Vijayapatha – ವಿಜಯಪಥ
Friday, November 1, 2024
Breaking NewsNEWSನಮ್ಮರಾಜ್ಯ

ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯ ಅಡಿ ಕೊರೊನಾಗೆ ಉಚಿತ ಚಿಕಿತ್ಸೆ ನೀಡಬೇಕು: ಎಚ್‌ಡಿಕೆ ಆಗ್ರಹ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯ ಅಡಿಯಲ್ಲಿ ನಾಗರಿಕರಿಗೆ ಮಹಾಮಾರಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯಲು ಇರುವ ನಿರ್ಬಂಧಗಳನ್ನು ಸಡಿಲಗೊಳಿಸಿ ಕೇಂದ್ರ ಸರ್ಕಾರ ತಕ್ಷಣವೇ ಆದೇಶ ಹೊರಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್‌ ರಾಜ್ಯ ವರಿಷ್ಠ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಆಯುಷ್ಮಾನ್ ಭಾರತ ಯೋಜನೆ ಅಡಿ ಕೊರೊನಾ ಸೋಂಕಿತರು ಉಚಿತವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರ ನಿರ್ಬಂಧಿಸಿರುವ 5 ಲಕ್ಷ ರೂಪಾಯಿ ವ್ಯಾಪ್ತಿಯಲ್ಲಿ ಚಿಕಿತ್ಸೆ ಪಡೆಯಲು ಎಡರು ತೊಡರುಗಳಿವೆ. ಮಹಾಮಾರಿ ಕೊರೊನಾ ದೇಶವನ್ನು ನಲುಗಿಸುತ್ತಿರುವ ಈ ದುರಿತ ಕಾಲದಲ್ಲಿ ಕೇಂದ್ರ ಸರ್ಕಾರ ಔದಾರ್ಯ ಪ್ರದರ್ಶಿಸಬೇಕಾದ ತುರ್ತು ಅಗತ್ಯವಿದೆ ಎಂದು ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಬಿಪಿಎಲ್ ಕಾರ್ಡುದಾರರು ಆಯುಷ್ಮಾನ್ ಭಾರತ ಯೋಜನೆ ಅಡಿ 5 ಲಕ್ಷ ರೂಪಾಯಿಗಳವರೆಗೆ ಮಾರಣಾಂತಿಕ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ. ಎಪಿಎಲ್ ಕಾರ್ಡ್ ದಾರರಿಗೆ ಗರಿಷ್ಠ 5 ಲಕ್ಷ ರೂಪಾಯಿಗಳವರೆಗೆ ಶೇಕಡ 30ರಷ್ಟು ಚಿಕಿತ್ಸಾ ವೆಚ್ಚದಲ್ಲಿ ರಿಯಾಯಿತಿ ದಕ್ಕಲಿದೆ ಎಂದು ನೆನಪಿಸಿದ್ದಾರೆ.

ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಸರಾಗವಾಗಿ ಕೊರೊನಾ ಉಚಿತ ಚಿಕಿತ್ಸೆ ಕೊಡುವುದಿಲ್ಲವಾದರೆ ಈ ಯೋಜನೆ ಮತ್ತಿನ್ಯಾವ ಪುರುಷಾರ್ಥಕ್ಕೆ? ಕೇಂದ್ರ ಸರ್ಕಾರ ತಕ್ಷಣ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ತುರ್ತು ಅಗತ್ಯವಿದೆ. ದೇಶದ ಬಹುಸಂಖ್ಯಾತರ ಆಗ್ರಹ ಕೂಡ ಇದೇ ಆಗಿದೆ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ