ಸಾಮಾನುಗಳನ್ನು ತಲೆಮೇಲೆ ಹೊತ್ತುಕೊಂಡು ಬರಬೇಕೇ ಮುಖ್ಯಮಂತ್ರಿಗಳೇ?: ಸಿದ್ದರಾಮಯ್ಯ ಕಿಡಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ನೂತನ ಲಾಕ್‍ಡೌನ್ ಕುರಿತು ರಾಜ್ಯದಲ್ಲಿ ಈಗಾಗಲೇ ಸಾಕಷ್ಟು ಚರ್ಚೆ ನಡೆಯುತ್ತಿದ್ದು, ಬೆಳಗ್ಗೆ ಅಂಗಡಿ, ಮುಂಗಟ್ಟು ತೆರೆಯಲು ಅವಕಾಶ ನೀಡಿರುವ ಸರ್ಕಾರ ವಾಹನ ಸಂಚಾರ ನಿಷೇಧಿಸಿದೆ. ಖರೀದಿಸಿದ ಮನೆ ಸಾಮಾನುಗಳನ್ನು ಹೇಗೆ ಕೊಂಡೊಯ್ಯಬೇಕು? ಹಳ್ಳಿಗಳಲ್ಲಿ ಅಂಗಡಿಗಳು ದೂರ ಇರುತ್ತವೆ ಅವರು ತಲೆ ಮೇಲೆ ಹೊತ್ತೊಯ್ಯಬೇಕೆ ಎಂಬ ಆಕ್ರೋಶ ಕೂಡ ವ್ಯಕ್ತವಾಗುತ್ತಿದೆ. ಇದೀಗ ವಿಪಕ್ಷದ ನಾಯಕ ಸಿದ್ದರಾಮಯ್ಯ ಸಹ ಕಟುವಾಗಿ ಟೀಕಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕೊರೊನಾ ರೋಗಕ್ಕಿಂತ ಹೆಚ್ಚಾಗಿ ಇಲ್ಲಿನ ರೋಗಗ್ರಸ್ತ ರಾಜ್ಯ ಸರ್ಕಾರದಿಂದ ರಾಜ್ಯದ ಜನತೆ ಬವಣೆ ಪಡುವಂತಾಗಿದೆ. ಸೋಮವಾರದಿಂದ ಜಾರಿಗೆ ಬರಲಿರುವ ಲಾಕ್‌ಡೌನ್ ಗೊಂದಲದ ಗೂಡಾಗಿದ್ದು ಗ್ರಾಮೀಣ ಪ್ರದೇಶದ ಜನತೆ ಇದರ ವಿರುದ್ಧ ದಂಗೆ ಎದ್ದರೂ ಆಶ್ಚರ್ಯ ಇಲ್ಲ ಎಂದು ಸರಣಿ ಟ್ವೀಟ್‌ ಮೂಲಕ ಕಿಡಿಕಾರಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಅಂಗಡಿ-ಮುಂಗಟ್ಟುಗಳು 2-3 ಕಿ.ಮೀ.ದೂರದಲ್ಲಿವೆ. ಅಲ್ಲಿಂದ ಮನೆ ಸಾಮಾನುಗಳನ್ನು ಹಿರಿಯರು, ಅಶಕ್ತರು ಹೊತ್ತುಕೊಂಡು ಬರಬೇಕೇ ಮುಖ್ಯಮಂತ್ರಿಗಳೇ? ಆಯಾಸ-ಪ್ರಯಾಸದಿಂದ ಅವರಿಗೇನಾದರೂ ಆಗಿಬಿಟ್ಟರೆ ಯಾರು ಹೊಣೆ? ಈ ಸಾಮಾನ್ಯ ಜ್ಞಾನವೂ ಆಡಳಿತ ನಡೆಸುವವರಿಗೆ ಬೇಡವೇ?

ಹೊಸ‌ ಲಾಕ್‌ಡೌನ್ ನಿಯಮಾವಳಿ ಪ್ರಕಾರ ಗ್ರಾಮೀಣ ಪ್ರದೇಶದಲ್ಲಿ ಬ್ಯಾಂಕು, ಎಟಿಎಂ ಆಸ್ಪತ್ರೆ ತೆರೆದಿರುತ್ತದೆ. ಆದರೆ ಅಲ್ಲಿಗೆ ಗ್ರಾಹಕರು ಮತ್ತು ಅಸ್ವಸ್ಥರು ವಾಹನ ಬಳಸಲು ನಿಷೇಧ ಇದೆ. ಹೊಟೇಲ್‌ನಲ್ಲಿ ಪಾರ್ಸಲ್‌ಗೆ ಅವಕಾಶ ಇದೆ. ವಾಹನ ಮಾತ್ರ ಬಳಸುವಂತಿಲ್ಲ. ಇದೆಂತಹ ತುಘಲಕ್ ಸರ್ಕಾರ?

ಹೊಸ ಲಾಕ್ ಡೌನ್ ಜಾರಿಗೆ ತರಲು ಹೊರಟಿರುವ ರಾಜ್ಯದ ಆಡಳಿತಗಾರರು ಮತ್ತು ಅಧಿಕಾರಿಗಳು ಮೊದಲು ಬೆಂಗಳೂರಿನ ಹವಾನಿಯಂತ್ರಿತ ಕಚೇರಿಯಿಂದ ಹೊರಬಂದು ಹಳ್ಳಿಗಳಿಗೆ ಭೇಟಿ ನೀಡಿ ಅಲ್ಲಿನ ವಾಸ್ತವ ಸ್ಥಿತಿಯನ್ನು ಅರಿಯಲಿ ಎಂದು ಸಲಹೆ ನೀಡಿದ್ದಾರೆ.

ಕೊರೊನಾ ನಿಯಂತ್ರಿಸಲು ಲಾಕ್ ಡೌನ್ ಅನಿವಾರ್ಯ ಆಗಿರುವುದು ನಿಜ. ಆದರೆ ಸಿಎಂ ಏಕಪಕ್ಷೀಯ ನಿರ್ಧಾರ ಕೈಗೊಳ್ಳದೆ ಜಿಲ್ಲಾಧಿಕಾರಿಗಳಿಂದ ವಾಸ್ತವ ಸ್ಥಿತಿಯ ವರದಿ ಪಡೆಯಬೇಕಾಗಿತ್ತು. ಇದರಿಂದ ಪೊಲೀಸರು ಮತ್ತು ಜನತೆಯ ನಡುವಿನ‌ ಸಂಘರ್ಷವನ್ನು ತಪ್ಪಿಸಿದಂತಾಗುತ್ತಿತ್ತು ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ