NEWSನಮ್ಮರಾಜ್ಯ

ಜನರಿಗೆ ಆರ್ಥಿಕ ನೆರವು, ದಿನಸಿ ವಸ್ತುಗಳನ್ನು ಸರ್ಕಾರ ಘೋಷಿಸಬೇಕು: ಸಿದ್ದರಾಮಯ್ಯ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ನಿತ್ಯ 50,000 ಪಾಸಿಟಿವ್ ಕೇಸ್ ಗಳು ದಾಖಲಾಗ್ತಿವೆ. ಹೀಗಾಗಿ ಎರಡು ವಾರ ಸಂಪೂರ್ಣ ಲಾಕ್ ಡೌನ್ ಮಾಡಬೇಕು. ಜನರಿಗೆ ಆರ್ಥಿಕ ನೆರವು ಮತ್ತು ಅಗತ್ಯ ದಿನಸಿ ವಸ್ತುಗಳನ್ನು ಸರ್ಕಾರ ಕೂಡಲೇ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಆಂಧ್ರಪ್ರದೇಶ, ಕೇರಳದಲ್ಲಿ ವಿಶೇಷ ನೆರವಿನ ಪ್ಯಾಕೇಜ್ ನೀಡಿದ್ದಾರೆ, ಅದೇ ರೀತಿ ನಮ್ಮ ರಾಜ್ಯದಲ್ಲೂ ಲಾಕ್ ಡೌನ್ ಅವಧಿಯಲ್ಲಿ ದುಡಿಯುವ ವರ್ಗ, ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಕೊರೊನಾ ಸೋಂಕು ಪರೀಕ್ಷೆ ಹೆಚ್ಚಾದರೆ ಸೋಂಕಿತರ ಸಂಖ್ಯೆ ಜಾಸ್ತಿ ಆಗುತ್ತದೆ, ಆಗ ಅವರಿಗೆ ಸೂಕ್ತ ವೈದ್ಯಕೀಯ ಸೌಲಭ್ಯ ಒದಗಿಸಬೇಕಾಗುತ್ತದೆ ಎಂಬ ಕಾರಣಕ್ಕೆ ರಾಜ್ಯ ಸರ್ಕಾರ ಪರೀಕ್ಷೆ ಪ್ರಮಾಣ ಕಡಿಮೆ ಮಾಡಿದೆ. ಇದು ಸರ್ಕಾರವೇ ಜನರನ್ನು ಸಾವಿನ ದವಡೆಗೆ ತಳ್ಳಿದಂತೆ ಎಂದು ಆಕ್ರೋಧ ವ್ಯಕ್ತಪಡಿಸಿದ್ದಾರೆ.

ಹೈಕೋರ್ಟ್, ಸುಪ್ರೀಂ ಕೋರ್ಟ್ ಆದೇಶ ನೀಡಿದರೂ ಈ ವರೆಗೆ ನಮ್ಮ ರಾಜ್ಯಕ್ಕೆ ಅಗತ್ಯ ಪ್ರಮಾಣದ ಆಕ್ಸಿಜನ್ ಅನ್ನು ಕೇಂದ್ರ ಸರ್ಕಾರ ನೀಡುತ್ತಿಲ್ಲ. ಕೇಂದ್ರದ ಮೋದಿ ಸರ್ಕಾರ ರಾಜ್ಯದ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಕಿಡಿಕಾರಿದರು.

ಕೊವಿಡ್ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ವಿಫಲವಾದ ಬಳಿಕ ಕೋರ್ಟ್ ಮಧ್ಯೆ ಪ್ರವೇಶಿಸಿದೆ, ಅಂದರೆ ದೇಶದಲ್ಲಿ ಆಡಳಿತ ಯಂತ್ರ ಕುಸಿದು ಬಿದ್ದಿದೆ ಎಂದರ್ಥ. ಈ ವರೆಗೆ ಸಂಭವಿಸಿರುವ ಸಾವು, ನೋವುಗಳಿಗೆ ಕೇಂದ್ರ ಸರ್ಕಾರವೇ ನೇರಹೊಣೆ.

ನಾನು ನಮ್ಮ ಶಾಸಕರೊಂದಿಗೆ ಮಾತನಾಡಿದ್ದೇನೆ. ಕೆಲವರು ವೈದ್ಯಕೀಯ ನೆರವು ನೀಡುತ್ತಿದ್ದಾರೆ, ಇನ್ನು ಕೆಲವರು ಆಹಾರ ಧಾನ್ಯ, ಆರ್ಥಿಕ ಸಹಾಯ ಮಾಡುತ್ತಿದ್ದಾರೆ. ಸರ್ಕಾರಕ್ಕೆ ನಮ್ಮ ಸಹಕಾರ ಸದಾ ಇರುತ್ತೆ. ಆದರೆ ಆಸ್ಪತ್ರೆ, ಅಂಬುಲೆನ್ಸ್, ಆಕ್ಸಿಜನ್ ಒದಗಿಸುವುದು ಸರ್ಕಾರದ ಜವಾಬ್ದಾರಿ ಎಂದು ಸರಣಿ ಟ್ವೀಟ್‌ ಮೂಲಕ ಎಚ್ಚರಿಸಿದ್ದಾರೆ.

Leave a Reply

error: Content is protected !!
LATEST
ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ