NEWSನಮ್ಮರಾಜ್ಯಸಿನಿಪಥ

‘ಜಟಕಾ ಕುದುರೆ ಹತ್ತಿ ಪ್ಯಾಟೆಗೋಗುಮಾ’ ಖ್ಯಾತಿಯ ಚಿತ್ರ ಸಾಹಿತಿ ಶ್ರೀರಂಗ ಇನ್ನಿಲ್ಲ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಿನಿ ಸುದ್ದಿ
ಬೆಂಗಳೂರು: ಕನ್ನಡ ಸಿನಿಮಾರಂಗದ ಹಿರಿಯ ಚಿತ್ರ ಸಾಹಿತಿ ಶ್ರೀರಂಗ (87) ಅವರು ನಿಧನರಾಗಿದ್ದಾರೆ.

ಬೆಂಗಳೂರಿನ ನಾಗರಬಾವಿಯಲ್ಲಿ ವಾಸಿಸುತ್ತಿದ್ದ ಅವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಶ್ರೀರಂಗ ಅವರು ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಒಳಗೆ ಸೇರಿದರೆ ಗುಂಡು ಹುಡುಗಿಯಾಗುವಳು ಗಂಡು ಮಾಲಾಶ್ರೀ ಅಭಿನಯದ ನಂಜುಂಡಿ ಕಲ್ಯಾಣ ಚಿತ್ರದ ಈ ಗೀತೆ ಇಂದಿಗೂ ಸಾಕಷ್ಟು ಜನಪ್ರಿಯ, ಆದರೆ, ಈ ಗೀತೆಯ ಸಾಲುಗಳನ್ನು ಬರೆದ ಚಿತ್ರಸಾಹಿತಿ ಇನ್ನಿಲ್ಲ.

ಜಟಕಾ ಕುದುರೆ ಹತ್ತಿ ಪ್ಯಾಟಗ್ ಗೋಗುಮಾ, ರಂಭೆ ನೀ ವಯ್ಯಾರದ ಗೊಂಬೆ, ಬಾರೆ ಬಾರೆ ಕಲ್ಯಾಣ ಮಂಟಪಕ್ಕೆ ಬಾ, ಸುಮ್ ಸುಮ್ನೆ ಓಳ್ ಬಿಡೋ ಸುಂದರಿ ಸೇರಿದಂತೆ ಸಾವಿರಕ್ಕೂ ಹೆಚ್ಚು ಚಿತ್ರಗೀತೆಗಳನ್ನು, ಕೆಲವು ಚಿತ್ರಗಳಿಗೆ ಸಂಭಾಷಣೆ-ಸಾಹಿತ್ಯವನ್ನು ಬರೆದಿದ್ದರು.

ಕೆಲ ವರ್ಷಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀರಂಗ ಅವರು ನಿನ್ನೆ ಕೊನೆಯುಸಿರೆಳೆದಿದ್ದಾರೆ.

‘ಜಟಕಾ ಕುದುರೆ ಹತ್ತಿ ಪ್ಯಾಟೆಗೋಗುಮಾ’, ಪುನೀತ್ ಅಭಿನಯದ ‘ಅಪ್ಪು’ ಸಿನಿಮಾದ ‘ಬಾರೆ ಬಾರೆ ಕಲ್ಯಾಣ ಮಂಟಪಕೆ ಬಾ’, ಅಭಿ ಸಿನಿಮಾದ ‘ಸುಮ್‌ಸುಮ್ನೇ ಓಡಬೇಡ ಸುಂದರಿ’ ಇನ್ನು ಹಲವು ಭಿನ್ನ ರೀತಿಯ ಹಾಡುಗಳನ್ನು ಶ್ರೀರಂಗ ರಚಿಸಿದ್ದರು. ‘ಭೂ ಲೋಕದಲ್ಲಿ ಯಮರಾಜ’ ಸೇರಿದಂತೆ ಹಲವು ಸಿನಿಮಾಗಳಿಗೆ ಅವರು ಚಿತ್ರಕತೆ, ಸಂಭಾಷಣೆಗಳನ್ನು ಸಹ ಬರೆದಿದ್ದರು.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ