NEWSನಮ್ಮರಾಜ್ಯ

ಕೊರೊನಾ ಆರ್ಭಟ ಕೊನೆಗಾಣಿಸಲು ಸರ್ಕಾರದೊಂದಿಗೆ ಸಹಕರಿಸಿ: ಸಿಎಂ ಬಿಎಸ್‌ವೈ ಮನವಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ತೀವ್ರಗೊಳ್ಳುತ್ತಿದ್ದು, ಅದನ್ನು ಕೊನೆಗಾಣಿಸಲು ಪ್ರತಿಯೊಬ್ಬರೂ ಸರ್ಕಾರದೊಂದಿಗೆ ಸಹಕರಿಸಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಕರೆ ನೀಡಿದ್ದಾರೆ.

ಕೋವಿಡ್ ಸೋಂಕಿನ ಸರಪಳಿಯನ್ನು ಮುರಿಯಲು ಇಂದಿನಿಂದ ಮತ್ತಷ್ಟು ಕಠಿಣ ಕ್ರಮಗಳನ್ನು ವಿಧಿಸಲಾಗಿದೆ. ಎಲ್ಲಾ ಸಂಸದರು ಮತ್ತು ಶಾಸಕರು ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಉಳಿದು, ಉದ್ದೇಶ ಈಡೇರುವ ನಿಟ್ಟಿನಲ್ಲಿ ಕಟ್ಟುನಿಟ್ಟಾಗಿ ನಿಯಮಗಳು ಜಾರಿಯಾಗುವುದನ್ನು ಖಚಿತಪಡಿಸಬೇಕು ಎಂದು ಮನವಿ ಮಾಡಿದ್ದಾರೆ.

ಎಲ್ಲರ ಸಕ್ರಿಯ ಸಹಕಾರವಿಲ್ಲದೆ ಇದು ಯಶಸ್ವಿಯಾಗುವುದಿಲ್ಲ. ಈನಿಟ್ಟಿನಲ್ಲಿ ಏನೇ ಅಡೆತಡೆ, ಸಮಸ್ಯೆಗಳಿದ್ದರೆ, ದಯವಿಟ್ಟು ಅದನ್ನು ಜಿಲ್ಲಾಧಿಕಾರಿಗಳ, ಜಿಲ್ಲಾ ಉಸ್ತುವಾರಿ ಸಚಿವರ ಅಥವಾ ನೇರವಾಗಿ ನನ್ನ ಗಮನಕ್ಕೆ ತನ್ನಿ. ಒಟ್ಟಾಗಿ ನಾವು ಕೊರೊನಾವನ್ನು ಸೋಲಿಸೋಣ. ಸಾರ್ವಜನಿಕರು ಕೂಡ ಸೋಂಕು ನಿಯಂತ್ರಿಸಲು ಸಹಕರಿಸಿ ಎಂದು ಟ್ವೀಟ್‌ ಮೂಲಕ ಮನವಿ ಮಾಡಿದ್ದಾರೆ.

ಕೋವಿಡ್ ಸೋಂಕು ಹರಡುವುದನ್ನು ತಡೆಯಲು ನಾವು 14 ದಿನಗಳ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಪಾಲಿಸೋಣ. ಮಾರ್ಗಸೂಚಿಗಳನ್ನು ತಪ್ಪದೇ ಅನುಸರಿಸಿ, ವೈರಾಣು ಹರಡುವಿಕೆಯನ್ನು ನಿಯಂತ್ರಿಸಲು ಸರ್ಕಾರದೊಂದಿಗೆ ಸಹಕರಿಸಿ ಎಂದು ಸಮಸ್ತ ನಾಗರಿಕರಲ್ಲಿ ಮನವಿ ಮಾಡುತ್ತೇನೆ. ಮನೆಯಲ್ಲೇ ಇರಿ, ಸುರಕ್ಷಿತವಾಗಿರಿ, ನಾವು ಒಟ್ಟಾಗಿ ಕೊರೊನಾವನ್ನು ಹಿಮ್ಮೆಟ್ಟಿಸೋಣ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?