ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಮೇ 24ರವರೆಗೆ ಲಾಕ್‌ಡೌನ್ ಇರುವ ಕಾರಣ ನಗರ ಸ್ಥಳೀಯ ಸಂಸ್ಥೆಗಳ ಲ್ಲಿರುವ (ಬಿಬಿಎಂಪಿ ಹೊರತುಪಡಿಸಿ) ಇಂದಿರಾ ಕ್ಯಾಂಟೀನ್ ಗಳಲ್ಲಿ ಬೆಳಗಿನ ಉಪಾಹಾರ ಮಧ್ಯಾಹ್ನ ಮತ್ತು ರಾತ್ರಿ ಊಟಗಳನ್ನು ಉಚಿತವಾಗಿ ನೀಡುವಂತೆ ಪೌರಾಡಳಿತ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಲಾಕ್ಡೌನ್ ದಿನಗಳಲ್ಲಿ ನಿರಾಶ್ರಿತರಿಗೆ ಆಹಾರ ಪದಾರ್ಥಗಳ ಕೀಟಗಳನ್ನು ನೀಡುವ ಕುರಿತಂತೆ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅಧ್ಯಕ್ಷತೆಯಲ್ಲಿ ಸೋಮವಾರ ವಿಡಿಯೋ ಸಂವಾದ ನಡೆದಿತ್ತು.
ಕೂಲಿ ಕಾರ್ಮಿಕರು, ವಲಸಿಗರು ಮತ್ತು ಇತರ ದುರ್ಬಲ ವರ್ಗದವರಿಗೆ ಅನುಕೂಲಮಾಡಿಕೊಡಲು ಸ್ಥಳೀಯ ಸಂಸ್ಥೆಗಳಲ್ಲಿರುವ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತವಾಗಿ ಆಹಾರ ವಿತರಿಸಲು ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಆಯುಕ್ತರು ಸೂಚನೆ ನೀಡಿದ್ದಾರೆ.
ಆದರೆ ಬಿಎಂಪಿ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್‌ಗಳ ಬಗ್ಗೆ ಸ್ಪಷ್ಟ ಮಾಹಿತಿ ಹೊರ ಬಿದ್ದಿಲ್ಲ.