Vijayapatha – ವಿಜಯಪಥ
Saturday, November 2, 2024
NEWSನಮ್ಮರಾಜ್ಯ

ಮೊಬೈಲ್ ಆಕ್ಸಿಜನ್ ಘಟಕಕ್ಕೆ ನಾಳೆ ಚಾಲನೆ- ಬಸ್‌ನಲ್ಲೇ ಆಕ್ಸಿಜನ್‌ ಸೌಲಭ್ಯ : ಡಿಸಿಎಂ ಲಕ್ಷ್ಮಣ‌ ಸವದಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೋವಿಡ್ ಪಿಡುಗು ಅಧಿಕವಾಗಿ ಸಾರ್ವಜನಿಕರು ಆಕ್ಸಿಜನ್ ಗಾಗಿ ಪರಿತಪಿಸುವುದನ್ನು ತಪ್ಪಿಸಲು ಖಾಸಗಿ ಸ್ವಯಂ ಸೇವಾ ಸಂಸ್ಥೆಯ ಸಹಭಾಗಿತ್ವದಲ್ಲಿ ಬಿಎಂಟಿಸಿ ಪ್ರಾಯೋಗಿಕವಾಗಿ ಮೊಬೈಲ್ ಆಕ್ಸಿಜನ್ ಘಟಕವನ್ನು ಪ್ರಾರಂಭಿಸಲು ಮುಂದಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಬೆಂಗಳೂರಿನಲ್ಲಿ ಗುರುವಾರದಿಂದ ಪ್ರಾರಂಭಿಸಲಾಗುವ ಈ ವಿಶೇಷ ‘ಆಕ್ಸಿಜನ್ ಬಸ್ ಸೌಲಭ್ಯ’ ಯಶಸ್ವಿಯಾದರೆ ಮುಂದೆ ಇನ್ನಷ್ಟು ‘ಆಕ್ಸಿಜನ್ ಬಸ್ ಸೌಲಭ್ಯ’ ನೀಡಲು ಸಾರಿಗೆ ನಿಗಮಗಳಿಂದ ಪ್ರಯತ್ನಿಸಲಾಗುವುದು ಎಂದು ಸುದ್ದಿಗಾರರಿಗೆ ಬುಧವಾರ ತಿಳಿಸಿದರು.

ಪ್ರಸ್ತುತ ಬಹುತೇಕ ಎಲ್ಲಾ ಆಸ್ಪತ್ರೆಗಳಲ್ಲೂ ಕೋವಿಡ್ ರೋಗಿಗಳ ದಟ್ಟಣೆ ಹೆಚ್ಚಾಗಿದೆ. ಇದರಿಂದಾಗಿ ಹೊಸ ರೋಗಿಗಳು ಆಸ್ಪತ್ರೆಗೆ ಬಂದಾಗ, ಆಸ್ಪತ್ರೆಯಲ್ಲಿ ಆಕ್ಸಿಜನ್ ನೀಡುವುದು ವಿಳಂಬವಾಗಿ ತೀವ್ರ ತೊಂದರೆಯಾಗುತ್ತಿದೆ. ಇದನ್ನು ತಪ್ಪಿಸುವ ಉದ್ದೇಶದಿಂದ ಬಸ್ಸಿನಲ್ಲಿಯೇ ತುರ್ತು ಆಕ್ಸಿಜನ್ ಸೌಲಭ್ಯ ಒದಗಿಸಲು ಈ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.

ಆಕ್ಸಿಜನ್ ಪೂರೈಸುವ ಈ ವಿಶೇಷ ಬಸ್ಸನ್ನು ಸರ್ಕಾರಿ ಆಸ್ಪತ್ರೆಯ (ಕೆ.ಸಿ. ಜನರಲ್ ಆಸ್ಪತ್ರೆ ಅಥವಾ ವಿಕ್ಟೋರಿಯಾ ಆಸ್ಪತ್ರೆ) ಆವರಣದಲ್ಲಿ ನಿಲ್ಲಿಸಲಾಗುವುದು. ಹೊರಗಿನಿಂದ ಕೋವಿಡ್ ಪೀಡಿತರು ಬಂದಾಗ ತಕ್ಷಣಕ್ಕೆ ಆಸ್ಪತ್ರೆಯ ಒಳಗೆ ಆಕ್ಸಿಜನ್ ಸಿಗದಿದ್ದರೆ ಆತಂಕ ಪಡದೆ, ಈ ಆಕ್ಸಿಜನ್ ಮೊಬೈಲ್ ಬಸ್ಸಿನಲ್ಲಿಯೇ ತುರ್ತಾಗಿ ವಿಶ್ರಮಿಸಿ ಎಂದು ತಿಳಿಸಿದರು.

ಅಗತ್ಯ ಆಕ್ಸಿಜನ್ ಪಡೆದುಕೊಳ್ಳಲು ಸಾಧ್ಯವಾಗುವಂತೆ ವೈದ್ಯಕೀಯ ಉಪಕರಣಗಳನ್ನು ಇದರಲ್ಲಿ ಅಳವಡಿಸಲಾಗಿದೆ. ಸದ್ಯಕ್ಕೆ ಪ್ರಾಯೋಗಿಕವಾಗಿ ಒಂದು ಬಿ.ಎಂ.ಟಿ.ಸಿ. ಬಸ್ ಅನ್ನು ಇದಕ್ಕಾಗಿ ಒದಗಿಸಲಾಗಿದೆ. ಫೌಂಡೇಶನ್ ಇಂಡಿಯಾ ಎಂಬ ಸ್ವಯಂಸೇವಾ ಸಂಸ್ಥೆಯವರು ಈ ಬಸ್ಸಿನಲ್ಲಿ ಆಕ್ಸಿಜನ್ ಸರಬರಾಜು ಮಾಡಿ ಸೇವೆ ನೀಡಲು ಎಲ್ಲಾ ಅಗತ್ಯ ಉಪಕರಣಗಳನ್ನುಅಳವಡಿಸುತಿದ್ದಾರೆ ಏಕಕಾಲಕ್ಕೆ ಒಟ್ಟು ಆರು ಮಂದಿ ರೋಗಿಗಳಿಗೆ ಈ ಬಸ್ಸಿನಲ್ಲಿ ಆಕ್ಸಿಜನ್ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಕೋವಿಡ್ ನಂತಹ ಅಪಾಯಕಾರಿ ರೋಗದಿಂದ ತತ್ತರಿಸುತ್ತಾ ಆಕ್ಸಿಜನ್ ಗಾಗಿ ಪ್ರಯಾಸ ಪಡುವವರಿಗೆ ಇದು ಸಂಜೀವಿನಿ ಆಗಬಲ್ಲದು ಎಂದು ಅಭಿಪ್ರಾಯಪಟ್ಟರು.

ಚಾಲಕರು ಮತ್ತು ಸಿಬ್ಬಂದಿಗಳಿಗೆ ಸೋಂಕು ಹರಡದಂತೆ ವಿಶೇಷ ವಿನ್ಯಾಸ ಮಾಡಲಾಗಿದ್ದು, ‘ಆಕ್ಸಿಜನ್ ಆನ್ ವ್ಹೀಲ್ಸ್’ ಬಸ್ಸನ್ನು ಸಜ್ಜುಗೊಳಿಸಲಾಗಿದೆಯಲ್ಲದೇ, ಸ್ಯಾನಿಟೈಸರ್, ಮಾಸ್ಕ್‌ಗಳನ್ನು ಇದರಲ್ಲಿ ಒದಗಿಸಲಾಗುವುದು. ಪ್ರತಿ ರೋಗಿಗಳೂ ಸಾಮಾನ್ಯವಾಗಿ 2ರಿಂದ 4 ಗಂಟೆಯ ಅವಧಿಯಲ್ಲಿ ಈ ಸೌಲಭ್ಯದಿಂದ ತಮಗೆ ಬೇಕಾದ ಅಗತ್ಯ ಪ್ರಮಾಣದ ಆಕ್ಸಿಜನ್ ಪಡೆದುಕೊಳ್ಳಬಹುದಾಗಿದೆ ಎಂದರು.

ಈ ರೀತಿಯ ಮೊಬೈಲ್ ಆಕ್ಸಿಜನ್ ಬಸ್ ಪ್ರಯೋಗವು ಇಡೀ ದೇಶದಲ್ಲಿಯೇ ಒಂದು ವಿನೂತನ ಯತ್ನವಾಗಿದೆ. ಇದನ್ನು ಸಾಕಾರಗೊಳಿಸುವಲ್ಲಿ ಶ್ರಮಿಸಿದ ಫೌಂಡೇಶನ್ ಇಂಡಿಯಾ ಸಂಸ್ಥೆಯ ಸಂಜಯ್ ಗುಪ್ತ ಅವರಿಗೆ ಕೃತಜ್ಞತೆಗಳು ಎಂದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ